ETV Bharat / state

ಬೆಂಗಳೂರು ವಿವಿ ಪಿಹೆಚ್​ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ಆರೋಪ: ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಬೆಂಗಳೂರು ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ಪ್ರವೇಶಕ್ಕೆ ನಡೆಸಿರುವ ಪರೀಕ್ಷೆ ರದ್ದುಪಡಿಸಲು ಮತ್ತು ಕೌನ್ಸೆಲಿಂಗ್‌ ಪ್ರಕ್ರಿಯೆ ತಡೆಹಿಡಿಯಲು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ವಿವಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

high-court-issued-notice-to-bangalore-university-for-irregularity-in-phd-entrance-exam
ಬೆಂಗಳೂರು ವಿವಿ ಪಿಹೆಚ್​ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ: ನೋಟಿಸ್ ಜಾರಿ ಮಾಡಿದ ಹೈಕೋರ್ಟ್
author img

By ETV Bharat Karnataka Team

Published : Sep 25, 2023, 8:08 PM IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರವೇಶಕ್ಕೆ ನಡೆಸಿರುವ ಪರೀಕ್ಷೆ ರದ್ದುಪಡಿಸಲು ಮತ್ತು ಕೌನ್ಸೆಲಿಂಗ್‌ ಪ್ರಕ್ರಿಯೆ ತಡೆಹಿಡಿಯಲು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಬೆಂಗಳೂರು ವಿವಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಪಿಹೆಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಎಸ್‌. ಆದಿ ಮಂಜುನಾಥ್‌ ಸೇರಿದಂತೆ 17 ಮಂದಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್‌ ಕಿಣಗಿ ಅವರ ಪೀಠ ಈ ಆದೇಶ ಮಾಡಿದೆ.

ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಬೆಂಗಳೂರು ವಿಶ್ವದ್ಯಾಲಯದ ಕುಲಾಧಿಪತಿ, ಕುಲಪತಿ, ಸಹ ಕುಲಾಧಿಪತಿ, ಆಡಳಿತ ಮತ್ತು ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್‌ಗಳು ಸೇರಿದಂತೆ 31 ಮಂದಿ ಪ್ರತಿವಾದಿಗಳಿಗೆ ನ್ಯಾಯಪೀಠ ನೋಟಿಸ್‌ ಜಾರಿ ಮಾಡಿದೆ. ಅಲ್ಲದೆ, ಪಿಎಚ್‌ಡಿ ಪ್ರವೇಶಾತಿ ಮತ್ತು ಕೌನ್ಸೆಲಿಂಗ್‌ ಪ್ರಕ್ರಿಯೆ ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯವು 2023ರ ಜೂನ್‌ನಲ್ಲಿ ಪಿಎಚ್‌ಡಿ ಪದವಿ ಪ್ರವೇಶಕ್ಕೆ ಪರೀಕ್ಷೆ ನಡೆಸಿದೆ. ನಗರದ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಯಾಗಲಿ ಅಥವಾ ಪ್ರವೇಶ ಪತ್ರವನ್ನು ಪರಿಶೀಲಿಸದೆ ಪರೀಕ್ಷೆಯನ್ನು ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಕೆಲವು ವಿದ್ಯಾರ್ಥಿಗಳು ಮೊಬೈಲ್‌ಗಳನ್ನು ತೆಗೆದುಕೊಂಡು ಹೋಗಿದ್ದು, ಮೊಬೈಲ್ ಮೂಲಕ ರಾಜಾರೋಷವಾಗಿ ಉತ್ತರಗಳನ್ನು ಹುಡುಕಿಕೊಂಡು ಬರೆದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಜೊತೆಗೆ, ಸದ್ಯ ನಡೆದಿರುವ ಪ್ರವೇಶ ಪರೀಕ್ಷೆಯನ್ನು ರದ್ದುಪಡಿಸಬೇಕು. ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ತನಿಖೆಗೆ ಆದೇಶಿಸಬೇಕು. ಮರು ಪರೀಕ್ಷೆ ನಡೆಸುವಂತೆ ಬೆಂಗಳೂರು ವಿವಿಗೆ ನಿರ್ದೇಶಿಸಬೇಕು. ಪಿಹೆಚ್‌ಡಿ ಕೌನ್ಸಿಲಿಂಗ್‌ಗೆ ತಡೆಯಾಜ್ಜೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂ ಓದಿ: PSI scam: ಅಮೃತ್ ಪೌಲ್​ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.