ಬೆಂಗಳೂರು: ಹೈಕೋರ್ಟ್‌ನ ಕಾರ್ಯಕಲಾಪಗಳ ನೇರ ಪ್ರಸಾರ ಮಾಡಬೇಕು ಹಾಗೂ ಆಡಿಯೋ ರೆಕಾರ್ಡಿಂಗ್‌ಗೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ವಕೀಲ ದಿಲ್‌ರಾಜ್ ರೋಹಿತ್ ಸಿಕ್ವೇರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅವರಿದ್ದ ಪೀಠದಲ್ಲಿ ನಡೆಯಿತು. ಅರ್ಜಿದಾರ ಪರ ವಾದ ಮಂಡಿಸಿದ ವಕೀಲರು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್‌ನ ಕಾರ್ಯಕಲಾಪದ ನೇರ ಪ್ರಸಾರ ಮಾಡಬೇಕು ಹಾಗೂ ಆಡಿಯೋ ರೆಕಾರ್ಡಿಂಗ್ ಮಾಡಬೇಕು. ಸದ್ಯ ಸುಪ್ರೀಂಕೋರ್ಟ್ ಈಗಾಗಲೇ ಆದೇಶ ನೀಡಿದೆ. ಈ ಆದೇಶವನ್ನು ಜಾರಿಗೆ ತರಲು ನಿರ್ದೇಶನ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಲಯ ಸುಪ್ರೀಂಕೋರ್ಟ್ ಆದೇಶವಿದ್ದರೂ ಕ್ಯಾಮೆರಾಗಳನ್ನು ಯಾವ ಸ್ಥಳದಲ್ಲಿ ಅಳವಡಿಸಬೇಕು? ಎಷ್ಟು ಅಳವಡಿಸಬೇಕು ಎಂದು ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿತು.