ETV Bharat / state

16 ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ : ಹೈಕೋರ್ಟ್ ಅಧಿಸೂಚನೆ - ಈಟಿವಿ ಭಾರತ ಕನ್ನಡ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ರಾಜ್ಯ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ.

high-court-notification-to-filling-up-posts-of-district-judges
16 ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ : ಹೈಕೋರ್ಟ್ ಅಧಿಸೂಚನೆ
author img

By

Published : Sep 21, 2022, 5:19 PM IST

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ 16 (14 ಬ್ಯಾಕ್ ಲಾಗ್, 2 ಖಾಲಿ ಹುದ್ದೆ) ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ರಾಜ್ಯ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಹಾಗೂ ಪರೀಕ್ಷಾ ಶುಲ್ಕ ಪಾವತಿಗೆ ಅಕ್ಟೋಬರ್ 21 ಅಂತಿಮ ದಿನವಾಗಿದೆ.

ಅರ್ಜಿ ಸಲ್ಲಿಸಲು ಬಯಸುವವರು ಕಾನೂನು ಪ್ರಕಾರ ಸ್ಥಾಪನೆಯಾಗಿರುವ ಯಾವುದೇ ಕಾಲೇಜಿನಿಂದ ಕಾನೂನು ಪದವಿ ಪಡೆದಿರಬೇಕು. ಹೈಕೋರ್ಟ್ ಸೇರಿದಂತೆ ಯಾವುದೇ ನ್ಯಾಯಾಲಯದಲ್ಲಿ ಕನಿಷ್ಠ 7 ವರ್ಷ ವಕೀಲಿ ವೃತ್ತಿ ಮಾಡಿರಬೇಕು. ವಯೋಮಿತಿಯು ಸಾಮಾನ್ಯ ವರ್ಗಕ್ಕೆ 45, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 48 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಮೂರು ಹಂತಗಳಿರಲಿದೆ. ಪೂರ್ವಭಾವಿ ಪರೀಕ್ಷೆ, ಮುಖ್ಯಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಪರೀಕ್ಷಾ ಶುಲ್ಕ: ಪೂರ್ವಭಾವಿ ಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 500 ರೂ., ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಕ್ಕೆ 250 ರೂ., ಮುಖ್ಯಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 1,000 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 750 ರೂ. ಇರಲಿದೆ. ಆದರೆ, ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟವಾದ 15 ದಿನದಲ್ಲಿ ಮುಖ್ಯಪರೀಕ್ಷೆಗೆ ಶುಲ್ಕ ಪಾವತಿ ಮಾಡಬೇಕು. ವಿಳಂಬವಾದಲ್ಲಿ ಪರಿಗಣಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಖಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯತ್ತ ಬೊಟ್ಟು ಮಾಡಬೇಡಿ: ಶಿಕ್ಷಣ ಸಚಿವರಿಗೆ ಚಾಟಿ ಬೀಸಿದ ಸದಸ್ಯರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.