ETV Bharat / state

ನೀಟ್ ಪರೀಕ್ಷೆಗೆ ಅರ್ಹತಾ ಅಂಕ ಶೂನ್ಯ ವಿಚಾರ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್ - ನೀಟ್ ಪಿಜಿ ಕೌನ್ಸೆಲಿಂಗ್ ಕಟ್ ಆಫ್

ನೀಟ್ ಪಿಜಿ ಕೌನ್ಸೆಲಿಂಗ್ ಕಟ್ ಆಫ್ ಅಂಕಗಳನ್ನು ಶೂನ್ಯಕ್ಕೆ ಇಳಿಸಿ ಹೊರಡಿಸಿರುವ ಆದೇಶವನ್ನು ವಿರೋಧಿಸಿ ವೈದ್ಯರೊಬ್ಬರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೋರಿದ್ದರು. ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್​ ನಡೆಸಿ ನೋಟೀಸ್​ ಜಾರಿ ಮಾಡಿದೆ.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Oct 12, 2023, 6:31 AM IST

Updated : Oct 12, 2023, 7:35 AM IST

ಬೆಂಗಳೂರು: 2023 ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ವೈದ್ಯಕೀಯ ಹಾಗೂ ದಂತವೈದ್ಯಕೀಯ ಪಿ.ಜಿ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅರ್ಹತಾ ಅಂಕವನ್ನು ಶೂನ್ಯಕ್ಕೆ ಇಳಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಹುಬ್ಬಳ್ಳಿ ಮೂಲದ ವೈದ್ಯ ಹಾಗೂ ವಕೀಲ ಡಾ. ವಿನೋದ್ ಜಿ. ಕುಲಕರ್ಣಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯಪೀಠ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಕೇಂದ್ರದ ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ(ಎಂಸಿಸಿ) ಸೇರಿ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಕಳೆದ 10 ವರ್ಷಗಳಿಂದ ನೀಟ್ - ಪಿಜಿ ಕಟ್ ಆಫ್ ಅಂಕಗಳು ಶೇ.50ರಷ್ಟಿತ್ತು. ಆದರೆ, 2023ನೇ ಸಾಲಿನ ನೀಟ್-ಪಿಜಿ ಕೌನ್ಸೆಲಿಂಗ್ ಹಾಜರಾಗಲು ಕಟ್ ಆಫ್ ಅಂಕಗಳನ್ನು ಶೂನ್ಯಕ್ಕೆ ಇಳಿಸಿ ಎಂಸಿಸಿ 2023ರ ಸೆ.20 ರಂದು ಅಧಿಸೂಚನೆ ಹೊರಡಿಸಿದೆ. ಇದರಿಂದ ನೀಟ್​ ಪಿಜಿಗೆ ಹಾಜರಾದ ಪ್ರತಿಯೊಬ್ಬ ಅಭ್ಯರ್ಥಿ ತನ್ನಿಷ್ಟದ ಪಿಜಿ ಸೀಟ್ ಪಡೆದುಕೊಳ್ಳಬಹುದು.

ಹೀಗಾದರೆ ದೇಶವು ಮುಂದೆ ವೈದ್ಯರನ್ನು ಉತ್ಪಾದಿಸುವ ದಾಸ್ತಾನು ಮಳಿಗೆ ಅಥವಾ ಉಗ್ರಾಣ ಆಗಲಿದೆ. ಪಿಜಿ ಪ್ರವೇಶಕ್ಕೆ ಮೆರಿಟ್ ಮಾತ್ರ ಮಾನದಂಡವಾಗಬೇಕು ಎಂದು ಸುಪ್ರೀಂಕೋರ್ಟ್ ಹಲವು ಬಾರಿ ಹೇಳಿದೆ. ಕೌನ್ಸೆಲಿಂಗ್ ಕಟ್ ಆಫ್ ಶೂನ್ಯಕ್ಕೆ ಇಳಿಸುವುದರಿಂದ ಖಾಸಗಿ ಮೆಡಿಕಲ್ ಕಾಲೇಜುಗಳ ಲಾಬಿ ಇನ್ನಷ್ಟು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ನೀಟ್ ಪಿಜಿ ಕೌನ್ಸೆಲಿಂಗ್ ಕಟ್ ಆಫ್ ಅಂಕಗಳನ್ನು ಶೂನ್ಯಕ್ಕೆ ಇಳಿಸಿ 2023ರ ಸೆ.20 ರಂದು ಎಂಸಿಸಿ ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯುವಂತೆ ನಿರ್ದೇಶನ ನೀಡಬೇಕು. ಹಾಗೂ ಹಿಂದಿನ ಶೇ.50 ರಷ್ಟು ಕಟ್ ಆಫ್ ಅಂಕಗಳ ಪದ್ದತಿಯಂತೆಯೇ ಕೌನ್ಸೆಲಿಂಗ್ ನಡೆಸುವಂತೆ ಆದೇಶಿಸಬೇಕು ಎಂದು ಅರ್ಜಿದಾರರು ನ್ಯಾಯಪೀಠಕ್ಕೆ ಕೋರಿದರು.

ಏನಿದು ಕಟ್​ ಆಫ್​ ಅಂಕ: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳನ್ನು ಮಾಡುವ ಕನಸು ಇಟ್ಟುಕೊಂಡಿದ್ದ ವಿದ್ಯಾರ್ಥಿಗಳು ಬರೆಯುವ ನೀಟ್​ ಪಿಜಿ ಪರೀಕ್ಷೆಯಲ್ಲಿ ಇಂತಿಷ್ಟು ಅಂಕಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕೆಂಬ ನಿಯಮ. ನಿಗದಿಪಡಿಸಿದ ಅಂಕಗಳನ್ನು ಮುಟ್ಟುವಲ್ಲಿ ವಿದ್ಯಾರ್ಥಿ ವಿಫಲವಾದರೆ, ಅವರು ಮುಂದಿನ ಹಂತಕ್ಕೆ ಅನರ್ಹತೆ ಹೊಂದುತ್ತಿದ್ದರು.

ಇದನ್ನೂ ಓದಿ: NEET PG: ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್.. ನೀಟ್​ ಪರೀಕ್ಷೆ ಕಟ್​ ಆಫ್​ ಅಂಕ ರದ್ದು, ಎಲ್ಲರಿಗೂ ಕೌನ್ಸೆಲಿಂಗ್​ಗೆ ಅರ್ಹತೆ

Last Updated : Oct 12, 2023, 7:35 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.