ETV Bharat / state

ಬಿಬಿಎಂಪಿ ಟೆಂಡರ್ ರದ್ದು ಕೋರಿ ಅರ್ಜಿ: ಪಾಲಿಕೆಗೆ ಹೈಕೋರ್ಟ್ ನೋಟಿಸ್

author img

By

Published : Oct 1, 2020, 11:28 PM IST

ಬಿಬಿಎಂಪಿ ಪೌರ ಕಾರ್ಮಿಕರು ಮತ್ತು ಆರೋಗ್ಯ ಗ್ಯಾಂಗ್​​​​​​ಮೆನ್​ಗಳ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎ. ಎಸ್‌. ಓಕ ನೇತೃತ್ವದ ವಿಭಾಗೀಯ ಪೀಠ, ಸಂಬಂಧ ಅಧಿಕಾರಿ ವರ್ಗಕ್ಕೆ ನೋಟಿಸ್​ ಜಾರಿ ಮಾಡಿತು.

High Court issued notice to BBMP
ಹೈಕೋರ್ಟ್

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ಮನೆಯಿಂದಲೂ ತ್ಯಾಜ್ಯವನ್ನು ಹಸಿ ಮತ್ತು ಒಣ ಕಸವೆಂದು ಪ್ರತ್ಯೇಕವಾಗಿ ಸಂಗ್ರಹಿಸಿ ಸಾಗಿಸುವ ಸಂಬಂಧ ಬಿಬಿಎಂಪಿ ಕರೆದಿರುವ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಪಾಲಿಕೆಗೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಬಿಬಿಎಂಪಿ ಪೌರ ಕಾರ್ಮಿಕರು ಮತ್ತು ಆರೋಗ್ಯ ಗ್ಯಾಂಗ್ ಮೆನ್​ಗಳ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್‌. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಕೀಲ ಕೆ. ದಿವಾಕರ್ ಅವರ ವಾದ ಆಲಿಸಿದ ಪೀಠ ಅರ್ಜಿ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ ಆಯುಕ್ತರು ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಅಕ್ಟೋಬರ್ 19ಕ್ಕೆ ಮುಂದೂಡಿತು.

ಅರ್ಜಿಯಲ್ಲಿ, 2019ರಲ್ಲಿ ಕರೆಯಲಾದ ಟೆಂಡರ್​​ ಮರುಪರಿಶೀಲಿಸುವ ಬಗ್ಗೆ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಮಧ್ಯೆ ಹಳೆಯ ಟೆಂಡರ್ ಪ್ರಕಾರ ಕೆಲವರಿಗೆ ಕಾರ್ಯಾದೇಶಗಳನ್ನು ನೀಡಲಾಗಿದೆ. ಅಲ್ಲದೇ ಟೆಂಡರ್ ಪ್ರಕ್ರಿಯೆಯಲ್ಲಿ ಎಸ್ಸಿ ಎಸ್ಟಿ ಮೀಸಲು ನಿಯಮಗಳನ್ನು ಉಲ್ಲಂಘಿಸಲಾಗಿದೆ. ಆದ್ದರಿಂದ 2019ರ ಜನವರಿ 18ರಂದು ಕರೆದಿರುವ ಟೆಂಡರ್ ರದ್ದುಪಡಿಸಿ ಹೊಸ ಟೆಂಡರ್ ಕರೆಯಲು ಪಾಲಿಕೆಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.