ETV Bharat / state

ಬೆಂಗಳೂರು ರಾಜಕಾಲುವೆ ಒತ್ತುವರಿ, ರಸ್ತೆ ಗುಂಡಿ ಸಮಸ್ಯೆ ಬಗ್ಗೆ ಹೈಕೋರ್ಟ್ ಹೇಳಿದ್ದೇನು? - ಬೆಂಗಳೂರು ರಾಜಕಾಲುವೆ ಒತ್ತುವರಿ

ರಾಜಕಾಲುವೆ ಒತ್ತುವರಿ ಸಂಬಂಧ ಅಧಿಕಾರಿಗಳ ಸಮಿತಿ ರಚನೆ ಮಾಡಬೇಕು ಮತ್ತು ಸಮಿತಿ ಅನುಷ್ಠಾನ ಮಾಡುವ ಎಲ್ಲ ಮಾಹಿತಿಯನ್ನು 15 ದಿನಕ್ಕೊಮ್ಮೆ ನ್ಯಾಯಪೀಠಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

high-court-on-hearing-on-rajakaluve-encroachment
ಬೆಂಗಳೂರು ರಾಜಕಾಲುವೆ ಒತ್ತುವರಿ, ರಸ್ತೆ ಗುಂಡಿ ಸಮಸ್ಯೆ ಬಗ್ಗೆ ಹೈಕೋರ್ಟ್ ಹೇಳಿದ್ದೇನು?
author img

By

Published : Sep 19, 2022, 12:36 PM IST

Updated : Sep 19, 2022, 2:23 PM IST

ಬೆಂಗಳೂರು: ರಾಜಧಾನಿಯ ರಾಜಕಾಲುವೆಗಳ ಒತ್ತುವರಿ ಸಂಬಂಧ ಮಹಾಲೇಖಪಾಲಕರು(ಸಿಎಜಿ) ನೀಡಿರುವ ಸಲಹೆಗಳನ್ನು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸೆ. 20ರಂದು ಮೂವರು ಹಿರಿಯ ಅಧಿಕಾರಿಗಳ ಸಮಿತಿ ರಚನೆ ಮಾಡಬೇಕು ಎಂದು ಹೈಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದೆ.

ರಸ್ತೆಗುಂಡಿಗಳ ಮುಚ್ಚದ ಬಿಬಿಎಂಪಿ ಕ್ರಮ ಪ್ರಶ್ನಿಸಿ ವಿಜಯನ್ ಮೆನೆನ್ ಸೇರಿದಂತೆ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಆಲೋಕ್ ಅರಾಧೆ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ರಾಜಕಾಲುವೆ ಒತ್ತುವರಿ ಸಂಬಂಧ ಸಿಎಜಿ ನೀಡಿರುವ ಸಲಹೆಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಿದ್ದರು. ವರದಿ ದಾಖಲಿಸಿಕೊಂಡ ನ್ಯಾಯಪೀಠ, ಸಲಹೆಗಳ ಅನುಷ್ಠಾನ ಸಂಬಂಧ ಅಧಿಕಾರಿಗಳ ಸಮಿತಿ ರಚನೆ ಮಾಡಬೇಕು ಮತ್ತು ಸಮಿತಿ ಅನುಷ್ಠಾನgಒಳಿಸುವ ಎಲ್ಲ ಮಾಹಿತಿಯನ್ನು 15 ದಿನಕ್ಕೊಮ್ಮೆ ನ್ಯಾಯಪೀಠಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದೆ.

ಇದೇ ವೇಳೆ ಪಾಲಿಕೆ ಪರ ವಕೀಲರು, ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆಗಳಲ್ಲಿ 2,626 ಒತ್ತುವರಿಗಳಾಗಿವೆ. ಈವರೆಗೂ 2,024 ಒತ್ತುವರಿಗಳನ್ನು ತೆರವು ಮಾಡಲಾಗಿದೆ, ಇನ್ನುಳಿದ 602 ಒತ್ತುವರಿಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.

