ETV Bharat / state

ಅರಣ್ಯ ಪ್ರದೇಶದಲ್ಲಿ ರೈಲಿನ ವೇಗ ತಗ್ಗಿಸುವ ಕುರಿತು ಆಕ್ಷೇಪಣೆ ಸಲ್ಲಿಸಲು ಅರಣ್ಯ ಇಲಾಖೆಗೆ ಹೈಕೋರ್ಟ್ ಸೂಚನೆ

ವನ್ಯ ಜೀವಿಗಳಿಗೆ ತೊಂದರೆಯಾಗುವುದನ್ನು ತಡೆಯಲು ರೈಲುಗಳ ವೇಗ ಕಡಿಮೆ ಮಾಡುವಂತೆ ಸೂಚನೆ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಆಕ್ಷೇಪಣೆ ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

high-court-issued-a-notice-to-the-forest-department
ಅರಣ್ಯ ಪ್ರದೇಶದಲ್ಲಿ ರೈಲಿನ ವೇಗ ತಗ್ಗಿಸುವ ಕುರಿತು ಆಕ್ಷೇಪಣೆ ಸಲ್ಲಿಸಲು ಅರಣ್ಯ ಇಲಾಖೆಗೆ ಸೂಚನೆ ನೀಡಿದ ಹೈಕೋರ್ಟ್
author img

By

Published : Mar 21, 2023, 5:22 PM IST

ಬೆಂಗಳೂರು: ಹೊಸಪೇಟೆ-ವಾಸ್ಕೊ ಹಾಗೂ ಲೋಂಡ-ಮಿರ್ಜಾ ರೈಲ್ವೆ ಮಾರ್ಗವಿರುವ ದಟ್ಟ ಅರಣ್ಯ ಪ್ರದೇಶಗಳಲ್ಲಿ ವನ್ಯ ಜೀವಿಗಳಿಗೆ ತೊಂದರೆಯಾಗುವುದನ್ನು ತಡೆಯಲು ರೈಲುಗಳ ವೇಗ ಕಡಿಮೆ ಮಾಡುವಂತೆ ಸೂಚನೆ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಆಕ್ಷೇಪಣೆ ಸಲ್ಲಿಸುವಂತೆ ಅರಣ್ಯ ಇಲಾಖೆಗೆ ನಿರ್ದೇಶನ ನೀಡಿದೆ.

ಈ ಸಂಬಂಧ ಗಿರಿಧರ ಕುಲಕರ್ಣಿ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ ಎಸ್.ಕಿಣಗಿ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಅಲ್ಲದೆ, ಬೆಳಗಾವಿ, ಹಳಿಯಾಳ ಮತ್ತು ಧಾರವಾಡ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರು ಪ್ರಕರಣ ಸಂಬಂಧ ಮುಂದಿನ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ.

ವನ್ಯಜೀವಿಗಳನ್ನು ರಕ್ಷಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಇದು ಕೇವಲ ಅಸ್ಸಾಂ, ಕರ್ನಾಟಕ ಮಾತ್ರವಲ್ಲದೇ ಇಡೀ ದೇಶಕ್ಕೆ ಅನ್ವಯವಾಗಲಿದೆ. ಅಲ್ಲದೆ, ಅರಣ್ಯದ ಮೂಲಕ ಸಂಚರಿಸುವ ರೈಲುಗಳ ವೇಗದ ಮಿತಿ ಕಡಿತಗೊಳಿಸುವಂತೆ ಸುಪ್ರೀಂಕೋರ್ಟ್ ರೈಲ್ವೆ ಇಲಾಖೆಗೆ ನಿರ್ದೇಶನ ನೀಡಿದೆ. ಈ ಆದೇಶವನ್ನು ಅನುಸರಿಸದಿದ್ದಲ್ಲಿ ತಪ್ಪಿತಸ್ಥ ಲೋಕೋ ಪೈಲೆಟ್‌ಗಳು ಮತ್ತು ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು.

