ETV Bharat / state

ಪಿಎಸ್ಐ ನೇಮಕಾತಿ ಹಗರಣ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌ - BJP MLA Basavaraj Dhadesugur

ಪೊಲೀಸ್ ಸಬ್​ ಇನ್ಸ್​ಪೆಕ್ಟರ್​ (ಪಿಎಸ್ಐ) ನೇಮಕಾತಿ ಹಗರಣದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.​

ಹೈಕೋರ್ಟ್
ಹೈಕೋರ್ಟ್
author img

By

Published : Feb 3, 2023, 2:02 AM IST

ಬೆಂಗಳೂರು : ಪೊಲೀಸ್ ಸಬ್​ ಇನ್ಸ್​ಪೆಕ್ಟರ್​ (ಪಿಎಸ್ಐ) ನೇಮಕಾತಿ ಹಗರಣ ಸಂಬಂಧ ಈವರೆಗೂ ದಾಖಲಾಗಿರುವ ಎಫ್ಐಆರ್ ಮತ್ತು ಅದರ ಕುರಿತ ತನಿಖೆಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಸರ್ಕಾರಕ್ಕೆ ನೋಟಿಸ್ ಜಾರಿ ನೀಡಿದ್ದು, ಮುಂದಿನ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಪ್ರಾಮಾಣಿಕ ಅಭ್ಯರ್ಥಿಗಳಿಗೆ ತೊಂದರೆ: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ರಾಜ್ಯದಲ್ಲಿ ನಡೆದಿರುವ ಈ ಹಗರಣದಿಂದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ತೀವ್ರ ಸ್ವರೂಪದ ತೊಂದರೆ ಆಗಿದೆ. ಬ್ಲೂಟೂತ್ ಬಳಕೆ ಮತ್ತು ಒಎಂಆರ್ ತಿದ್ದಿರುವ ಆರೋಪ ಇದೆ. ಈ ಘಟನೆಯ ಹಿಂದೆ ಹಿರಿಯ ಅಧಿಕಾರಿಗಳ ಕೈವಾಡ‌ ಇದ್ದು, ನ್ಯಾಯಾಲಯ ಪರಿಶೀಲನೆ ಮಾಡಬೇಕು ಎಂದು ವಾದ ಮಂಡಿಸಿದರು.

