ETV Bharat / state

ರಸ್ತೆ ಅಪಘಾತದಲ್ಲಿ ಅಂಗವೈಕಲ್ಯಕ್ಕೆ ಒಳಗಾಗಿದ್ದ ಇಂಜಿನಿಯರ್​​ಗೆ 44 ಲಕ್ಷ ಪರಿಹಾರ ಕೊಡಿಸಿದ ಹೈಕೋರ್ಟ್ - ವಿಮಾನ ಕಂಪನಿಗೆ ಹೈಕೋರ್ಟ್ ಆದೇಶ

ರಸ್ತೆ ಅಪಘಾತ ಪ್ರಕರಣದಲ್ಲಿ ಸಂತ್ರಸ್ತರಿಗೆ ಮೋಟಾರು ವಾಹನ ನ್ಯಾಯಾಧೀಕರಣ ನಿಗದಿಪಡಿಸಿದ ಪರಿಹಾರ ಮೊತ್ತವನ್ನು ಪ್ರಶ್ನಿಸಿ ವಿಮಾ ಕಂಪನಿ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ವಿಚಾರಣೆ ನಡೆಸಿ, ಸಂತ್ರಸ್ತರಿಗೆ 44 ಲಕ್ಷ ರೂ ಪರಿಹಾರ ನೀಡುವಂತೆ ವಿಮಾನ ಕಂಪನಿಗೆ ಆದೇಶಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Nov 14, 2022, 8:54 PM IST

ಬೆಂಗಳೂರು: ಅಪಘಾತದಿಂದ ಶೇ.65ರಷ್ಟು ಅಂಗವೈಕಲ್ಯಕ್ಕೆ ಗುರಿಯಾದ ಇಂಜಿನಿಯರ್ ಪದವೀಧರನಿಗೆ 11 ಲಕ್ಷ ರೂ. ಪರಿಹಾರ ಪಾವತಿಸಲು ಮೋಟಾರು ವಾಹನ ನ್ಯಾಯಾಧೀಕರಣ ಹೊರಡಿಸಿದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ವಿಮಾ ಕಂಪನಿಗೆ 44 ಲಕ್ಷ ರೂ. ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶಿಸಿದೆ.

ರಸ್ತೆ ಅಪಘಾತ ಪ್ರಕರಣದಲ್ಲಿ ಸಂತ್ರಸ್ತರಿಗೆ ಮೋಟಾರು ವಾಹನ ನ್ಯಾಯಾಧೀಕರಣ ನಿಗದಿಪಡಿಸಿದ ಪರಿಹಾರ ಮೊತ್ತವನ್ನು ಪ್ರಶ್ನಿಸಿ ವಿಮಾ ಕಂಪನಿ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಪ್ರಕರಣದಲ್ಲಿ ಸಂತ್ರಸ್ತರಾದ ಲೋಬೊ ಶೇ.65ರಷ್ಟು ಶಾಶ್ವತ ಅಂಗವೈಕಲ್ಯಕ್ಕೆ ಗುರಿಯಾಗಿದ್ದಾರೆ. ಚಿಕಿತ್ಸೆಗೆ ಐದು ಲಕ್ಷಕ್ಕೂ ಹೆಚ್ಚು ಹಣ ವ್ಯಯಿಸಿದ್ದಾರೆ. ಅಪಘಾತಕ್ಕೂ ಮುನ್ನ ಇಂಜಿನಿಯರ್ ಪದವೀಧರನಾದ ಲೋಬೋ ಅಬುದಾಬಿಯಲ್ಲಿ ಉದ್ಯೋಗ ಮಾಡುತ್ತಾ ಮಾಸಿಕ 50 ಸಾವಿರ ರೂ.ಗಿಂತ ಅಧಿಕ ವೇತನ ಪಡೆಯುತ್ತಿದ್ದರು. ಅಪಘಾತ ನಡೆದಾಗ 26 ವರ್ಷವಾಗಿತ್ತು. ಹಾಗಾಗಿ, ಪರಿಹಾರ ಮೊತ್ತ ಹೆಚ್ಚಿಸುವುದು ಸೂಕ್ತ ಎಂದು ಹೈಕೋರ್ಟ್ ತೀರ್ಮಾನಿಸಿತು.

ಪರಿಹಾರ ಮೊತ್ತವನ್ನು 44,92,140 ರೂಗೆ ಹೆಚ್ಚಿಸಿದ ಹೈಕೋರ್ಟ್, ಆ ಮೊತ್ತಕ್ಕೆ ಅಪಘಾತ ನಡೆದ ದಿನದಿಂದ ಅನ್ವಯವಾಗುವಂತೆ ವಾರ್ಷಿಕ ಶೇ.6ರಷ್ಟು ಬಡ್ಡಿ ನೀಡುವಂತೆ ವಿಮಾ ಕಂಪನಿಗೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಮಂಗಳೂರಿನ ಮೂಡುಬಿದರೆ ಹೋಬಳಿಯ ಮಾಸ್ತಿಕಟ್ಟೆ ನಿವಾಸಿ ಅಲ್ವಿನ್ ಲೋಬೋ, ತಮ್ಮ ಸೋದರನೊಂದಿಗೆ 2009ರ ಮೇ 23ರಂದು ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಆಟೋ ರಿಕ್ಷಾ ಬೈಕಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಹಿಂಬದಿ ಕುಳಿತಿದ್ದ ಲೋಬೋ ತಲೆ ಮತ್ತು ಎಡಗಾಲಿಗೆ ಗಂಭೀರ ಪೆಟ್ಟು ಬಿದ್ದಿತ್ತು.

ನಂತರ ಎ.ಜೆ ಆಸ್ಪತ್ರೆಯಲ್ಲಿ ಲೋಬೋ 2009ರ ಮೇ 23 ರಿಂದ ಜು.17ರವರೆಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದರು. ನಂತರದ ವರ್ಷಗಳಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗಾಗಿ ಒಟ್ಟು 5,24,139.37 ರೂ. ಖರ್ಚು ಮಾಡಿದ್ದರು.

ಪರಿಹಾರ ಕ್ಲೇಮಿನ ವಿಚಾರಣೆ ನಡೆಸಿದ್ದ ಮೋಟಾರು ವಾಹನ ನ್ಯಾಯಾಧೀಕರಣ, ಲೋಬೋ ಅವರಿಗೆ ವಾರ್ಷಿಕ ಶೇ.8ರಷ್ಟು ಬಡ್ಡಿದರದಲ್ಲಿ ಒಟ್ಟು11,39,340 ರೂ. ಪರಿಹಾರ ಪಾವತಿಸುವಂತೆ ವಿಮಾ ಕಂಪನಿಗೆ 2015ರ ಜೂ.20 ರಂದು ಆದೇಶಿಸಿತ್ತು. ಈ ಆದೇಶ ರದ್ದತಿಗೆ ಕೋರಿ ವಿಮಾ ಕಂಪನಿಯು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

(ಓದಿ: ರಾಜಧಾನಿಯಲ್ಲಿ ಮುಂದುವರೆದ ಫ್ಲೆಕ್ಸ್, ಅನಧಿಕೃತ ಜಾಹೀರಾತು ಫಲಕ: ನ್ಯಾಯಾಂಗ ನಿಂದನೆ ಅರ್ಜಿ ದಾಖಲು)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.