ETV Bharat / state

ತನಿಖಾ ಸಂಸ್ಥೆಗಳು ದಾಖಲೆ ವಶಕ್ಕೆ ಪಡೆದಿದೆ ಎಂದ ಮಾತ್ರಕ್ಕೆ ಬಿಲ್ ಬಾಕಿ ಉಳಿಸುವಂತಿಲ್ಲ: ಹೈಕೋರ್ಟ್

ದಾಖಲೆಗಳು ಜಪ್ತಿ ಆಗಿದೆ ಎಂದು ಸಿವಿಲ್ ಗುತ್ತಿಗೆದಾರರಿಗೆ ನೀಡಬೇಕಾದ ಬಾಕಿ ಹಣವನ್ನು ಬಿಬಿಎಂಪಿ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.

High court order on BBMP Civil Contractors bill pending
ಹೈಕೋರ್ಟ್
author img

By ETV Bharat Karnataka Team

Published : Dec 23, 2023, 7:30 AM IST

ಬೆಂಗಳೂರು: ಗುತ್ತಿಗೆ ಹಗರಣ ಆರೋಪ ಸಂಬಂಧ ತನಿಖಾ ಸಂಸ್ಥೆಗಳು ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳನ್ನು ಜಪ್ತಿ ಮಾಡಿದೆ ಎಂದು ಬಿಬಿಎಂಪಿ ಸಿವಿಲ್ ಗುತ್ತಿಗೆದಾರರಿಗೆ ಬಾಕಿ ಇರುವ ಹಣವನ್ನು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಸಿವಿಲ್ ಗುತ್ತಿಗೆದಾರರಾದ ಮೆಸರ್ಸ್ ಓಎಂ ಎಸ್‌ಎಲ್​ವಿ ಕನ್​ಸ್ಟ್ರಕ್ಷನ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳು ಪಡೆಯುವಂತೆ ಇಲಾಖಾ ಮುಖ್ಯಸ್ಥರು ಅಥವಾ ಪಾಲಿಕೆಯ ಮುಖ್ಯಸ್ಥರು ವಿಚಾರಣಾ ನ್ಯಾಯಾಲಯದಿಂದ ದಾಖಲೆಯ ಪ್ರತಿಗಳನ್ನು ಪಡೆದುಕೊಳ್ಳಬಹುದು. ಈ ಪ್ರಕರಣದಲ್ಲಿ ಅರ್ಜಿದಾರರು ಆರೋಪಿಯಾಗಿದ್ದು, ಅವರೂ ಸಹ ದಾಖಲೆ ಕೋರಿ ಅರ್ಜಿ ಸಲ್ಲಿಸಬಹುದು. ಆ ರೀತಿ ಅರ್ಜಿ ಸಲ್ಲಿಸುವ ಬದಲು ಪಾಲಿಕೆ ಮತ್ತು ಅರ್ಜಿದಾರರಿಬ್ಬರೂ ಸಹ ಒಬ್ಬರ ಮೇಲೆ ಒಬ್ಬರು ದೋಷಿಸಿಕೊಂಡು, ಕಾಮಗಾರಿ ಬಿಲ್‌ಗಳ ಪ್ರತಿಗಳನ್ನು ಪಡೆದುಕೊಂಡಿಲ್ಲ. ಹಾಗಾಗಿ ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ಪೀಠ ಹೇಳಿದೆ.

ಅಲ್ಲದೆ, ಈ ಎಲ್ಲ ದಾಖಲೆಗಳ ಮೂಲ ವಾರಸುದಾರರು ಪಾಲಿಕೆ ಆಗಿದ್ದು, ಒಮ್ಮೆ ಕಾಮಗಾರಿ ಪೂರ್ಣಗೊಂಡರೆ ಆ ನಂತರ ಅದರ ಬಿಲ್‌ಗಳನ್ನು ಪಾವತಿಸಲು ಅಗತ್ಯ ಪ್ರಕ್ರಿಯೆಗಳನ್ನು ಪಾಲಿಕೆ ಕೈಗೊಳ್ಳಬೇಕಾಗುತ್ತದೆ. ತನ್ನ ಬಳಿ ದಾಖಲೆ ಇಲ್ಲ ಎಂದು ನೆಪ ಹೇಳಲಾಗದು. ಒಂದು ವೇಳೆ ದಾಖಲೆಯ ಪ್ರತಿ ಇಲ್ಲದಿದ್ದರೂ ಸಹ ಅದು ಸಂಬಂಧಿಸಿದ ಲೋಕಾಯುಕ್ತ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿ, ಪ್ರಮಾಣೀಕೃತ ಪ್ರತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

