ETV Bharat / state

ಮಂಡ್ಯದಲ್ಲಿ ಘನತ್ಯಾಜ್ಯ ವಿಲೇವಾರಿ ಜಾಗದ ಕುರಿತು ಆಕ್ಷೇಪ: ಪರಿಶೀಲಿಸುವಂತೆ ಡಿಸಿಗೆ ಹೈಕೋರ್ಟ್ ಆದೇಶ - ಮಂಡ್ಯದಲ್ಲಿ ಘನತ್ಯಾಜ್ಯ ವಿಲೇವಾರಿ ಜಾಗದ ಕುರಿತು ಆಕ್ಷೇಪ

ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯ್ತಿಯ ಅಂಬಿಗರಹಳ್ಳಿ ಗ್ರಾಮದ ಸರ್ವೇ ನಂಬರ್ 178ರಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ನಿವೇಶನ ಗುರುತಿಸಲಾಗಿದೆ. ಆದರೆ, ನಿವೇಶನವು ನದಿ, ಜನ ವಸತಿ ಪ್ರದೇಶ ಮತ್ತು ದೇವಸ್ಥಾನಗಳ ಸಮೀಪವಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Apr 4, 2022, 10:51 PM IST

ಬೆಂಗಳೂರು: ಮಂಡ್ಯ ಜಿಲ್ಲೆ ಕೆ. ಆರ್ ಪೇಟೆ ತಾಲೂಕಿನ ಅಂಬಿಗರ ಹಳ್ಳಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಗುರುತಿಸಿರುವ ನಿವೇಶನದ ಕುರಿತು ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸುವ ಮನವಿ ಪತ್ರವನ್ನು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಜಿಲ್ಲಾಧಿಕಾರಿಗೆ ನಿರ್ದೇಶಿಸಿದೆ. ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಅಂಬಿಗರಹಳ್ಳಿ ಗ್ರಾಮದಲ್ಲಿ ನಿವೇಶನ ಗುರುತಿಸುತ್ತಿರುವುದನ್ನು ಆಕ್ಷೇಪಿಸಿ ಸ್ಥಳೀಯರಾದ ಎ.ಬಿ ದೇವರಾಜು ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರು ತಮ್ಮ ಕುಂದುಕೊರತೆ ಕುರಿತು 10 ದಿನದಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಬೇಕು. ನಂತರ 6 ವಾರಗಳಲ್ಲಿ ಜಿಲ್ಲಾಧಿಕಾರಿಗಳು ಅರ್ಜಿದಾರರ ಕುಂದುಕೊರತೆ ಆಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.

ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯ್ತಿಯ ಅಂಬಿಗರಹಳ್ಳಿ ಗ್ರಾಮದ ಸರ್ವೇ ನಂಬರ್ 178ರಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ನಿವೇಶನ ಗುರುತಿಸಲಾಗಿದೆ. ಆದರೆ, ನಿವೇಶನವು ನದಿ, ಜನ ವಸತಿ ಪ್ರದೇಶ ಮತ್ತು ದೇವಸ್ಥಾನಗಳ ಸಮೀಪ ಇದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅಲ್ಲದೇ, ಒಂದೊಮ್ಮೆ ಈ ಜಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಿದರೆ, ಅದರಿಂದ ನದಿ ಮಾಲಿನ್ಯವಾಗಲಿದೆ. ದೇವಸ್ಥಾನಕ್ಕೆ ಭೇಟಿ ನೀಡುವ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲಿದೆ. ಪರಿಸರ ಮಾಲಿನ್ಯ ಉಂಟಾಗುವುದರ ಜೊತೆಗೆ ನಿವೇಶನದ ಸಮೀಪ ವಾಸವಿರುವ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಹಾಗಾಗಿ, ಘಟಕ ಸ್ಥಾಪನೆಗೆ ಬೇರೊಂದು ಸ್ಥಳ ಗುರುತಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದರು.

ಓದಿ: ದೇವಸ್ಥಾನದ ಬಳಿ ನಿಲ್ಲಿಸಿದ್ದ ರಾಯಲ್​ ಎನ್​ಫೀಲ್ಡ್​​ಗೆ ಬೆಂಕಿ, ಸ್ಫೋಟ - ಭೀಕರ ವಿಡಿಯೋ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.