ಬೆಂಗಳೂರು: ಭಾರತ ವಿಶ್ವವಿದ್ಯಾಲಯ (ಎನ್ಎಲ್ಎಸ್ಐಯು)ದ ರಾಷ್ಟ್ರೀಯ ಕಾನೂನು ಶಾಲೆಯ ಶೈಕ್ಷಣಿಕ ಮಂಡಳಿ ಸದಸ್ಯರಾಗಿ ಪುತ್ತೂರು ಮೂಲದ ಹಿರಿಯ ವಕೀಲ ಅರುಣ್ ಶ್ಯಾಮ್ ಅವರನ್ನು ನೇಮಿಸಲಾಗಿದೆ.
ಪ್ರತಿಷ್ಠಿತ ವಿ.ವಿ.ಯ ಶೈಕ್ಷಣಿಕ ಮಂಡಳಿಯಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಸೇರಿದಂತೆ ಒಟ್ಟು 24 ಮಂದಿ ಸದಸ್ಯರಿದ್ದಾರೆ. ಕರ್ನಾಟಕ ಮೂಲದವರಾದ ಸುಪ್ರೀಂಕೋರ್ಟ್ ಹಾಲಿ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ, ರಾಜ್ಯ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್ ಮಂಡಳಿಯಲ್ಲಿರುವ ರಾಜ್ಯದ ಇತರೆ ಪ್ರಮುಖರಾಗಿದ್ದಾರೆ.
ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ಮುಂದಿನ ಮೂರು ವರ್ಷಗಳ ಕಾಲ ರಾಷ್ಟ್ರೀಯ ಕಾನೂನು ಶಾಲೆಯ ಶೈಕ್ಷಣಿಕ ಮಂಡಳಿಯಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಲಿದ್ದಾರೆ.