ETV Bharat / state

ಒಳ ಮೀಸಲಾತಿ ಶಿಫಾರಸು ಆದೇಶ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - ಮಾಜಿ ಅಧ್ಯಕ್ಷ ಎ ಪಿ ರಂಗನಾಥ್

ಪರಿಶಿಷ್ಟ ಜಾತಿಗಳ ವರ್ಗೀಕರಣ ಶಿಫಾರಸ್ಸು ಆದೇಶ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್ ಜಾರಿ ಮಾಡಿದೆ.

ಹೈಕೋರ್ಟ್​
ಹೈಕೋರ್ಟ್​
author img

By

Published : May 18, 2023, 11:03 PM IST

ಬೆಂಗಳೂರು : ಪರಿಶಿಷ್ಟ ಜಾತಿಗಳ ವರ್ಗೀಕರಣ (ಒಳ ಮೀಸಲಾತಿ) ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯ ಅಧ್ಯಕ್ಷ ರವಿಮಾಕಳಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತಾಮನಾಥ ಹೆಗಡೆ ಅವರಿದ್ದ ರಜಾಕಾಲದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೇ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆಯನ್ನು ಮೇ 24ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಎಸ್​ಡಿಪಿಐ ಕಚೇರಿ ಮೇಲೆ ದಾಳಿ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸರ್ಕಾರದ ನಿರ್ಧಾರವನ್ನು ರದ್ದು ಪಡಿಸಬೇಕು: ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿ ಹೆಚ್. ವಿ. ಮಂಜುನಾಥ, ಕಾನೂನು ಸಚಿವರಾಗಿದ್ದ ಜೆ ಸಿ ಮಾಧುಸ್ವಾಮಿಯವರ ಅಧ್ಯಕ್ಷತೆಯ ಸಚಿವ ಸಂಪುಟದ ಉಪಸಮಿತಿ ಯಾವುದೇ ಅಧ್ಯಯನ ನಡೆಸದೆ ಆತುರವಾಗಿ ನೀಡಿದ ವರದಿಯನ್ನು ಆಧರಿಸಿ ಪರಿಶಿಷ್ಟ ಜಾತಿಗಳನ್ನು ವರ್ಗೀಕರಿಸಿ ಒಳ ಮೀಸಲಾತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡುವುದಕ್ಕೆ ನಿರ್ಧರಿಸಿದೆ. ಈ ನಿರ್ಧಾರದಿಂದ ಬಂಜಾರ, ಭೋವಿ, ಕೊರಮ, ಕೊರಚ ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಸರ್ಕಾರದ ನಿರ್ಧಾರವನ್ನು ರದ್ದು ಪಡಿಸಬೇಕು ಎಂದು ಕೋರಿದರು.

ಕಾನೂನು ಶಾಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸೀಟು ನೀಡಲು ಅಗತ್ಯ ತಿದ್ದುಪಡಿಗೆ ಆಗ್ರಹ: ರಾಜಧಾನಿಯ ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಸೀಟುಗಳನ್ನು ಮೀಸಲಿಡುವ ಕುರಿತು ನೀತಿಗೆ ತಿದ್ದುಪಡಿ ಮಾಡುವಂತೆ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ ಪಿ ರಂಗನಾಥ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಪಘಾತದಲ್ಲಿ ಬೈಕ್​ ಸವಾರನ ಶೇ.50ರಷ್ಟು ನಿರ್ಲಕ್ಷ್ಯದ ಹೊಣೆ ಹೊರಿಸಿದ್ದ ಎಂಎಸಿಟಿ ಆದೇಶ ಎತ್ತಿಹಿಡಿದ ಹೈಕೋರ್ಟ್​

ಈ ಸಂಬಂಧ ರಂಗನಾಥ್ ಎನ್‌ಎಲ್‌ಎಸ್‌ಯು ಕುಲಪತಿ ಪ್ರೊ. ಸುಧೀರ್ ಕೃಷ್ಣಮೂರ್ತಿ ಅವರಿಗೆ ಪತ್ರ ಬರೆದಿದ್ದಾರೆ. ಎನ್‌ಎಲ್‌ಎಸ್‌ಐಯು ನಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಸೀಟುಗಳನ್ನು ನೀಡಬೇಕಾದ್ದು ವಿವಿಯ ಕರ್ತವ್ಯ ಮತ್ತು ಆ ಸ್ಥಳೀಯ ಕ್ಯಾಟಗರಿ ವಿಭಾಗದಲ್ಲಿ ಅಖಿಲ ಭಾರತ ರ‍್ಯಾಂಕಿಂಗ್ ಸೇರಿಸಬಾರದು.

ಇದನ್ನೂ ಓದಿ: ಸಹಕಾರ ಸಂಘಗಳ ಅಧ್ಯಕ್ಷರ ವಿರುದ್ಧ ಸದಸ್ಯರು ಅವಿಶ್ವಾಸ ನಿರ್ಣಯ ಮಂಡನೆ ಮಾಡಿದರೆ ಕಾರಣ ನೀಡುವ ಅಗತ್ಯವಿಲ್ಲ: ಹೈಕೋರ್ಟ್

ಅದಕ್ಕೆ ಅನುವಾಗುವಂತೆ ತಿದ್ದುಪಡಿಯನ್ನು ಮಾಡಬೇಕು ಎಂದು ಕೋರಿದ್ದಾರೆ. ಇಲ್ಲವಾದರೆ ಸರ್ಕಾರಕ್ಕೆ ಕಾನೂನು ಶಾಲೆಗೆ ನೀಡುವ ಅನುದಾನವನ್ನು ವಾಪಸ್ ಪಡೆಯುವಂತೆ ಕೋರಲಾಗುವುದು ಮತ್ತು ಕರ್ನಾಟಕ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.