ಬೆಂಗಳೂರು: ಲಾಕ್ಡೌನ್ ಪರಿಣಾಮ ಕೋರ್ಟ್ ಕಲಾಪಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಗುಮಾಸ್ತರಿಗೆ ನೆರವು ನೀಡಲು 5 ಕೋಟಿ ರೂಪಾಯಿ ಮೊತ್ತದ ಕಾರ್ಪಸ್ ನಿಧಿ ಸ್ಥಾಪಿಸುವಂತೆ ಕರ್ನಾಟಕ ರಾಜ್ಯ ವಕೀಲರ ಗುಮಾಸ್ತರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಕೆಲಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ವಕೀಲರ ಸಮರ್ಪಕ ಕಾರ್ಯನಿರ್ವಹಣೆಯಲ್ಲಿ ಕ್ಲರ್ಕ್ ಗಳ ಪಾತ್ರ ಮಹತ್ವದ್ದಾಗಿದೆ. ಲಾಕ್ ಡೌನ್ ಬಳಿಕ ಇವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಇವರಿಗೆ ನೆರವು ನೀಡಲು ಯೋಜನೆಯ ಅಗತ್ಯವಿದ್ದು, ಈ ಕುರಿತು ರಾಜ್ಯ ವಕೀಲರ ಪರಿಷತ್ತು ಬೆಂಗಳೂರು ವಕೀಲರ ಸಂಘ ಮತ್ತು ವಕೀಲರ ಸಂಘದ ಜಂಟಿ ಸಭೆ ನಡೆಸಿ ಮಾಹಿತಿ ನೀಡಬೇಕು ಎಂದು ಸೂಚಿಸಿದೆ.