ರಸ್ತೆ ಗುಂಡಿ ಮುಚ್ಚುವುದು: ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ 2,010 ರಸ್ತೆ ಗುಂಡಿಗಳನ್ನು ಗುರುತಿಸಿಸಲಾಗಿದೆ. ಈಗಾಗಲೇ ಎಲ್ಲ ಗುಂಡಿಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿದೆ. ಇನ್ನು, 221 ಗುಂಡಿಗಳನ್ನು ಮುಚ್ಚಬೇಕಾಗಿದೆ. ಅವುಗಳನ್ನು ಮುಂದಿನ ಹತ್ತು ದಿನದಲ್ಲಿ ಮುಚ್ಚಲಾಗುವುದು ಎಂದು ಬಿಬಿಎಂಪಿ ಪರ ವಕೀಲರು ಹೈಕೋರ್ಟ್​ಗೆ ತಿಳಿಸಿದರು.

ಇದನ್ನೂ ಓದಿ: ಬಾಗ್ಮನೆ ಟೆಕ್ ಪಾರ್ಕ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್

ಅಲ್ಲದೆ, ನಗರದ ಎಲ್ಲ ವಲಯಗಳಲ್ಲಿ 2500 ಕಿಲೋಮೀಟರ್ ಇತರೆ ರಸ್ತೆಗಳಿವೆ. ಇವುಗಳಲ್ಲಿನ ರಸ್ತೆ ಗಳ ಡಾಬರ್ ಹಾಕಲು ಟೆಂಡರ್ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಎಷ್ಟು ಗುಂಡಿಗಳಿವೆ ಎಂದು ಪ್ರಶ್ನಿಸಿತು. ಈ ವೇಳೆ ಬಿಬಿಎಂಪಿ ಪರ ವಕೀಲರು, ಪಾಲಿಕೆಯ ಎಲ್ಲ ವಲಯಗಳಲ್ಲಿ ರಸ್ತೆ ಗಳನ್ನು ಡಾಂಬರ್ ಮಾಡಲಾಗುವುದು. ಮುಂದಿನ 4 ತಿಂಗಳಲ್ಲಿ ಎಲ್ಲ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು ಎಂದು ನ್ಯಾಯಪೀಠಕ್ಕೆ ಭರವಸೆ ನಿಡಿದರು.

ಪ್ರಚಾರ ನೀಡಲು ಸೂಚನೆ: ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ಪ್ರಾರಂಭಿಸಿರುವ ವೆಬ್​ಸೈಟ್ ಕುರಿತು ಹೆಚ್ಚಿನ ಪ್ರಚಾರ ನೀಡಬೇಕು. ಅಲ್ಲದೆ, ಸಾರ್ವಜನಿಕರು ನೀಡುವ ರಸ್ತೆಗುಂಡಿಗಳ ಕುರಿತ ಮಾಹಿತಿಯನ್ನು ವೆಬ್​ಸೈಟ್​ನಲ್ಲಿ ಲಭ್ಯವಾಗುವಂತೆ ಮಾಡಬೇಕು. ಜೊತೆಗೆ, ಅದನ್ನು ಸರಿಪಡಿಸಿರುವುದನ್ನು ಫೋಟೋ ಸಮೇತ ಅಪ್​ಲೋಡ್ ಮಾಡಬೇಕು ಎಂದು ಪೀಠ ಸೂಚನೆ ನೀಡಿತು.

ಇದನ್ನೂ ಓದಿ: ಬೆಂಗಳೂರಲ್ಲಿ ಮುಗಿಯದ ರಸ್ತೆ ಗುಂಡಿ ಸಮಸ್ಯೆ.. ಹೊಸದಾಗಿ 4545 ರಸ್ತೆ ಗುಂಡಿಗಳು ಪತ್ತೆ

ಅಲ್ಲದೆ, ಬೆಂಗಳೂರು ನಗರದಲ್ಲಿ ಗುಂಡಿ ರಹಿತ ರಸ್ತೆಗಳನ್ನು ಸಾರ್ವಜನಿಕರಿಗೆ ಒದಗಿಸಬೇಕು ಎಂದು ಇದೇ ವೇಳೆ ನ್ಯಾಯಪೀಠವು ನಿರ್ದೇಶನ ನೀಡಿದೆ.

Last Updated : Sep 19, 2022, 2:23 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.