ETV Bharat / state

17 ತಿಂಗಳ ಮಗುವಿನ ಚಿಕಿತ್ಸೆಗೆ 16 ಕೋಟಿ ವೆಚ್ಚ : 10 ದಿನದಲ್ಲಿ ಅಗತ್ಯ ಕ್ರಮಕ್ಕೆ ಹೈಕೋರ್ಟ್ ಸೂಚನೆ - ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದಂತೆ ತಜ್ಞ ವೈದ್ಯರು ತಪಾಸಣೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು 10 ದಿನಗಳ ಕಾಲಾವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರದ ಪರ ವಕೀಲರ ಕೋರಿದ್ದಾರೆ.

high-court-on-costly-treatment-for-child
17 ತಿಂಗಳ ಮಗುವಿನ ಚಿಕಿತ್ಸೆಗೆ 16 ಕೋಟಿ ವೆಚ್ಚ : 10 ದಿನದಲ್ಲಿ ಅಗತ್ಯ ಕ್ರಮಕ್ಕೆ ಹೈಕೋರ್ಟ್ ಸೂಚನೆ
author img

By

Published : Oct 23, 2021, 11:19 PM IST

ಬೆಂಗಳೂರು: ಬೆನ್ನುಮೂಳೆ ಸ್ನಾಯುಗಳ ಕ್ಷೀಣತೆ (ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ ಟೈಪ್-1) ಕಾಯಿಲೆಯಿಂದ ಬಳಲುತ್ತಿರುವ 17 ತಿಂಗಳ ಮಗು ಜನೀಶ್‌ಗೆ ಚಿಕಿತ್ಸೆ ನೀಡುವ ಸಂಬಂಧ 10 ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗು ಜನೀಶ್ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲು ಸರ್ಕಾರಗಳಿಗೆ ನಿರ್ದೇಶಿಸುವಂತೆ ಮಗುವಿನ ತಂದೆ, ಸಂಜೀವಿನಿ ನಗರ ನಿವಾಸಿ ನವೀನ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಈ ಸೂಚನೆ ನೀಡಿದೆ.

ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಕೀಲರು ಮನವಿ ಮಾಡಿ, ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದಂತೆ ತಜ್ಞ ವೈದ್ಯರು ತಪಾಸಣೆ ನಡೆಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ನೆರವು ನೀಡುವ ಸಂಬಂಧ ತಾಂತ್ರಿಕ ತಜ್ಞರ ಸಮಿತಿ ಪರಿಶೀಲನೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು 10 ದಿನಗಳ ಕಾಲಾವಕಾಶ ನೀಡಬೇಕು ಎಂದು ಕೋರಿದ್ದಾರೆ. ಈ ಮನವಿಯ ಪರಿಗಣಿಸಿರುವ ಪೀಠ 10 ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ, ವಿಚಾರಣೆಯನ್ನು ಅ.29ಕ್ಕೆ ಮುಂದೂಡಿದೆ.

ಹಿಂದಿನ ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಕೀಲರು, ಅಪರೂಪದ ಕಾಯಿಲೆಗಳ ಚಿಕಿತ್ಸೆಗೆಂದೇ ಪ್ರತ್ಯೇಕ ನೀತಿ ಇದೆ. ಆ ಪ್ರಕಾರ ಮಗುವನ್ನು ಸರ್ಕಾರಿ ಆಸ್ಪತ್ರೆಯ ವೈದ್ಯರು ತಪಾಸಣೆ ನಡೆಸಿ ವರದಿ ನೀಡಬೇಕಿದೆ. ಆದ್ದರಿಂದ ಮಗುವನ್ನು ತಪಾಸಣೆಗಾಗಿ ಬೆಂಗಳೂರಿನ ನಿಮ್ಹಾನ್ಸ್​​​ ಆವರಣದಲ್ಲಿರುವ ಐಜಿಐಸಿಎಚ್‌ಗೆ ಕರೆದೊಯ್ಯಬಹುದು. ಅಲ್ಲಿನ ವೈದ್ಯರು ಆರೋಗ್ಯ ಸ್ಥಿತಿ ತಪಾಸಣೆ ನಡೆಸಿ, ತಜ್ಞರ ಸಮಿತಿಗೆ ವರದಿ ಸಲ್ಲಿಸುತ್ತಾರೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಬಹುದು ಎಂದು ಪೀಠಕ್ಕೆ ತಿಳಿಸಿದ್ದರು.

