ETV Bharat / state

ಪಿಎಸ್‌ಐ ಹಗರಣ: ಆರ್.ಡಿ.ಪಾಟೀಲ್ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ - ಸರ್ವೋಚ್ಚ ನ್ಯಾಯಾಲಯ

ಪಿಎಸ್‌ಐ ಹಗರಣದ ಆರೋಪಿ ಆರ್ ಡಿ ಪಾಟೀಲ್ ವಿರುದ್ಧ ವಿವಿಧೆಡೆ ದಾಖಲಾಗಿರುವ 11 ಪ್ರಕರಣಗಳನ್ನು ಒಟ್ಟಾಗಿಸಿ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್​ ಆದೇಶಿಸಿದೆ.

ಆರ್ ಡಿ ಪಾಟೀಲ್
ಆರ್ ಡಿ ಪಾಟೀಲ್
author img

By

Published : Apr 18, 2023, 11:01 PM IST

ಬೆಂಗಳೂರು: ಪೊಲೀಸ್ ಸಬ್ ಇನ್​ಸ್ಪೆಕ್ಟರ್​ (ಪಿಎಸ್‌ಐ) ನೇಮಕಾತಿ ಹಗರಣದ ಪ್ರಮುಖ ಆರೋಪಿ ಹಾಗೂ ಅಫಜಲಪುರ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಯಾಗಿರುವ ರುದ್ರಗೌಡ ಪಾಟೀಲ್ ಅಲಿಯಾಸ್ ಆರ್ ಡಿ ಪಾಟೀಲ್ ವಿರುದ್ಧ ವಿವಿದೆಡೆ ದಾಖಲಾಗಿರುವ 11 ಪ್ರಕರಣಗಳನ್ನು ಒಟ್ಟಾಗಿಸಿ ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಅಲ್ಲದೇ, ಎಲ್ಲ ಪ್ರಕರಣಗಳ ತನಿಖೆಗೆ ಮಧ್ಯಂತರ ತಡೆ ನೀಡಿದ್ದು, ಅರ್ಜಿದಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ನಿರ್ದೇಶಿಸಿದೆ. ಕಲಬುರ್ಗಿ, ಬೆಂಗಳೂರು, ಧಾರವಾಡ ಮತ್ತು ತುಮಕೂರು ಸೇರಿದಂತೆ ವಿವಿಧೆಡೆ ದಾಖಲಾಗಿರುವ 11 ಪ್ರಕರಣಗಳನ್ನು ಒಟ್ಟಾಗಿಸಿ ವಿಚಾರಣೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿ ಮತ್ತು ಈ ಎಲ್ಲಾ ಪ್ರಕರಣಗಳಲ್ಲೂ ತಡೆ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ರಾಚಯ್ಯ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ಅರ್ಜಿದಾರರ ವಿರುದ್ಧ ಕಲಬುರ್ಗಿ ವ್ಯಾಪ್ತಿಯಲ್ಲಿ ಎಂಟು ಪ್ರಕರಣ ದಾಖಲಿಸಲಾಗಿದೆ. ಉಳಿದ ಮೂರು ಪ್ರಕರಣಗಳು ಬೇರೆ ಜಿಲ್ಲೆಗಳ ಠಾಣೆಗಳಲ್ಲಿ ದಾಖಲಿಸಲಾಗಿದೆ. ಇದೇ ಆರೋಪದಲ್ಲಿ ಮತ್ತೊಂದು ನ್ಯಾಯಾಪೀಠ ಮಧ್ಯಂತರ ಆದೇಶ ಮಾಡಿದೆ. ಅದೇ ರೀತಿ ಹಾಲಿ ಪ್ರಕರಣದಲ್ಲಿ ಈ ಆದೇಶ ನೀಡಲಾಗುತ್ತಿದೆ ಎಂದು ನ್ಯಾಯಪೀಠ ತಿಳಿಸಿದೆ. ಜತೆಗೆ, ಎಲ್ಲ ಪ್ರಕರಣಗಳಲ್ಲಿಯೂ ಮುಂದಿನ ವಿಚಾರಣೆವರೆಗೂ ತಡೆ ನೀಡಿ ವಿಚಾರಣೆಯನ್ನು ಮೇ 30 ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ: ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ ಚೌಕ್ ಬಜಾರ್ ಠಾಣೆಯಲ್ಲಿ ದಾಖಲಾಗಿರುವ ಪ್ರಧಾನ ಪ್ರಕರಣದಲ್ಲಿ ಅರ್ಜಿದಾರ ಆರ್ ಡಿ ಪಾಟೀಲ್ ಅವರನ್ನು 14ನೇ ಆರೋಪಿಯನ್ನಾಗಿಸಲಾಗಿದೆ. ಅವರ ವಿರುದ್ಧ 11 ಪ್ರಕರಣಗಳು ಬಾಕಿ ಇದ್ದು, ಈ ಪೈಕಿ ಎಂಟು ಕಲಬುರ್ಗಿಯ ವಿವಿಧ ಠಾಣೆಗಳಲ್ಲಿ, ಧಾರವಾಡ, ಬೆಂಗಳೂರು ಮತ್ತು ತುಮಕೂರಿನ ಬೇರೆ ಬೇರೆ ಠಾಣೆಗಳಲ್ಲಿ ತಲಾ ಒಂದೊಂದು ಪ್ರಕರಣ ದಾಖಲಿಸಲಾಗಿದೆ.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಈ ಹಿಂದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಆರ್ ಡಿ ಪಾಟೀಲ್ ಅವರು ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಒಟ್ಟಿಗೆ ಸೇರಿಸಿ ವಿಚಾರಣೆ ನಡೆಸಲು ಕೋರಿದ್ದರು. ಈ ಪ್ರಕರಣ ಬಾಕಿ ಇರುವಾಗ ಅರ್ಜಿದಾರರ ಪರವಾಗಿ ಮಧ್ಯಂತರ ಆದೇಶವಾಯಿತು. ಅದಾಗ್ಯೂ, 2022ರ ಸೆಪ್ಟೆಂಬರ್​ 27ರಂದು ಇದೇ ನ್ಯಾಯಾಲಯ ಮತ್ತೊಂದು ಪೀಠವು ಎಲ್ಲಾ ಪ್ರಕರಣಗಳನ್ನು ಒಟ್ಟಾಗಿ ವಿಚಾರಣೆ ನಡೆಸಲು ಕೋರಿ ಸಂಬಂಧಿತ ಜಿಲ್ಲಾ ಅಥವಾ ವಿಚಾರಣಾಧೀನ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಆದೇಶ ಮಾಡಿತ್ತು.

