ETV Bharat / state

ಕಾಮೆಡ್ ಕೆ ವಿರುದ್ಧ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಕಾಮೆಡ್ ಕೆ ಮೂಲಕ ಪಡೆದ ಸೀಟಿಗೆ ವರದಿ ಮಾಡಿಕೊಳ್ಳದ ವಿದ್ಯಾರ್ಥಿಗಳಿಗೆ ಶುಲ್ಕ ಮತ್ತು ಐದು ಪಟ್ಟು ದಂಡದ ಕ್ರಮ ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

High Court
ಹೈಕೋರ್ಟ್
author img

By

Published : Sep 13, 2022, 6:50 AM IST

ಬೆಂಗಳೂರು: ಖಾಸಗಿ ಇಂಜಿನಿಯರ್ ಕಾಲೇಜುಗಳಲ್ಲಿ ಕಾಮೆಡ್ ಕೆ ಪ್ರವೇಶಾತಿಯಲ್ಲಿ ಸೀಟು ಪಡೆದ ವಿದ್ಯಾರ್ಥಿಗಳು ಕೊನೆಯ ದಿನಾಂಕದೊಳಗೆ ವರದಿ ಮಾಡಿಕೊಳ್ಳದಿದ್ದರೆ ಪಾವತಿ ಮಾಡಲಾಗಿರುವ ಶುಲ್ಕ ಮೊತ್ತವನ್ನು ಕಳೆದುಕೊಳ್ಳುವುದರ ಜತೆಗೆ, ಐದು ಪಟ್ಟು ದಂಡ ವಿಧಿಸಲಾಗುತ್ತದೆ ಎಂಬ ನಿಯಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಕಾಮೆಡ್ ಕೆ ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನ ವಕೀಲ ಎನ್.ಪಿ. ಅಮೃತೇಶ್ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ಮಾಡಿದ ಹಂಗಾಮಿ ಮುಖ್ಯ ನಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಅಲ್ಲದೇ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಪ್ರವೇಶಾತಿ ಮೇಲ್ವಿಚಾರಣಾ ಸಮಿತಿ, ಕರ್ನಾಟಕ ಅನುದಾನ ರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಸಂಘ, ವಿಶ್ವವಿದ್ಯಾಲಯ ಧನಸಹಯೋಗ ಆಯೋಗ, ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್​​ಗೆ ನೋಟಿಸ್ ಜಾರಿ ಮಾಡಿದೆ.

ಮುಂದಿನ ಶೈಕ್ಷಣಿಕ ಸಾಲಿನ ಕರ್ನಾಟಕದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಾತಿ ಕುರಿತಂತೆ ಕಾಮೆಡ್ ಕೆ ಮಾರ್ಗಸೂಚಿ ರಚನೆ ಮಾಡಿದೆ. ಅದರ ಪ್ರಕಾರ ಕಾಲೇಜಿಗೆ ಪ್ರವೇಶಾತಿ ಪಡೆದ ನಂತರ ನಿಗದಿಪಡಿಸಲಾದ ಕೊನೆಯ ದಿನಾಂಕದೊಳಗೆ ವಿದ್ಯಾರ್ಥಿಯು ಕಾಲೇಜಿಗೆ ವರದಿ ಮಾಡಿಕೊಂಡು ಅಧ್ಯಯನ ಮುಂದುವರಿಸಿದ್ದರೆ ಮತ್ತು ಮೂಲ ದಾಖಲೆಗಳನ್ನು ಒಸಗಿಸದಿದ್ದರೆ, ಪ್ರವೇಶಾತಿ ಪಡೆದ ಶುಲ್ಕವನ್ನು ಕಳೆದುಕೊಳ್ಳಬೇಕಾಗುತ್ತದೆ. ಅಲ್ಲದೇ, ಶುಲ್ಕ ಮೊತ್ತದ ಐದು ಪಟ್ಟು ದಂಡ ಪಾವತಿಸಬೇಕಾಗುತ್ತದೆ ಎಂದು ಮಾರ್ಗಸೂಚಿ ಹೇಳುತ್ತದೆ.

ಇದು ಸಂಪೂರ್ಣ ಏಕಪಕ್ಷೀಯ ನಿರ್ಧಾರವಾಗಿದ್ದು, ಯುಜಿಸಿ ಮತ್ತು ಎಐಸಿಟಿಇ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ರೀತಿಯ ಮಾರ್ಗಸೂಚಿ ರೂಪಿಸಲು ಕಾಮೆಡ್ ಕೆ ಗೆ ಯಾವುದೇ ಅಧಿಕಾರ ಇಲ್ಲ. ಈ ನಿಯಮದಿಂದ ವಿದ್ಯಾರ್ಥಿಗಳು ಪೂರಕ ಸುತ್ತ ಸೇರಿದಂತೆ ಕೌನ್ಸಿಲಿಂಗ್ ನ ಎಲ್ಲಾ ಸುತ್ತುಗಳಲ್ಲಿ ಪಾಲ್ಗೊಳ್ಳುವ ಅವಕಾಶದಿಂದ ವಂಚಿತರಾಗುತ್ತದೆ ಎಂದು ಅರ್ಜಿದಾರರು ದೂರಿದ್ದಾರೆ.

ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರ ಮೇಲೆ ಒತ್ತಡ ಬೀರಲಿದೆ. ಈ ನಿಯಮವನ್ನು ಹಿಂಪಡೆಯುವಂತೆ ಕೋರಿ, ವಿಶ್ವವಿದ್ಯಾಲಯ ಅನುದಾನ ಆಯೋಗ, ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತಿಗೆ ಆ.1ರಂದು ಮನವಿ ಮಾಡಲಾಗಿತ್ತು. ಹಾಗೆಯೇ, ಆ.3ರಂದು ಕಾಮೆಡ್-ಕೆ ಮತ್ತು ಕರ್ನಾಟಕ ಅನುದಾನ ರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಸಂಘಕ್ಕೆ ಮನವಿ ಮಾಡಲಾಗಿದೆ. ಆದರೆ, ಮನವಿ ಪರಿಗಣಿಸಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬಾಲಕನೊಬ್ಬನ ಲಿಂಗಪರಿವರ್ತನೆ..ವೈದ್ಯರ ವಿರುದ್ಧದ ಪ್ರಕರಣ ರದ್ದು ಮಾಡಲು ಹೈಕೋರ್ಟ್​ ನಿರಾಕರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.