ಅಲ್ಲದೇ, ಅರ್ಜಿಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೆ ವಿವಿಧೆಡೆ ದಾಖಲಾಗಿರುವ ಎಫ್ಐಆರ್ ಮತ್ತು ದೂರುಗಳಿಗೆ ಸಂಬಂಧಿಸಿದ ಸಂಪೂರ್ಣ ತನಿಖಾ ದಾಖಲೆಗಳನ್ನು ಸಲ್ಲಿಸಲು ಸಿಐಡಿಗೆ ಆದೇಶಿಸಬೇಕು. ಪ್ರಕರಣದ ತನಿಖೆ ನಡೆಸಿರುವ ಸಿಐಡಿಗೆ ಪೊಲೀಸ್ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಮೃತ್ ಪೌಲ್ ಬಂಧನದ ಬಳಿಕದ ಸ್ಥಿತಿಗತಿಯ ಕುರಿತು ಮಾಹಿತಿ ನೀಡಲು ನಿರ್ದೇಶಿಸಬೇಕು. ನ್ಯಾಯಯುತ, ಸ್ವತಂತ್ರ ಮತ್ತು ಪಾರದರ್ಶಕವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ಮತ್ತು ಸಿಐಡಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಕೆಲವು ಅಭ್ಯರ್ಥಿಗಳಿಗೆ ಅನುಕೂಲ: ಪೊಲೀಸ್ ನೇಮಕಾತಿ ವಿಭಾಗದ ಕೆಲವು ಅಧಿಕಾರಿಗಳು, ರಾಜಕಾರಣಿಗಳ ನೆರವಿನಿಂದ ಅಕ್ರಮ ಮಾರ್ಗದ ಮೂಲಕ ಕೆಲವು ಅಭ್ಯರ್ಥಿಗಳಿಗೆ ನೆರವಾಗಿದ್ದಾರೆ. ಇದರಿಂದ ಪಿಎಸ್ಐ ಪರೀಕ್ಷೆಯನ್ನು ಅರ್ಹತೆಯ ಆಧಾರದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳ ಬದುಕು ಮತ್ತು ವೃತ್ತಿಯು ಅತಂತ್ರಕ್ಕೆ ಸಿಲುಕಿದೆ. ಪರೀಕ್ಷೆ ನಡೆಸುವುದರ ಪ್ರತಿ ಹಂತದ ಕುರಿತು ನೇಮಕಾತಿ ವಿಭಾಗದ ಎಡಿಜಿಪಿ, ನೇಮಕಾತಿ ಸಮಿತಿ ಮತ್ತು ಗೃಹ ಸಚಿವರಿಗೆ ಮಾಹಿತಿ ಇತ್ತು ಎಂಬುದು ತನಿಖೆಯ ಸಂದರ್ಭದಲ್ಲಿ ಬಹಿರಂಗವಾಗಿದೆ. ಅಲ್ಲದೇ, ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳು ಅಕ್ರಮ ನಡೆದಿರುವ ಕುರಿತು ದೂರು ನೀಡಿದ್ದಾರೆ. ಸಚಿವ ಸಂಪುಟದ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಶಾಸಕರು ಮತ್ತು ಗೃಹ ಸಚಿವರ ವಿರುದ್ಧ ಅಕ್ರಮದ ಆರೋಪ ಮಾಡಲಾಗಿದೆ. ಆದರೂ ಎರಡನೇ ಪ್ರತಿವಾದಿಯಾಗಿರುವ ಗೃಹ ಇಲಾಖೆಯು ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ ಎಂದು ವಾದಿಸಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಐವರು ಅಭ್ಯರ್ಥಿಗಳು ನೀಡಿರುವ ದೂರನ್ನು ಪರಿಶೀಲಿಸಲಾಗಿದ್ದು, ಯಾವುದೇ ಅಕ್ರಮ ನಡೆದಿಲ್ಲ ಎಂದು 2022ರ ಫೆಬ್ರವರಿ 17 ಮತ್ತು ಮಾರ್ಚ್ 10 ರಂದು ಗೃಹ ಸಚಿವರು ವಿಧಾನಸಭೆಗೆ ತಿಳಿಸಿದ್ದಾರೆ. ಗೃಹ ಸಚಿವರ ಈ ಹೇಳಿಕೆಯ ಹೊರತಾಗಿಯೂ ಸಿಐಡಿ ತನಿಖೆ ನಡೆಸುತ್ತಿದ್ದು, ಇದನ್ನು ಬೃಹತ್ ನೇಮಕಾತಿ ಹಗರಣ ಎಂದು ವ್ಯಾಖ್ಯಾನಿಸಿರುವುದು ಸರಿಯಾಗಿದೆ. ಕಲಬುರಗಿಯ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಅದನ್ನು ಸಿಐಡಿಗೆ ವರ್ಗಾಯಿಸಿದ್ದರೂ ಅಭ್ಯರ್ಥಿಗಳು, ಅಧಿಕಾರಿಗಳು ಮತ್ತು ರಾಜಕಾರಣಿಗಳ ನಡುವಿನ ಸಂಬಂಧ ಬಹಿರಂಗಗೊಂಡಿಲ್ಲ. ಹಗರಣ ಬೆಳಕಿಗೆ ಬಂದು ಐದು ತಿಂಗಳು ಪೂರ್ಣಗೊಂಡರೂ ಸಿಐಡಿಯು ಕೆಲವೇ ಕೆಲವರನ್ನು ಬಂಧಿಸಿದೆ. ಅಧಿಕಾರಿಗಳು, ಅಭ್ಯರ್ಥಿಗಳು ಮತ್ತು ರಾಜಕಾರಣಿಗಳ ನಡುವಿನ ಜಾಲ ಭೇದಿಸಿ, ತಪ್ಪಿತಸ್ಥರನ್ನು ಬಂಧಿಸಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅಮೃತ್ ಪೌಲ್ ಬಂಧನ ಕಣ್ಣೊರೆಸುವ ತಂತ್ರ: ಬಿಜೆಪಿ ಶಾಸಕ ಬಸವರಾಜ್ ಧಡೇಸುಗೂರ್ ಅವರ ಆಡಿಯೋ ಕ್ಲಿಪ್​ನಲ್ಲಿ ಹಗರಣ ನಡೆದಿರುವ ಕುರಿತು ಸ್ಪಷ್ಟವಾಗಿದೆ. ಪ್ರಕರಣದಲ್ಲಿ ಅಮೃತ್ ಪೌಲ್ ಬಂಧನ ಕಣ್ಣೊರೆಸುವ ತಂತ್ರವಾಗಿದೆ. ಆ ಮೂಲಕ ಸಚಿವರು ಹಾಗೂ ಶಾಸಕರನ್ನು ರಕ್ಷಿಸಲಾಗುತ್ತಿದೆ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಅನಧಿಕೃತ ಧಾರ್ಮಿಕ ಕೇಂದ್ರಗಳ ಕುರಿತ ಅರ್ಜಿ ವಿಚಾರಣೆ: ಹಿರಿಯ ವಕೀಲರ ನೇಮಿಸಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.