ETV Bharat / state

ಅಮೃತಮಹಲ್ ಹುಲ್ಲುಗಾವಲು ಒತ್ತುವರಿ : ಅರಣ್ಯ,ಪಶುಸಂಗೋಪನೆ ಇಲಾಖೆ ಅಧಿಕಾರಿಗಳ ಹಾಜರಿಗೆ ಹೈಕೋರ್ಟ್ ಸೂಚನೆ

ಚಿಕ್ಕಮಗಳೂರಿನಲ್ಲಿ ಸುಮಾರು 4,266 ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ ಎಂಬ ಆರೋಪವಿದ್ದರೂ, ದೇವನೂರು ಮತ್ತು ಬಾಸೂರು ಕಾವಲ್‌ನಲ್ಲಿ ಯಾವುದೇ ಒತ್ತುವರಿ ನಡೆದಿಲ್ಲ ಎಂದು ಪ್ರಮಾಣ ಪತ್ರದಲ್ಲಿ ಹೇಳಲಾಗಿದೆ. ಆದರೆ, ಒತ್ತುವರಿ ತೆರವಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿಲ್ಲ. ಅಧಿಕಾರಿಗಳಿಗೆ ಮಾಸಿಕ 25 ಎಕರೆ ಒತ್ತುವರಿ ತೆರವುಗೊಳಿಸಲು ಗುರಿ ನೀಡಲಾಗಿದೆ ಎಂದು ಪ್ರಮಾಣ ಪತ್ರದಲ್ಲಿ ಹೇಳಲಾಗಿದೆ.

high-court
ಹೈಕೋರ್ಟ್
author img

By

Published : Jan 17, 2022, 11:11 PM IST

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಮೃತ್ ಮಹಲ್ ಕಾವಲ್ ಜಮೀನು ಒತ್ತುವರಿ ತೆರವುಗೊಳಿಸದ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಅರಣ್ಯ ಇಲಾಖೆ ಮತ್ತು ಪಶುಸಂಗೋಪನೆ ಇಲಾಖೆ ಹಿರಿಯ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಒತ್ತುವರಿ ತೆರವು ಕೋರಿ ವೈಲ್ಡ್ ಲೈಫ್ ಕನ್ಸರ್‌ವೇಷನ್ ಆಕ್ಷನ್ ಟೀಂ ಸಲ್ಲಿಸಿರುವ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ನ್ಯಾಯಾಲಯದ ನಿರ್ದೇಶನದ ಹೊರತಾಗಿಯೂ ಅಮೃತ್‌ಮಹಲ್ ಕಾವಲ್ ಜಮೀನು ಒತ್ತುವರಿ ತೆರವು ಮಾಡದ ಹಿನ್ನಲೆ 2022ರ ಫೆ.8ರಂದು ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ವಿವರಣೆ ನೀಡುವಂತೆ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಪಶುಸಂಗೋಪನೆ ಇಲಾಖೆಯ ಅಮೃತ್ ಕಾವಲ್ ಜಾನುವಾರು ಕೇಂದ್ರದ ಉಪ ನಿರ್ದೇಶಕರಿಗೆ ತಾಕೀತು ಮಾಡಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಮೃತ್‌ ಮಹಲ್ ಕಾವಲು ಸಂರಕ್ಷಿತ ಅರಣ್ಯ ಪ್ರದೇಶ ಸೇರಿದಂತೆ ಒತ್ತುವರಿಯಾಗಿರುವ ಸರ್ಕಾರಿ ಜಮೀನಿನ ತೆರವು ಕಾರ್ಯಚರಣೆ ಕೈಗೊಳ್ಳಬೇಕು. ಒತ್ತುವರಿ ತೆರವಿಗೆ ವಿಶೇಷ ಕಾರ್ಯಪಡೆ ರಚಿಸಿ ಆ ಕುರಿತು ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಅರಣ್ಯ ಇಲಾಖೆ ಪ್ರಧಾನ ಕಾಯದರ್ಶಿಗೆ ಹೈಕೋರ್ಟ್ 2018ರ ಡಿ.2ರಂದು ನಿರ್ದೇಶಿಸಿತ್ತು. ಈ ಆದೇಶ ಪಾಲಿಸಲು ನ್ಯಾಯಾಲಯದಿಂದ ಪದೇ ಪದೆ ಕಾಲಾವಕಾಶ ಪಡೆದಿದ್ದ ಅಧಿಕಾರಿಗಳು, 2021ರ ನ. 26ರಂದು ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬದಲಾಗಿ ಪಶು ಸಂಗೋಪನಾ ಇಲಾಖೆ ಅಮೃತ್‌ಮಹಲ್ ಕಾವಲ್ ಜಾನುವಾರು ಸಂತಾನೋತ್ಪತ್ತಿ ಕೇಂದ್ರದ ಉಪ ನಿರ್ದೇಶಕರು ಪ್ರಮಾಣ ಪತ್ರ ಸಲ್ಲಿಸಿದ್ದರು.

ಚಿಕ್ಕಮಗಳೂರಿನಲ್ಲಿ ಸುಮಾರು 4,266 ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ ಎಂಬ ಆರೋಪವಿದ್ದರೂ, ದೇವನೂರು ಮತ್ತು ಬಾಸೂರು ಕಾವಲ್‌ನಲ್ಲಿ ಯಾವುದೇ ಒತ್ತುವರಿ ನಡೆದಿಲ್ಲ ಎಂದು ಪ್ರಮಾಣ ಪತ್ರದಲ್ಲಿ ಹೇಳಲಾಗಿದೆ. ಆದರೆ, ಒತ್ತುವರಿ ತೆರವಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿಲ್ಲ. ಅಧಿಕಾರಿಗಳಿಗೆ ಮಾಸಿಕ 25 ಎಕರೆ ಒತ್ತುವರಿ ತೆರವುಗೊಳಿಸಲು ಗುರಿ ನೀಡಲಾಗಿದೆ ಎಂದು ಪ್ರಮಾಣ ಪತ್ರದಲ್ಲಿ ಹೇಳಲಾಗಿದೆ.

ಅದರರ್ಥ ಒತ್ತುವರಿ ತೆರವುಗೊಳಿಸಲು ಸರ್ಕಾರ ಸೂಕ್ತ ಕ್ರಮಕೈಗೊಂಡಿದೆ ಎಂದಲ್ಲ. ನ್ಯಾಯಾಲಯದ ಆದೇಶವನ್ನು ಪಾಲಿಸದಕ್ಕೆ ಮತ್ತು ನ್ಯಾಯಾಲಯದ ಆದೇಶಕ್ಕೆ ತ್ವದ್ವಿರುದ್ಧವಾಗಿ ಪ್ರಮಾಣ ಪತ್ರ ಸಲ್ಲಿಸಿರುವುದರಿಂದ ಅಧಿಕಾರಿಗಳು ವಿಚಾರಣೆಗೆ ಖುದ್ದು ಹಾಜರಾಗಿ ವಿವರಣೆ ನೀಡಬೇಕು ಎಂದು ಪೀಠ ನಿರ್ದೇಶಿಸಿದೆ.

ಓದಿ: ಬೆಂಗಳೂರು-ಮೈಸೂರು ದಶಪಥ ರಸ್ತೆ ದಸರಾ ವೇಳೆಗೆ ಸಂಚಾರಕ್ಕೆ ಮುಕ್ತ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.