ETV Bharat / state

ಹೈಕೋರ್ಟ್ ಸೂಚನೆ, ಹರಿಹರ ಪಂಚಮಸಾಲಿ ಪೀಠದ 30 ವರ್ಷಗಳ ಹೋರಾಟಕ್ಕೆ ದೊರೆತ ಫಲ: ವಚನಾನಂದ ಶ್ರೀಗಳು - ಸಿಎಂ ಬಸವರಾಜ್ ಬೊಮ್ಮಾಯಿ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು 3 ದಶಕದಿಂದ ಹರಿಹರ ಪೀಠ ಹೋರಾಟ ಕೈಗೊಂಡಿದೆ. ಹೈಕೋರ್ಟ್ ಸೂಚನೆ ಮಧ್ಯಂತರ ವರದಿ ಪರಿಶೀಲಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು,ನಾಳೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಮಾಹಿತಿ:ವಚನಾನಂದ ಶ್ರೀಗಳು ವಿಶ್ವಾಸ.

Shri Vachanananda Swamiji of Harihar Panchamasali Peeth
ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ
author img

By

Published : Mar 23, 2023, 6:48 PM IST

ಬೆಂಗಳೂರು: ಹರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ಹೈಕೋರ್ಟ್ ಸೂಚನೆ ಹೊರಬಿದ್ದಿದೆ. ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಹೇಳಿದರು.

ಬೆಂಗಳೂರು ನಗರದ ಶ್ವಾಸಯೋಗ ಕೇಂದ್ರದಲ್ಲಿ ಕರೆದಿದ್ದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವ ಹೋರಾಟಕ್ಕೆ 3 ದಶಕಗಳ ಇತಿಹಾಸವಿದೆ. ಹಂತ ಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದು ಸೇರಿದೆ. 2 ಡಿ ಹಾಗೂ 2 ಸಿ ಮೀಸಲಾತಿಯನ್ನು ಘೋಷಣೆ ಮಾಡಿದ್ದನ್ನು ನಾವು ಸ್ವಾಗತಿಸುವುದಾಗಲಿ ಅಥವಾ ತಿರಸ್ಕರಿಸುವುದಾಗಲಿ ಮಾಡಿರಲಿಲ್ಲ. ಈ ಘೋಷಣೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದೆವು. ಈ ಹಿನ್ನೆಲೆ ರಾಜ್ಯ ಸರ್ಕಾರವು ಹಿಂದುಳಿದ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡಿದೆ ಎಂದು ತಿಳಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ಭರವಸೆ: ಮಧ್ಯಂತರ ವರದಿಯನ್ನು ಸಮಗ್ರವಾಗಿ ಪರಿಶೀಲಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ. ಪ್ರವರ್ಗ ಯಾವುದಾದರೂ ಇರಲಿ ಆದರೆ ನಮ್ಮ ಸಮುದಾಯಕ್ಕೆ ಮೀಸಲಾತಿ ದೊರೆಯುವುದು ಬಹಳ ಅಗತ್ಯ. ಅದಕ್ಕೆ ಬೇಕಾದಂತಹ ಪೂರಕ ವಾತಾವರಣ ಈಗ ಸಿದ್ಧವಾಗಿದೆ. ಆಯೋಗದ ಮಧ್ಯಂತರ ವರದಿ ಹಾಗೂ ಇಂದಿನ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ ಕುರಿತಾದ ತೀರ್ಪು ದೊಡ್ಡ ಬೆಳವಣಿಗೆಗಳಾಗಿವೆ ಎಂದು ಅಭಿಪ್ರಾಯ ತಿಳಿಸಿದರು.

900 ಪುಟಗಳಷ್ಟು ದಾಖಲೆ ಸಲ್ಲಿಕೆ: ಪಂಚಮಸಾಲಿ ಮೀಸಲಾತಿ ಹೋರಾಟದ ಕಾನೂನಾತ್ಮಕ ಹೋರಾಟದ ಮುಂಚೂಣಿಯಲ್ಲಿರುವ ವಕೀಲ ಬಿ ಎಸ್‌ ಪಾಟೀಲ್‌ ಮಾತನಾಡಿ, ಮಧ್ಯಂತರ ವರದಿಯ ನಂತರ ಆಯೋಗ ಮತ್ತೊಮ್ಮೆ ದಾಖಲೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಿತು. ಈ ಸಂದರ್ಭದಲ್ಲಿ 1871 ರಿಂದ ಇದು ವರೆಗಿನ ಸುಮಾರು 900 ಪುಟಗಳಷ್ಟು ದಾಖಲೆಯನ್ನ ಸಲ್ಲಿಸಿದ್ದೇವೆ ಎಂದು ಅಭಿಮತ ವ್ಯಕ್ತಪಡಿಸಿದರು.

1871 ರ ವರದಿಯಲ್ಲಿ ಪಂಚಮಸಾಲಿ ಸಮುದಾಯವನ್ನು ಶೂದ್ರರ ಗುಂಪಿನಲ್ಲಿ ಸೇರಿಸಿದ್ದ ದಾಖಲೆಯನ್ನು ಪ್ರಮುಖವಾಗಿ ಪರಿಗಣಿಸಲಾಗಿದೆ. ಈ ಹಿನ್ನೆಲೆ ಹೈಕೋರ್ಟ್ ಸೂಚನೆ ಹರಿಹರ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ನಡೆದಂಥ ಕಾನೂನಾತ್ಮಕ ಹೋರಾಟಕ್ಕೆ ಜಯ ಸಿಗುವ ಸುಸಂದರ್ಭ ಈಗ ಬಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಕುರಿತು ಮಾರ್ಚ್ 23ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ಕರೆದಿದ್ದು, ನಮ್ಮ ಸಮಾಜಕ್ಕೆ ಪ್ರತ್ಯೇಕ ಮೀಸಲಾತಿ ನೀಡಲೇಬೇಕು ಎಂದು ಒತ್ತಾಯಿಸಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಯತ್ನಾಳ್​ ಇತ್ತೀಚೆಗೆ ಹೇಳಿದ್ದರು. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಇಟಗಿಯಲ್ಲಿ ಹಮ್ಮಿಕೊಂಡಿದ್ದ ವೀರರಾಣಿ ಚೆನ್ನಮ್ಮ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದ್ದರು.

ರಾಜ್ಯದಲ್ಲಿ ಇಲ್ಲಿಯವರೆಗೂ ಮೀಸಲಾತಿ ಹೋರಾಟ ಜೀವಂತವಿಟ್ಟಿದ್ದು ಕೂಡಲಸಂಗಮದ ಜಯಮೃತ್ಯಂಜಯ ಸ್ವಾಮಿಗಳು. ಸದ್ಯ ಚುನಾವಣೆ ಬಂದಿದೆ ಹೋರಾಟ ಬಿಡಿ ಎಂದು ಕೆಲವರು ಶ್ರೀಗಳಿಗೆ ಒತ್ತಡ ಹೇರುತ್ತಿದ್ದಾರೆ. ಆದರೆ, ನಾನು ಬಸವಜಯಮೃತ್ಯುಂಜಯ ಸ್ವಾಮಿಗಳಿಗೆ ಮೀಸಲಾತಿ ನೀಡುವವರೆಗೂ ಹೋರಾಟ ಬಿಡಬೇಡಿ ಎಂದಿದ್ದೇನೆ ಎಂದರು.

ಇದನ್ನೂಓದಿ:ಶ್ರೀ ಸಿದ್ಧೇಶ್ವರ ರಥೋತ್ಸವಕ್ಕೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚಣೆ: ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.