ETV Bharat / state

ಮುನಿರತ್ನರನ್ನು ಬೆಂಬಿಡದ ನಕಲಿ ಗುರುತಿನ ಚೀಟಿ ಪ್ರಕರಣ; ತನಿಖೆ ಪರಿಶೀಲಿಸಲು ಹೈಕೋರ್ಟ್ ಸೂಚನೆ

ನಕಲಿ ಗುರುತಿನ ಚೀಟಿ ಪ್ರಕರಣವನ್ನು ಸ್ಥಳೀಯ ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ, ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿರುವ ತನಿಖೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ನೇಮಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

high-court
ಹೈಕೋರ್ಟ್
author img

By

Published : Nov 11, 2020, 2:33 PM IST

Updated : Nov 11, 2020, 2:40 PM IST

ಬೆಂಗಳೂರು: ರಾಜರಾಜೇಶ್ವರಿ ವಿಧಾನ ಸಭಾ ಕ್ಷೇತ್ರಕ್ಕೆ 2018ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಪತ್ತೆಯಾಗಿದ್ದ ನಕಲಿ ಗುರುತಿನ ಚೀಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿರುವ ತನಿಖೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ನೇಮಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ನಕಲಿ ಗುರುತಿನ ಚೀಟಿ ಪ್ರಕರಣವನ್ನು ಸ್ಥಳೀಯ ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ, ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಎನ್. ಆನಂದ್ ಕುಮಾರ್ ಹಾಗೂ ಜಿ. ಸಂತೋಷ್ ಕುಮಾರ್ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎ. ಎಸ್ ಪೊನ್ನಣ್ಣ ವಾದಿಸಿ, ಆರ್.ಆರ್ ನಗರದಲ್ಲಿ ಪತ್ತೆಯಾಗಿದ್ದ ನಕಲಿ ಮತದಾರರ ಗುರುತಿನ ಚೀಟಿ ಪ್ರಕರಣವನ್ನು ಸ್ಥಳೀಯ ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ. ಪ್ರತ್ಯಕ್ಷ್ಯ ಸಾಕ್ಷಿಗಳ ಹೇಳಿಕೆ ದಾಖಲಿಸಿಲ್ಲ. ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿಲ್ಲ. ದಕ್ಷವಾಗಿ ಹಾಗೂ ಪ್ರಾಮಾಣಿಕವಾಗಿ ತನಿಖೆ ನಡೆಸಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿದೆ ಎಂದು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ತನಿಖೆ ಸೂಕ್ತ ರೀತಿಯಲ್ಲಿ ನಡೆದಿದೆಯೇ, ಇಲ್ಲವೇ ಎಂಬುದನ್ನು ನಾವೇ ನಿರ್ಧರಿಸುವುದು ಕಷ್ಟ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಠಾಣೆ ಪೊಲೀಸರು ನಡೆಸಿರುವ ತನಿಖೆಯನ್ನು ಪರಿಶೀಲಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ನೇಮಿಸಬೇಕು. ಅವರು ತನಿಖೆ ಸರಿಯಾಗಿ ನಡೆಸಿದ್ದಾರೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು. ಹಾಗೆಯೇ, ತನಿಖೆ ನಡೆಸಬೇಕಿರುವ ಅಂಶಗಳನ್ನು ಗುರುತಿಸಬೇಕು. ಈ ವರದಿಯನ್ನು ಡಿಸೆಂಬರ್ 15ರೊಳಗೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಡಿಸೆಂಬರ್ 18ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: 2018ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಆರ್​ಆರ್ ನಗರ ವಿಧಾನ ಸಭಾ ಕ್ಷೇತ್ರದಿಂದ ಮುನಿರತ್ನ ಸ್ಪರ್ಧಿಸಿದ್ದರು. ಚುನಾವಣೆಗೂ ಮುನ್ನ ಕ್ಷೇತ್ರದ ವ್ಯಾಪ್ತಿಯ ಜಾಲಹಳ್ಳಿಯ ಬೆಂಬಲಿಗರ ಆಪಾರ್ಟ್​​​ಮೆಂಟ್​ನಲ್ಲಿ 9 ಸಾವಿರಕ್ಕೂ ಅಧಿಕ ವೋಟರ್ ಐಡಿಗಳು ಹಾಗೂ ಮುನಿರತ್ನ ಸ್ಪರ್ಧಿಸಿದ್ದ ಪಕ್ಷದ ಕರಪತ್ರಗಳು ಪತ್ತೆಯಾಗಿದ್ದವು. ಈ ಸಂಬಂಧ ಚುನಾವಣಾ ಆಯೋಗ ಹಾಗೂ ಸ್ಥಳೀಯ ನಿವಾಸಿ ರಾಕೇಶ್ ಪ್ರತ್ಯೇಕವಾಗಿ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಜಾಲಹಳ್ಳಿ ಠಾಣೆ ಪೊಲೀಸರು ಪ್ರಕರಣದ ತನಿಖೆಯನ್ನು ಸರಿಯಾಗಿ ನಡೆಸುತ್ತಿಲ್ಲ ಎಂದು ಆರೋಪಿಸಿರುವ ಅರ್ಜಿದಾರರು ಸಿಬಿಐ ತನಿಖೆ ಕೋರಿದ್ದಾರೆ.

Last Updated : Nov 11, 2020, 2:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.