ಬೆಂಗಳೂರು: ಸಾರ್ವಜನಿಕರ ಯಾವುದೇ ಸ್ವತ್ತನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿರುವ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ಸುಮೋಟೊ (ಸ್ವಯಂಪ್ರೇರಿತ) ದೂರು ದಾಖಲಿಸಿಕೊಳ್ಳುವಂತೆ ರಿಜಿಸ್ಟ್ರಾರ್ ಜನರಲ್ಗೆ ಹೈಕೋರ್ಟ್ ಆದೇಶ ನೀಡಿದೆ.
ಮಾಗಡಿ ರಸ್ತೆಯ ಬಳಿ ಇರುವ ವಸತಿ ನಿಲಯ ಪ್ರದೇಶದಲ್ಲಿ ಅಕ್ರಮವಾಗಿ ಸಾಯಿಬಾಬಾ ದೇವಸ್ಥಾನ ನಿರ್ಮಿಸುತ್ತಿದ್ದನ್ನ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ವಿಚಾರಣೆ ನಡೆಯಿತು. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ, ಸುಪ್ರೀಂಕೋರ್ಟ್ ಆದೇಶ ಪಾಲಿಸುವಲ್ಲಿ ರಾಜ್ಯ ಸರ್ಕಾರ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ.
ಹಾಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕೇಂದ್ರಗಳನ್ನು ಸ್ಥಾಪಿಸುವವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳುವಂತೆ ಆದೇಶ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ದೇವಸ್ಥಾನ, ಮಸೀದಿ, ಚರ್ಚ್ಗಳನ್ನ ಅನಧಿಕೃತವಾಗಿ ನಿರ್ಮಿಸಿದರೆ ಅವುಗಳನ್ನ ತೆರವುಗೊಳಿಸಬೇಕೆಂದು ನೀಡಿದ್ದ ಸುಪ್ರೀಂಕೋರ್ಟ್ ಆದೇಶವನ್ನು ರಾಜ್ಯ ಸರ್ಕಾರ ಪಾಲೀಸಬೇಕೆಂದು ಹೈಕೋರ್ಟ್ ತಾಕೀತು ಮಾಡಿದೆ.