ETV Bharat / state

High court news: ಖಾಲಿ ಇರುವ ಸರ್ಕಾರಿ ಪಿಪಿ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ: ಸರ್ಕಾರ - ಈಟಿವಿ ಭಾರತ್​ ಕನ್ನಡ ನ್ಯೂಸ್​

ಪಿಪಿ ಹುದ್ದೆಗಳ ಭರ್ತಿಗೆ ಈಗಾಗಲೇ 109 ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಮುಗಿದಿದೆ.

ಹೈಕೋರ್ಟ್‌
ಹೈಕೋರ್ಟ್‌
author img

By

Published : Jun 20, 2023, 8:12 PM IST

ಬೆಂಗಳೂರು : ರಾಜ್ಯದಲ್ಲಿ ಪ್ರಸ್ತುತ ಖಾಲಿಯಿರುವ ಸರ್ಕಾರಿ ಅಭಿಯೋಜಕರು (ಪಿಪಿ) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಂತಿಮ ಪಟ್ಟಿಯಲ್ಲಿರುವ 109 ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ನಡೆದಿದೆ. ಈ ಕುರಿತು ರಾಜ್ಯ ಸರ್ಕಾರ ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದೆ. ರಾಜ್ಯಾಧ್ಯಂತ ವಿವಿಧ ವಿಚಾರಣಾ ನ್ಯಾಯಾಲಯಗಳಲ್ಲಿ ಸರ್ಕಾರಿ ಅಭಿಯೋಜಕರ ಹುದ್ದೆಗಳು ದೊಡ್ಡ ಪ್ರಮಾಣದಲ್ಲಿ ಖಾಲಿ ಇರುವ ಬಗ್ಗೆ ಹಲವು ಜಿಲ್ಲಾ ನ್ಯಾಯಾಧೀಶರು ಮಾಹಿತಿಯನ್ನು ಒದಗಿಸಿದ್ದರು.

ಇದನ್ನು ಆಧರಿಸಿ 2019ರಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರಿ ವಕೀಲರು ಮಾಹಿತಿ ನೀಡಿದರು. ವಿಚಾರಣೆ ವೇಳೆ, ಸರ್ಕಾರದ ಪರ ವಕೀಲ ಎಸ್. ಮಹೇಂದ್ರ ವಾದ ಮಂಡಿಸಿದರು.

ಸರ್ಕಾರಿ ಅಭಿಯೋಜಕರ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಪ್ರಕರಣ ಕರ್ನಾಟಕ ಆಡಳಿತ ನ್ಯಾಯ ಮಂಡಳಿ (ಕೆಎಟಿ)ಯಲ್ಲಿ ವಿಚಾರಣೆಗೆ ಬಾಕಿ ಇರುವ ಕಾರಣಕ್ಕೆ ವಿಳಂಬವಾಗಿತ್ತು. ಇದೀಗ ಕೆಎಟಿ ಅರ್ಜಿಗಳನ್ನು ವಜಾಗೊಳಿಸಿದೆ. ಅದಾದ ಮೇಲೆ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ದಾಖಲಾತಿ ಪರಿಶೀಲನೆ ಪ್ರಕ್ರಿಯೆ ನಡೆದಿದ್ದು, ಈಗಾಗಲೇ 109 ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಮುಗಿದಿದೆ. ತ್ವರಿತಗತಿಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ವಕೀಲ ಮಹೇಂದ್ರ ನ್ಯಾಯಪೀಠಕ್ಕೆ ವಿವರಿಸಿದರು.