ಇದನ್ನು ಪ್ರಶ್ನಿಸಿ ಆರ್ ಡಿ ಪಾಟೀಲ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸರ್ವೋಚ್ಚ ನ್ಯಾಯಾಲಯವು ವಿಭಿನ್ನ ಜಿಲ್ಲಾ ನ್ಯಾಯಾಲಯದ ವ್ಯಾಪ್ತಿಯಲ್ಲಿರುವ ಎಲ್ಲಾ ಪ್ರಕರಣಗಳನ್ನು ಒಟ್ಟಾಗಿಸಿ ವಿಚಾರಣೆ ನಡೆಸಲು ಆದೇಶಿಸುವ ಅಧಿಕಾರ ಜಿಲ್ಲಾ ನ್ಯಾಯಾಲಯಕ್ಕೆ ಇರುವುದಿಲ್ಲ. ಇದನ್ನು ಹೈಕೋರ್ಟ್ ಮಾಡಬೇಕು ಎಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ವಿಭಿನ್ನ ವ್ಯಾಪ್ತಿಯಲ್ಲಿರುವ ಎಲ್ಲಾ ಪ್ರಕರಣಗಳನ್ನು ಒಟ್ಟಾಗಿಸಲು ಆದೇಶಿಸುವಂತೆ ಕೋರಿ ಪಾಟೀಲ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ : PSI Scam: ಆರ್.ಡಿ ಪಾಟೀಲ್ ನ್ಯಾಯಾಲಯಕ್ಕೆ ಶರಣು, 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.