ಹೇಳಿಕೆ ಪರಿಗಣಿಸಿದ್ದ ಪೀಠ, ಪೋಷಕರು ಮಗುವನ್ನು ಇಂದೇ ಆಸ್ಪತ್ರೆಗೆ ಕರೆದೊಯ್ಯಬೇಕು. ವೈದ್ಯರು ತಕ್ಷಣವೇ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಬೇಕು. ಒಂದೊಮ್ಮೆ ವೈದ್ಯರು ಸರಿಯಾಗಿ ಪ್ರತಿಕ್ರಿಯಿಸದಿದ್ದರೆ ನ್ಯಾಯಾಲಯ ಅದನ್ನು ಗಂಭೀರವಾಗಿ ಪರಿಗಣಿಸಲಿದೆ. ಚಿಕಿತ್ಸೆ ವಿಳಂಬದಿಂದ ಮಗುವಿನ ಜೀವಕ್ಕೆ ಅಪಾಯವಾದರೆ ಅರ್ಜಿಯಲ್ಲಿನ ಪ್ರತಿವಾದಿಗಳು ಹೊಣೆಯಾಗಲಿದ್ದಾರೆ ಎಂದು ಎಚ್ಚರಿಸಿತ್ತು.

ಅರ್ಜಿದಾರರ ಮನವಿ: ಕಾಯಿಲೆಯಿಂದ ಬಳಲುತ್ತಿರುವ ಮಗುವಿಗೆ ತುರ್ತು ಚಿಕಿತ್ಸೆ ಅಗತ್ಯವಿದ್ದು, ಭಾರತದಲ್ಲಿ ಔಷಧ ಲಭ್ಯವಿಲ್ಲ. ಚಿಕಿತ್ಸೆಗೆ ಅಗತ್ಯವಿರುವ ಜೊಲ್ಗೆನಿಸ್ಮ ಚುಚ್ಚುಮದ್ದನ್ನು ಅಮೆರಿಕದಿಂದಲೇ ಆಮದು ಮಾಡಿಕೊಳ್ಳಬೇಕಿದೆ. ಅಂದಾಜು 16 ಕೋಟಿ ರೂಪಾಯಿ ವೆಚ್ಚವಾಗುತ್ತದೆ. ಹಿತೈಷಿಗಳು ಹಾಗೂ ದಾನಿಗಳಿಂದ 8.24 ಕೋಟಿ ರೂಪಾಯಿ ಸಂಗ್ರಹಿಸಿದ್ದು, ಉಳಿದ 7.76 ಕೋಟಿ ರೂಪಾಯಿ ಅಗತ್ಯವಿದೆ. ಮಗುವಿಗೆ 24 ತಿಂಗಳು ತುಂಬುವುದರೊಳಗೆ ಚಿಕಿತ್ಸೆ ಕೊಡಿಸದಿದ್ದರೆ, ಜೀವಕ್ಕೆ ಅಪಾಯವಿದೆ. ಆದ್ದರಿಂದ, ಮಗುವಿನ ಚಿಕಿತ್ಸೆಗೆ ನೆರವು ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂ ಓದಿ: 'ಬುರುಡೆ ಬೊಮ್ಮಾಯಿ' ಸರಣಿ ಟ್ವೀಟ್ ಮೂಲಕ ಸಿಎಂಗೆ ಸಿದ್ದರಾಮಯ್ಯ ಸವಾಲ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.