ETV Bharat / state

ಕುಶಾಲನಗರದ ತಾವರೆಕೆರೆ ಒತ್ತುವರಿ ತೆರವು ಕೋರಿ ಪಿಐಎಲ್: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - kushalanagara lake issues

ಕೊಡಗಿನ ಕುಶಾಲನಗರದಿಂದ ನಿಸರ್ಗಧಾಮಕ್ಕೆ ಹೋಗುವ ಮಾರ್ಗದಲ್ಲಿರುವ ತಾವರೆಕೆರೆಯ ಜಾಗ ದಾಖಲೆಗಳ ಪ್ರಕಾರ 19 ಎಕರೆ ಇದೆ. ಆದರೆ, ಈ ಕೆರೆ ಸುತ್ತಲಿನ ಜಾಗವನ್ನು ಹಲವು ಪ್ರಭಾವಿಗಳು ಒತ್ತುವರಿ ಮಾಡಿ, ಹೋಂ ಸ್ಟೇ, ಕಾಲೇಜು, ವಿಲ್ಲಾಗಳನ್ನು ನಿರ್ಮಿಸಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

high-court
ಹೈಕೋರ್ಟ್
author img

By

Published : Mar 18, 2021, 10:27 PM IST

ಬೆಂಗಳೂರು: ಕೊಡಗು ಜಿಲ್ಲೆ ಕುಶಾಲನಗರದ ತಾವರೆಕೆರೆ ಒತ್ತುವರಿ ತೆರವು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ನಗರದ ವಕೀಲ ಎನ್.ಪಿ ಅಮೃತೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರ ವಕೀಲರ ವಾದ ಆಲಿಸಿದ ಪೀಠ, ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಜಿಲ್ಲಾಧಿಕಾರಿ, ಕುಶಾಲನಗರ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ, ವಿವೇಕಾನಂದ ಎಜುಕೇಷನ್ ಟ್ರಸ್ಟ್ ಗೆ ನೋಟಿಸ್ ಜಾರಿ ಮಾಡಿತು.

ಅಲ್ಲದೇ, ಅರ್ಜಿದಾರರು ಆರೋಪಿಸಿರುವಂತೆ ಕೆರೆ ಒತ್ತುವರಿಯಾಗಿದೆಯೇ ಎಂಬುದನ್ನು ಪರಿಶೀಲಿಸಲು ಕೊಡಗು ಜಿಲ್ಲಾಧಿಕಾರಿ, ಹಿರಿಯ ಕಂದಾಯ ಅಧಿಕಾರಿಯೊಬ್ಬರನ್ನು ನಿಯೋಜಿಸಬೇಕು. ಅವರು ಕೆರೆ ಮತ್ತು ಬಫರ್ ಜೋನ್ ಸರ್ವೆ ನಡೆಸಿ ಒತ್ತುವರಿ ಗುರುತಿಸಬೇಕು. ಒಂದು ವೇಳೆ ಒತ್ತುವರಿಯಾಗಿದ್ದಲ್ಲಿ ತೆರವು ಮಾಡಲು ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಆರೋಪ: ಕೊಡಗಿನ ಕುಶಾಲನಗರದಿಂದ ನಿಸರ್ಗಧಾಮಕ್ಕೆ ಹೋಗುವ ಮಾರ್ಗದಲ್ಲಿರುವ ತಾವರೆಕೆರೆ ದಾಖಲೆಗಳ ಪ್ರಕಾರ, 19 ಎಕರೆ ಇದೆ. ಆದರೆ, ಈ ಕೆರೆ ಮತ್ತು ಸುತ್ತಲಿನ ಜಾಗವನ್ನು ಹಲವು ಪ್ರಭಾವಿಗಳು ಒತ್ತುವರಿ ಮಾಡಿ, ಹೋಂ ಸ್ಟೇ, ಕಾಲೇಜು, ವಿಲ್ಲಾಗಳನ್ನು ನಿರ್ಮಿಸಿದ್ದಾರೆ. ಇಂತಹ ಒತ್ತುವರಿಗಳಿಂದಾಗಿ ಕೆರೆ ಇದೀಗ ಕೇವಲ 1 ಎಕರೆ 30 ಗುಂಟೆಗೆ ಕುಗ್ಗಿದೆ.

ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ 3,590 ಶಿಕ್ಷಕ ಹುದ್ದೆಗಳ ಭರ್ತಿಗೆ ನಿರ್ಧಾರ: ಸಚಿವ ಸುರೇಶ್ ಕುಮಾರ್

ಕೆರೆ ಪಕ್ಕದ ಕೃಷಿ ಜಾಗವನ್ನು ವಸತಿ ಪ್ರದೇಶಕ್ಕೆ ಪರಿವರ್ತಿಸಿಕೊಂಡು ರಾಜಕಾಲುವೆ ಮುಚ್ಚಿದ್ದರಿಂದ ಕೆರೆ ಅವನತಿ ಅಂಚಿಗೆ ತಲುಪಿದೆ. ಜತೆಗೆ ಮಳೆ ನೀರು ಹರಿದು ಹೋಗಲು ಸಾಧ್ಯವಾಗದೆ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರೂ ಅವರು ಪ್ರಭಾವಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ವಿವೇಕಾನಂದ ಕಾಲೇಜಿನವರು ಕೆರೆಯ ಜಾಗದಲ್ಲಿ ಮಣ್ಣು ತುಂಬಿಸಿ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಮಾಡಿಕೊಂಡಿದ್ದಾರೆ. ಆದ್ದರಿಂದ ಕೆರೆ ಒತ್ತುವರಿ ತೆರವು ಮಾಡಿ ಸಂರಕ್ಷಿಸಲು ಸರ್ಕಾರ ಮತ್ತು ಸಂಬಂಧಿತ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.