ಜತೆಗೆ, ತನಿಖಾ ಸಂಸ್ಥೆ ಜಪ್ತಿ ಮಾಡಿರುವ ದಾಖಲೆಗಳನ್ನು ಪಡೆದುಕೊಳ್ಳುವ ಗೋಜಿಗೆ ಹೋಗದೆ, ಅರ್ಜಿದಾರರು ಸಲ್ಲಿಸಿದ್ದ ಬಿಲ್ ಪಾವತಿಗೆ ಪ್ರಕ್ರಿಯೆ ನಡೆಸದ ಪಾಲಿಕೆ ಕ್ರಮ ಸರಿಯಾದುದಲ್ಲ. ಅರ್ಜಿದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ಬಾಕಿ ಇದೆ ಅದನ್ನು ಪರಿಗಣಿಸಿ ಪಾಲಿಕೆ ಬಿಲ್ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ : ಸಿವಿಲ್ ಗುತ್ತಿಗೆದಾರರಾದ ಅರ್ಜಿದಾರರು ಪಾಲಿಕೆಗೆ 2006ರಲ್ಲಿ 131 ಕಸ ತುಂಬಿಕೊಂಡು ಹೋಗುವ ತಳ್ಳುವ ಗಾಡಿಗಳು, ಎರಡು ಕಾಂಪ್ಯಾಕ್ಟ್ ಮತ್ತು ಘನ ತ್ಯಾಜ್ಯ ವಿಲೇವಾರಿಗೆ 9 ಆಟೋಗಳನ್ನು ಪೂರೈಕೆ ಮಾಡಿದ್ದರು. ಆನಂತರ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲಾಗಿದೆ ಎಂದು ಬಿಲ್ ಪಾವತಿಸುವಂತೆ ಮನವಿ ಸಲ್ಲಿಸಿದ್ದರು. ಆದರೆ ಆಟೋಗಳನ್ನು ಸರಿಯಾಗಿ ಪೂರೈಕೆ ಮಾಡಿಲ್ಲ ಎಂದು ಎಂಜಿನಿಯರ್ ತಗಾದೆ ತೆಗೆದು, ಗುತ್ತಿಗೆಯನ್ನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಆಗ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಆಗ ನ್ಯಾಯಾಲಯ ಟೆಂಡರ್​ನಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಎಸಿಬಿ ತನಿಖೆಗೆ ಆದೇಶ ನೀಡಿದ್ದರು. ತನಿಖೆ ಇನ್ನೂ ಬಾಕಿ ಇರುವಾಗಲೇ ಅರ್ಜಿದಾರರು ಹಣ ಪಾವತಿಸುವಂತೆ ಬಿಬಿಎಂಪಿಗೆ ಮನವಿ ಸಲ್ಲಿಸಿದ್ದರು. ಆಗ ಪಾಲಿಕೆ, ಕಾಮಗಾರಿಯ ಬಿಲ್ ಸೇರಿದಂತೆ ಎಲ್ಲಾ ದಾಖಲೆಗಳು ತನಿಖಾ ಸಂಸ್ಥೆ ಬಳಿ ಇರುವುದರಿಂದ ಹಣ ಪಾವತಿಸಲಾಗದು ಎಂದು ಹೇಳಿತ್ತು. ಅದನ್ನು ಪ್ರಶ್ನಿಸಿ ಅರ್ಜಿದಾರರು ಮತ್ತೆ ಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಮಗ ಮಾಡಿದ್ದ 700 ರೂಪಾಯಿ ಸಾಲಕ್ಕೆ ತಂದೆ ಕೊಲೆ: ಅಪರಾಧಿಗಳಿಗೆ 9 ವರ್ಷ ಜೈಲು ಸಜೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.