ETV Bharat / state

ನಕಲಿ ನೋಂದಣಿ ದಾಖಲೆ ಸೃಷ್ಟಿಯ ತನಿಖೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಬೇಕು: ಎಸ್ಐಟಿಗೆ ಹೈಕೋರ್ಟ್ ಸೂಚನೆ

ನಗರದ ವಿವಿಧ ಸಬ್ ರಿಜಿಸ್ಟ್ರಾರ್ ಕಚೇರಿಗಳ ನಕಲಿ ಸೀಲ್ ಮತ್ತು ಫ್ರಾಂಕಿಂಗ್ ಯಂತ್ರಗಳನ್ನು ಬಳಸಿ ನಕಲಿ ನೋಂದಣಿ ದಾಖಲೆಗಳನ್ನು ಸೃಷ್ಟಿ ಮಾಡಿರುವ ಪ್ರಕರಣದ ವಿಚಾರಣೆ ನಡೆಸಲಾಗಿ ಕೋರ್ಟ್​ ಎಸ್ಐಟಿಗೆ ಸೂಚನೆ ನೀಡಿದೆ.

High Court notice to SIT over Fake registration document creation
ಎಸ್ಐಟಿಗೆ ಹೈಕೋರ್ಟ್ ಸೂಚನೆ
author img

By

Published : Sep 8, 2021, 2:00 AM IST

ಬೆಂಗಳೂರು: ನಕಲಿ ನೋಂದಣಿ ದಾಖಲೆ ಸೃಷ್ಟಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತಿಂಗಳೊಳಗೆ ಪೂರ್ಣಗೊಳಿಸುವಂತೆ ಎಸ್ಐಟಿಗೆ ಹೈಕೋರ್ಟ್ ಸೂಚನೆ ನೀಡಿದೆ.

ನಗರದ ವಿವಿಧ ಸಬ್ ರಿಜಿಸ್ಟ್ರಾರ್ ಕಚೇರಿಗಳ ನಕಲಿ ಸೀಲ್ ಮತ್ತು ಫ್ರಾಂಕಿಂಗ್ ಯಂತ್ರಗಳನ್ನು ಬಳಸಿ ನಕಲಿ ನೋಂದಣಿ ದಾಖಲೆಗಳನ್ನು ಸೃಷ್ಟಿ ಮಾಡಿರುವ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಈ ಸಂಬಂಧ ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸುವಂತೆ ವಿಶೇಷ ತನಿಖಾ ತಂಡಕ್ಕೆ ( ಎಸ್ಐಟಿ) ಗಡುವು ನೀಡಿದೆ.

ತ್ಯಾಗರಾಜನಗರ ನಿವಾಸಿ ಎಸ್. ನಾರಾಯಣ ಅವರು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸಿಬಿಐಗೆ ವಹಿಸುವಂತೆ ಮನವಿ ಮಾಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಸಿ.ಶರ್ಮ ಅವರ ನೇತೃತ್ವದ ವಿಭಾಗೀಯ ಪೀಠ, ಮೂರು ತಿಂಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸಬೇಕು ಎಂದು ಎಸ್‌ಐಟಿಗೆ ಸೂಚಿಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿಜಯ್ ಕುಮಾರ್ ಪಾಟೀಲ್, ಪ್ರಕರಣ ಸಂಬಂಧ ಪ್ರತ್ಯೇಕ ಐದು ಎಫ್‌ಐಆರ್ ದಾಖಲಾಗಿವೆ. ಪ್ರಕರಣವನ್ನು ಐಎಎಸ್ ಅಧಿಕಾರಿ ನೇತೃತ್ವದ ಎಸ್‌ಐಟಿಯು ತನಿಖೆ ನಡೆಸುತ್ತಿದೆ. ಈವರೆಗೂ ನಡೆದಿರುವ ತನಿಖಾ ಪ್ರಗತಿ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಇನ್ನೂ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬರಬೇಕಿದೆ. ಹೀಗಾಗಿ, ಮುಂದಿನ ತನಿಖೆಯ ವರದಿ ಸಲ್ಲಿಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಬೇಕು. ಆ ಸಂಬಂಧ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಎಸ್‌ಐಟಿಗೆ ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು.

ಬೆಂಗಳೂರು ನಗರದ ಯಲಹಂಕ, ಶಿವಾಜಿ ನಗರ ಮತ್ತು ಕೆಂಗೇರಿ ಸೇರಿ ವಿವಿಧ ಸಬ್ ರಿಜಿಸ್ಟ್ರಾರ್ ಕಚೇರಿಗಳ ನಕಲಿ ಸೀಲ್ ಮತ್ತು ಫ್ರಾಂಕಿಂಗ್ ಯಂತ್ರಗಳನ್ನು ಬಳಸಿ ನಕಲಿ ನೋಂದಣಿ ದಾಖಲೆ ಸೃಷ್ಟಿಸಲಾಗಿದೆ. ಈ ಕುರಿತು ಗಾಂಧಿ ನಗರದ ಹಿರಿಯ ಉಪನೋಂದಣಾಧಿಕಾರಿ ಕಳೆದ ವರ್ಷ ಡಿಸೆಂಬರ್ 21ರಂದು ಹಲಸೂರುಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆ ದೂರಿನ ಮೇಲೆ ಕಳೆದ ಜನವರಿ 4ರಂದು ಅನಾಮಧೇಯ ವ್ಯಕ್ತಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ, ಎಫ್‌ಐಆರ್ ದಾಖಲಾಗಿ ಹಲವು ದಿನಗಳು ಕಳೆದರೂ ತನಿಖೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ, ಯಾವೊಬ್ಬ ಆರೋಪಿಯನ್ನೂ ಬಂಧಿಸಿಲ್ಲ. ಇದು ಆರ್ಥಿಕ ಅಪರಾಧಕ್ಕೆ ಸಂಬಂಧಿಸಿದ ಗಂಭೀರ ಕೃತ್ಯವಾಗಿದ್ದು, ರಾಜ್ಯದ ಆರ್ಥಿಕತೆಗೆ ಹಾನಿಯುಂಟಾಗಲಿದೆ.

ಸ್ಥಳೀಯ ಪೊಲೀಸರು ಸೂಕ್ತ ತನಿಖೆ ನಡೆಸದ ಕಾರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಇದನ್ನು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಎಸ್ಐಟಿಗೆ ಮೂರು ತಿಂಗಳ ಗಡುವು ನೀಡಿ ಆದೇಶ ಹೊರಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.