ETV Bharat / state

ಆರು ಜಿಲ್ಲಾ ನ್ಯಾಯಾಧೀಶರಿಗೆ ಹುದ್ದೆ ತೋರಿಸಿ ಹೈಕೋರ್ಟ್ ಅಧಿಸೂಚನೆ

ನೂತನವಾಗಿ ನೇಮಕಗೊಂಡ ಆರು ಮಂದಿ ಜಿಲ್ಲಾ ನ್ಯಾಯಾಧೀಶರು - ನಿಯೋಜಿತ ನ್ಯಾಯಾಧೀಶರು ಜ.16ರ ಮುಂಜಾನೆಯಿಂದ ಅಧಿಕಾರ ವಹಿಸಿಕೊಳ್ಳುವಂತೆ ಅಧಿಸೂಚನೆ - ಜಾಹೀರಾತು ಫಲಕ ಪ್ರದರ್ಶಿಸಲು ಎಚ್‌ಎಲ್‌ಗೆ ಅನುಮತಿ ನೀಡಲು ಹೈಕೋರ್ಟ್ ಬಿಬಿಎಂಪಿಗೆ ಅವಕಾಶ ಕಲ್ಪಿಸಿದೆ

High Court
ಹೈಕೋರ್ಟ್
author img

By

Published : Jan 12, 2023, 10:55 PM IST

ಬೆಂಗಳೂರು :ನೂತನವಾಗಿ ಆರು ಮಂದಿ ಜಿಲ್ಲಾ ನ್ಯಾಯಾಧೀಶರು ನೇಮಕಗೊಂಡಿದ್ದಾರೆ. ಇದರ ಬೆನ್ನಲೆ ನೂತನವಾಗಿ ನೇಮಕಗೊಂಡಿರುವ ಆರು ಜಿಲ್ಲಾ ನ್ಯಾಯಾಧೀಶರಿಗೆ ಹುದ್ದೆ ತೋರಿಸಿ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ.

ಗಂಗಪ್ಪ ಈರಪ್ಪ ಪಾಟೀಲ್ ಅವರಿಗೆ ಬೆಂಗಳೂರು ನಗರದ 57 ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಸುಮಂಗಲ ಚಕಲಬ್ಬಿ ಅವರಿಗೆ ಬೆಂಗಳೂರು ನಗರದ 41 ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಎನ್.ಆರ್. ಮಧು ಅವರಿಗೆ ಬೆಂಗಳೂರು ನಗರದ 30 ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಿಯೋಜಿನೆಗೊಂಡರೆ, ಉಳಿದ ಆನಂದ ಅವರಿಗೆ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಎ.ಸಿರಾಜುದ್ದೀನ್ ಅವರಿಗೆ ಬೆಂಗಳೂರು ನಗರದ 20 ನೇ ಹೆಚ್ಚುವರಿ ಮತ್ತು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಡಿ.ಸರಿತಾ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ಬಿ.ಎಲ್. ಮಾಯಣ್ಣ ಅವರಿಗೆ ಉತ್ತರ ಕನ್ನಡ ಜಿಲ್ಲೆಯ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿ ನಿಯೋಜಿಸಲಾಗಿದೆ. ಈ ಎಲ್ಲಾ ನಿಯೋಜಿತ ನ್ಯಾಯಾಧೀಶರು ಜ.16ರ ಮುಂಜಾನೆಯಿಂದ ಅಧಿಕಾರ ವಹಿಸಿಕೊಳ್ಳಬೇಕು ಎಂದು ರಿಜಿಸ್ಟ್ರಾರ್ ಜನರಲ್ ಬಿ.ಮುರಳೀಧರ ಪೈ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಏರೋ ಇಂಡಿಯಾಗೆ ಫ್ಫ್ಲೆಕ್ಸ್ ಹಾಕಲು ಅನುಮತಿ : ನಗರದ ಯಲಹಂಕ ಐಎಎಫ್ (ಭಾರತೀಯ ವಾಯುಪಡೆ) ವಾಯುನೆಲೆಯಲ್ಲಿ ಫೆ.13ರಿಂದ ಐದು ದಿನಗಳ ಕಾಲ ‘ಏರೋ ಇಂಡಿಯಾ-2023’ ವೈಮಾನಿಕ ಪ್ರದರ್ಶನ ನಡೆಯಲಿದೆ. ಇದಕ್ಕಾಗಿ ನಗರದ ಹಲವೆಡೆ ತಾತ್ಕಾಲಿಕ ಹೋರ್ಡಿಂರ್ಗ್ಸ್ ಅಳವಡಿಸಲು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ (ಎಚ್‌ಎಎಲ್) ಬಿಬಿಎಂಪಿ ಅನುಮತಿ ನೀಡಬಹುದು ಎಂದು ಹೈಕೋರ್ಟ್ ಗುರುವಾರ ಸ್ಪಷ್ಟಪಡಿಸಿದೆ. ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಲ್ಲಿಸಿರುವ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಹೊರಡಿಸಿತು.

ಅಲ್ಲದೆ, ನಗರದಲ್ಲಿ ಅನಧಿಕೃತ ಜಾಹೀರಾತು ಫಲಕ ಅಳವಡಿಕೆ ತಡೆಯುವ ವಿಚಾರದಲ್ಲಿ ಹೈಕೋರ್ಟ್ ಈ ಹಿಂದೆ ನಿರ್ದೇಶನಗಳನ್ನು ನೀಡಿತ್ತು. ಅವುಗಳನ್ನು ಜಾರಿಗೆ ತರುವಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರವಾದ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ನ್ಯಾಯಪೀಠ ಇದೇ ವೇಳೆ ಸೂಚಿಸಿದೆ. ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲ ರಮೇಶ್ ಹಾಜರಾಗಿ, ನಗರದ ಯಲಹಂಕ ಐಎಎಫ್ ವಾಯುನೆಲೆಯಲ್ಲಿ ಫೆ.13ರಿಂದ ೧7ರವರೆಗೆ ‘ಏರೋ ಇಂಡಿಯಾ-2023’ ವೈಮಾನಿಕ ಪ್ರದರ್ಶನ ನಡೆಯಲಿದೆ.

ಇದು ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದ್ದು, ಭಾರತದ ವಿವಿಧ ರಾಜ್ಯ ಮತ್ತು ಜಗತ್ತಿನ ಹಲವು ರಾಷ್ಟ್ರಗಳಿಂದ ಜನ ಬೆಂಗಳೂರು ನಗರಕ್ಕೆ ಪ್ರದರ್ಶನಕ್ಕೆ ಆಗಮಲಿಸಿದ್ದಾರೆ. ಹೀಗಾಗಿ, ಅವರಿಗೆ ಸೂಕ್ತ ಮಾಹಿತಿ ಹಾಗೂ ತಿಳಿವಳಿಕೆ ಮೂಡಿಸುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಹೋರ್ಡಿಂಗ್, ಸೂಚನಾಫಲಕ ಮತ್ತು ಮಾರ್ಗ ನಕ್ಷೆ ಅಳವಡಿಸಲು ಅನುಮತಿ ನೀಡುವಂತೆ ಎಚ್‌ಎಎಲ್ ಬಿಬಿಎಂಪಿಗೆ ಮನವಿ ನೀಡಿದೆ.

ಬಳಿಕ ಏರ್ ಶೋ ಮುಗಿದ ಕೂಡಲೇ ಅವುಗಳನ್ನು ತೆರವುಗೊಳಿಸುವುದಾಗಿಯೂ ತಿಳಿಸಿದೆ ಎಂದು ವಿವರಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಏರೋ ಇಂಡಿಯಾ-2023ಕ್ಕೆ ಸಂಬಂಧಿಸಿದ ಜಾಹೀರಾತು ಫಲಕ ಪ್ರದರ್ಶಿಸಲು ಎಚ್‌ಎಲ್‌ಗೆ ಅನುಮತಿ ನೀಡಲು ಬಿಬಿಎಂಪಿಗೆ ಅವಕಾಶ ಕಲ್ಪಿಸಿತು.

ಇದನ್ನೂ ಓದಿ :ಫೆ. 13 ರಿಂದ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.