ETV Bharat / state

ಆಹಾರ ಸುರಕ್ಷಾ ಕಾಯ್ದೆ ಪರಿಣಾಮಕಾರಿ ಜಾರಿಗೆ ಹೈಕೋರ್ಟ್ ಆದೇಶ - ರಾಜ್ಯ ಸರ್ಕಾರಕ್ಕೆ ಆದೇಶಿಸಿದ ಹೈಕೋರ್ಟ್

ಆಹಾರ ಸುರಕ್ಷಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು 2023ರ ಜನವರಿ ಮೊದಲ ವಾರಕ್ಕೆ ಮುಂದೂಡಿದೆ.

High Court
ಹೈಕೋರ್ಟ್
author img

By

Published : Apr 26, 2022, 9:29 PM IST

ಬೆಂಗಳೂರು: ಆಹಾರ ಸುರಕ್ಷಾ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯದಲ್ಲಿ ಸೂಕ್ತ ಪ್ರಯೋಗಾಲಯಗಳನ್ನು ತೆರೆಯಬೇಕು ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ವಿಜಯಪುರ ಸಕ್ಷಮ ಪ್ರಾಧಿಕಾರ ದಾಖಲಿಸಿಕೊಂಡಿರುವ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿ ವಿವಿಧ ಆಹಾರ ಪದಾರ್ಥಗಳ ಸಗಟು ವ್ಯಾಪಾರಿಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಪರೀಕ್ಷಾ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತಾ ಮಂಡಳಿಯ (ಎನ್‌ಎಬಿಎಲ್‌) ಗುಣಮಟ್ಟಕ್ಕೆ ಅನುಗುಣವಾಗಿ ಈ ಪ್ರಯೋಗಾಲಯಗಳನ್ನು ತೆರೆಯಬೇಕು. ರಾಜ್ಯದ ಪ್ರತಿ ತಾಲೂಕಿನಲ್ಲೂ ಆಹಾರ ಸುರಕ್ಷಾ ಅಧಿಕಾರಿಗಳನ್ನು ನೇಮಕ ಮಾಡುವ ದಿಸೆಯಲ್ಲಿ ರಾಜ್ಯ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಪೀಠ ಸೂಚಿಸಿದೆ. ಈ ಪ್ರಕರಣದ ವಿಚಾರಣೆಯನ್ನು 2023ರ ಜನವರಿ ಮೊದಲ ವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ: ಜಿಲ್ಲಾ ನ್ಯಾಯಾಧೀಶರು ಸೇರಿ 499 ನ್ಯಾಯಾಂಗ ಅಧಿಕಾರಿಗಳ ವರ್ಗಾವಣೆ: ಹೈಕೋರ್ಟ್​ ಆದೇಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.