ಅರ್ಜಿದಾರರ ಕೋರಿಕೆ ಏನು ? : 2014 ರಿಂದ ಈವರೆಗೆ ಲಭ್ಯವಿರುವ ಮಾಹಿತಿಯಂತೆ ಬೆಳಗಾವಿ, ಧಾರವಾಡ, ದಾಂಡೇಲಿ ಹಾಗೂ ಹಳಿಯಾಳದ ಅರಣ್ಯ ಪ್ರದೇಶಗಳಲ್ಲಿ ರೈಲುಗಳು ಢಿಕ್ಕಿ ಹೊಡೆದ ಪರಿಣಾಮ 60ಕ್ಕೂ ಅಧಿಕ ಪ್ರಾಣಿಗಳು ಸಾವನ್ನಪ್ಪಿವೆ. ಇದರಲ್ಲಿ 2 ಆನೆ, 49 ಕಾಡುಕೋಣ ಸೇರಿ ಕರಡಿ, ಕಾಡುನಾಯಿ, ಕಾಡುಹಂದಿಗಳು, ಜಿಂಕೆಗಳು ಮೃತಪಟ್ಟಿವೆ. ರೈಲುಗಳು ವೇಗವಾಗಿ ಸಂಚರಿಸುವುದೇ ಈ ಅಪಘಾತಗಳಿಗೆ ಕಾರಣವಾಗಿದೆ.

2013ರಲ್ಲಿ ಸುಪ್ರೀಂ ಕೋರ್ಟ್ ದೇಶದ ಎಲ್ಲ ದಟ್ಟಾರಣ್ಯಗಳಲ್ಲಿ ರೈಲುಗಳ ವೇಗವನ್ನು ಕಡಿತಗೊಳಿಸಬೇಕು ಎಂದು ರೈಲ್ವೆ ಇಲಾಖೆಗೆ ಆದೇಶ ನೀಡಿದ್ದು, ವೇಗ ಕಡಿಮೆ ಮಾಡದಿದ್ದರೆ ಚಾಲಕರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆದೇಶಿಸಿದೆ. ಆದರೆ ಆದೇಶ ಪಾಲನೆಯಾಗಿಲ್ಲ.

ಹೊಸಪೇಟೆ-ವಾಸ್ಕೋ ಹಾಗೂ ಲೋಂಡಾ-ಮೀರಜ್ ಮಾರ್ಗದಲ್ಲಿ ರೈಲು ಡಿಕ್ಕಿ ಹೊಡೆದು ಪ್ರಾಣಿಗಳು ಸಾವನ್ನಪ್ಪದಂತೆ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ರೈಲ್ವೆ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ. ಈ ಮೂಲಕ ಅರಣ್ಯ ಇಲಾಖೆ ವನ್ಯ ಜೀವಿಗಳನ್ನು ಸಂರಕ್ಷಿಸಬೇಕೆನ್ನುವ ಸಂವಿಧಾನದ ವಿಧಿ 48 (ಎ) ಹೇಳಿರುವ ಮೂಲಭೂತ ಕರ್ತವ್ಯವನ್ನು ಉಲ್ಲಂಘಿಸಿದೆ.

ವನ್ಯ ಜೀವಿಗಳಿಗೆ ಹಾನಿಯಾಗಬಾರದೆಂದೇ ಬೆಳಗಾವಿ-ಧಾರವಾಡ ಜಿಲ್ಲೆಗಳ ನಡುವಿನ ರೈಲು ಮಾರ್ಗಕ್ಕೆ ಪರ್ಯಾಯವಾಗಿ ಕಿತ್ತೂರು ಮೂಲಕ ಹಾದು ಹೋಗುವ ಮಾರ್ಗವನ್ನು ರೂಪಿಸಲಾಗಿದೆ. ಅಂತೆಯೇ ಹೊಸಪೇಟೆ-ವಾಸ್ಕೋ ಮತ್ತು ಲೋಂಡಾ-ಮೀರಜ್ ಮಾರ್ಗಗಳಿಗೂ ಪರ್ಯಾಯ ಮಾರ್ಗ ರೂಪಿಸಲು ಕ್ರಮ ಕೈಗೊಳ್ಳಬೇಕು ಎಂದು ಕೋರಿರುವ ಅರ್ಜಿದಾರರು ಈ ಬಗ್ಗೆ ರೈಲ್ವೆ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ: ಫೈಟರ್ ರವಿ ದಾಖಲಿಸಿರುವ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಅಲೋಕ್ ಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.