ETV Bharat / state

ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಕೋರಿ ಪಿಐಎಲ್ : ಸರ್ಕಾರಕ್ಕೆ ನೋಟಿಸ್

ರಾಜ್ಯದಲ್ಲಿ ಈತನಕ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆಗಾಗಿ ಯಾವುದೇ ನಿರ್ದಿಷ್ಟ ನಿಯಮ ರೂಪಿಸಿಲ್ಲ. 2020ರ ಅಧಿನಿಯಮದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಶಿಕ್ಷಣವನ್ನೂ ಸೇರಿಸಲಾಗಿದೆ. ಆದರೆ, ಉನ್ನತ ಶಿಕ್ಷಣದ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಒದಗಿಸಲು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ..

High Court
ಹೈಕೋರ್ಟ್
author img

By

Published : Mar 25, 2022, 4:25 PM IST

ಬೆಂಗಳೂರು : ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯ ಧನಸಹಾಯ ಆಯೋಗಕ್ಕೆ (ಯುಜಿಸಿ) ನೋಟಿಸ್ ಜಾರಿಗೊಳಿಸಿದೆ. ಈ ಕುರಿತಂತೆ ರಾಜ್ಯದ ಪ್ರಥಮ ತೃತೀಯ ಲಿಂಗಿ ಡಾ. ತ್ರಿನೇತ್ರಾ ಹಲ್ದಾರ್ ಗುಮ್ಮರಾಜು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಪ್ರತಿವಾದಿಗಳಾದ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಹಾಗೂ ಯುಜಿಸಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಅಲ್ಲದೇ, ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ತುರ್ತು ನೋಟಿಸ್ ಜಾರಿಗೆ ಆದೇಶಿಸಿ, ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಿದೆ.

ಆಕ್ಷೇಪವೇನು? : ರಾಜ್ಯದಲ್ಲಿ ಈತನಕ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆಗಾಗಿ ಯಾವುದೇ ನಿರ್ದಿಷ್ಟ ನಿಯಮ ರೂಪಿಸಿಲ್ಲ. 2020ರ ಅಧಿನಿಯಮದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಶಿಕ್ಷಣವನ್ನೂ ಸೇರಿಸಲಾಗಿದೆ. ಆದರೆ, ಉನ್ನತ ಶಿಕ್ಷಣದ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಒದಗಿಸಲು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಅಲ್ಲದೇ, 2020ರ ಸೆಪ್ಟೆಂಬರ್ 25ರಂದು ತೃತೀಯ ಲಿಂಗಿಗಳ (ಹಕ್ಕುಗಳ ಸಂರಕ್ಷಣೆ) ಅಧಿನಿಯಮ-2020 ಜಾರಿಗೆ ಬಂದಿದೆ. ಅದರ ನಿಯಮ 10ರ ಪ್ರಕಾರ, ತೃತೀಯ ಲಿಂಗಿಗಳಿಗೆ ತಾತ್ಕಾಲಿಕ ಶೆಲ್ಟರ್‌ಗಳಷ್ಟೇ ಅಲ್ಲದೆ ಸ್ಟೇ ಹೋಂ ಹಾಗೂ ತಂಗುವಿಕೆಗೆ ಪ್ರತ್ಯೇಕ ವ್ಯವಸ್ಥೆ, ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳು ಹಾಗೂ ಶೌಚಗೃಹಗಳು ಸೇರಿ ಸಾಂಸ್ಥಿಕ ಮೂಲಸೌಕರ್ಯಗಳನ್ನು ಸರ್ಕಾರ ಕಲ್ಪಿಸಿ ಕೊಡಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಓದಿ: ಗರ್ಭಿಣಿ, ಬಾಣಂತಿಯರಿಗೆ ಅವೈಜ್ಞಾನಿಕ ನಿಯಮ: ಸ್ಪೀಕರ್ ಕಾಗೇರಿ ಅಸಮಾಧಾನ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.