ಬೆಂಗಳೂರು: ಇಂದಿರಾನಗರದಲ್ಲಿ ಪಬ್ ಹಾಗೂ ರೆಸ್ಟೋರೆಂಟ್‌ಗಳಿಂದ ಆಗುತ್ತಿರುವ ಶಬ್ದ ಮಾಲಿನ್ಯ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಶಬ್ದಮಾಲಿನ್ಯ ಉಪಕರಣಗಳನ್ನು ಖರೀದಿಸಲು, ₹6.99 ಕೋಟಿ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಮಿತಿ ಮೀರಿದ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ಇಂದಿರಾನಗರದ ನಿವಾಸಿಗಳು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ಪೀಠದಲ್ಲಿ ಗುರುವಾರ ನಡೆಯಿತು.
ಸರ್ಕಾರದ ಪರ ವಕೀಲರು, ಶಬ್ದ ಮಾಲಿನ್ಯ ಮಾಡುತ್ತಿದ್ದ ಪಬ್ಗಳ ಪರವಾನಗಿ ಹಿಂಪಡೆಯಲಾಗಿದೆ. ಹಾಗೆಯೇ ಕಾನೂನು ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಪಬ್‌ಗಳು ಮಾತ್ರವಲ್ಲದೇ ಶಬ್ದ ಮಾಲಿನ್ಯ ಉಂಟು ಮಾಡುವ ಎಲ್ಲದರ ವಿರುದ್ಧವೂ ಕ್ರಮ ಜರುಗಿಸಿ ಈ ಪ್ರಕರಣದಲ್ಲಿ ಪರಿಸರ ಸಂರಕ್ಷಣೆ ಕಾಯ್ದೆ ಸೆಕ್ಷನ್ 19ರ ಪ್ರಕಾರ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿ ಇದನ್ನ ಪರಿಶೀಲನೆ ಮಾಡಿ ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.