ಜತೆಗೆ, ಈಗಾಗಲೇ 104 ಸರ್ಕಾರಿ ಅಭಿಯೋಜಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಜೊತೆಗೆ ಈಗಿರುವ ಸರ್ಕಾರಿ ಅಭಿಯೋಜಕರನ್ನು ಹಿರಿಯ ಸರ್ಕಾರಿ ಅಭಿಯೋಜಕರನ್ನಾಗಿ ಬಡ್ತಿ ನೀಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ರೀತಿಯ ವ್ಯವಸ್ಥೆ ಮಾಡಿರುವುದರಿಂದ ಸರ್ಕಾರಿ ಅಭಿಯೋಜಕರ ಖಾಲಿ ಹುದ್ದೆಗಳಿಂದಾಗಿ ವಿಚಾರಣಾ ನ್ಯಾಯಾಲಯಗಳಲ್ಲಿ ಕ್ರಿಮಿನಲ್ ಪ್ರಕರಣಗಳಿಗೆ ಸಮಸ್ಯೆ ಆಗುತ್ತಿಲ್ಲ ಎಂದು ತಿಳಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಸರ್ಕಾರಿ ಅಭಿಯೋಜಕರ ನೇಮಕಾತಿಗೆ ಸಂಬಂಧಿಸಿದಂತೆ ನ್ಯಾಯಾಲಯ ಈ ಹಿಂದೆ ನೀಡಿರುವ ಬಹುತೇಕ ಪ್ರಮುಖ ಆದೇಶಗಳನ್ನು ರಾಜ್ಯ ಸರ್ಕಾರ ಪಾಲನೆ ಮಾಡಿದೆ. ಸಣ್ಣಪುಟ್ಟ ಅನುಪಾಲನೆಗಳು ಬಾಕಿ ಇದ್ದು, ಅವುಗಳನ್ನು 3 ಮೂರುಗಳಲ್ಲಿ ಪೂರ್ಣಗೊಳಿಸಬೇಕು. ಈ ಅವಧಿಯಲ್ಲಿ ಸರ್ಕಾರಿ ಅಭಿಯೋಜಕರ ನೇಮಕಾತಿಗೆ ಸಂಬಂಧಿಸಿದಂತೆ ಆಗಿರುವ ಬೆಳವಣಿಗೆಗಳ ಬಗ್ಗೆ ವಿವರವಾದ ವರದಿ ಸಲ್ಲಿಸಬೇಕು ಎಂದು ಸೂಚಿಸಿದ ಪೀಠ ವಿಚಾರಣೆಯನ್ನು ಮುಂದೂಡಿತು.

ಈ ಹಿಂದೆ ವಿಚಾರಣೆ ವೇಳೆ ಸರ್ಕಾರಿ ಅಭಿಯೋಜಕರ ನೇಮಕಾತಿಗೆ 2022ರ ಮೇ-ಜೂನ್ ತಿಂಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಉತ್ತೀರ್ಣರಾದ 161 ಅಭ್ಯರ್ಥಿಗಳ ಪಟ್ಟಿಯನ್ನು 2022ರ ಅ.15ರಂದು ಪ್ರಕಟಿಸಲಾಗಿತ್ತು. ಇದರಲ್ಲಿ 158 ಅಭರ್ಥಿಗಳಿಗೆ ಮೌಖಿಕ ಸಂದರ್ಶನ ನಡೆಸಿ 143 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿತ್ತು. ಇದರಲ್ಲಿ 138 ಹೈದರಬಾದ ಕರ್ನಾಟಕೇತರ ಹಾಗೂ 5 ಅಭ್ಯರ್ಥಿಗಳು ಹೈದರಬಾದ ಕರ್ನಾಟಕ ಕೋಟಾದವರಿದ್ದರು. ಈ ನಡುವೆ ಅನುರ್ತ್ತಿಣಗೊಂಡ ಕೆಲ ಅಭ್ಯರ್ಥಿಗಳು ಕೆಎಟಿ ಮೆಟ್ಟಿಲೇರಿದ್ದರು. ಕೆಎಟಿ ಆ ಅರ್ಜಿಗಳನ್ನು ವಜಾಗೊಳಿಸಿದೆ. ಹಾಗಾಗಿ, ಸರ್ಕಾರಿ ಅಭಿಯೋಜಕರ ನೇಮಕಾತಿ ಪ್ರಕ್ರಿಯೆಗೆ ಮತ್ತೇ ಚಾಲನೆ ನೀಡಲಾಗಿದೆ ಎಂದು 2023ರ ಜ.27ರಂದು ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಸರ್ಕಾರ ನ್ಯಾಯಪೀಠಕ್ಕೆ ವಿವರಿಸಿತ್ತು.

ಇದನ್ನೂ ಓದಿ : ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷ, ಸದಸ್ಯರ ನೇಮಕ ಕೋರಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.