ETV Bharat / state

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿ.30ರೊಳಗೆ ಚುನಾವಣೆ ನಡೆಸಲು ಹೈಕೋರ್ಟ್​ ಆದೇಶ - ಸ್ಥಳೀಯ ಸಂಸ್ಥೆಗಳ ಚುನಾವಣೆ ಸುದ್ದಿ

ಅವಧಿ ಮುಗಿದಿರುವ ರಾಜ್ಯದ 56 ನಗರ ಸ್ಥಳೀಯ ಸಂಸ್ಥೆಗಳಿಗೆ (Urban Local Body Election) ಇದೇ ಡಿಸೆಂಬರ್ 30ರೊಳಗೆ ಚುನಾವಣೆ ನಡೆಸುವಂತೆ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಆದೇಶಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Nov 17, 2021, 7:27 PM IST

ಬೆಂಗಳೂರು: ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲಿಕ್ಕಾಗದಷ್ಟು ಸರ್ಕಾರ ಅಸಮರ್ಥವಾಗಿದೆಯೇ ಎಂದು ಪ್ರಶ್ನಿಸಿರುವ ಹೈಕೋರ್ಟ್ ಅವಧಿ ಮುಗಿದಿರುವ ರಾಜ್ಯದ 56 ನಗರ ಸ್ಥಳೀಯ ಸಂಸ್ಥೆಗಳಿಗೆ (Urban Local Body Election) ಇದೇ ಡಿಸೆಂಬರ್ 30ರೊಳಗೆ ಚುನಾವಣೆ ನಡೆಸುವಂತೆ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಅವಧಿ ಮುಗಿದ ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪಿಐಎಲ್ ಅರ್ಜಿಯನ್ನು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಸರ್ಕಾರ ಮತ್ತು ಆಯೋಗದ ಪರ ವಕೀಲರ ವಾದ ಆಲಿಸಿದ ಪೀಠ, ನ.26ರೊಳಗೆ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿ ಅಧಿಸೂಚನೆ ಹೊರಡಿಸಬೇಕು. ಹಿಂದಿನಿದಲೇ ಚುನಾವಣಾ ಆಯೋಗ (Election Commission) ವೇಳಾಪಟ್ಟಿ ಪ್ರಕಟಿಸಬೇಕು. ಒಟ್ಟಾರೆ ಡಿಸೆಂಬರ್ 30 ರೊಳಗೆ ಚುನಾವಣೆ ನಡೆಸಬೇಕು ಎಂದು ನಿರ್ದೇಶಿಸಿತು.

ಇದಕ್ಕೂ ಮುನ್ನ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರ ಪ್ರಮಾಣಪತ್ರವನ್ನು ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ನ್ಯಾಯಾಲಯಕ್ಕೆ ಸಲ್ಲಿಸಿ, ಚುನಾವಣೆಗೆ ಸಂಬಂಧ ಕೈಗೊಂಡಿರುವ ಮಾಹಿತಿಯನ್ನು ವಿವರಿಸಿದರು. ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದಿಸಿ, ಬಾಕಿ ಇರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮತದಾರರ ಪಟ್ಟಿ ಅಂತಿಮವಾಗಿದೆ. ಸರ್ಕಾರ ಮೀಸಲು ಪಟ್ಟಿ ಪ್ರಕಟಿಸಿದರೆ ಚುನಾವಣೆ ನಡೆಸಬಹುದು ಎಂದರು.

ಇದೇ ವೇಳೆ ಸರ್ಕಾರವನ್ನು ತರಾಟೆಗೆ ತೆಗೆದಕೊಂಡ ಪೀಠ, ರಾಜ್ಯದ ಹಲವು ಸ್ಥಳೀಯ ಸಂಸ್ಥೆಗಳ ಅವಧಿ 2018ರಲ್ಲಿ ಮುಗಿದಿದೆ. ಕಳೆದ ಜುಲೈನಲ್ಲಿ ಹೈಕೋರ್ಟ್ ಮುಂದಿನ ಮೂರು ತಿಂಗಳಲ್ಲಿ ಮೀಸಲು ಪ್ರಕ್ರಿಯೆ ಪೂರ್ಣಗೊಳಿಸುವಂತೆ ನಿರ್ದೇಶಿಸಿದ್ದರೂ ಸರ್ಕಾರ ಇಂದಿಗೂ ಮೀಸಲು ಅಂತಿಮಗೊಳಿಸದಿರುವುದು ಎಷ್ಟರಮಟ್ಟಿಗೆ ಸರಿ. ಸರ್ಕಾರ ಕಾಲಮಿತಿಯಲ್ಲಿ ಚುನಾವಣೆ ನಡೆಸಲು ಆಗದಷ್ಟು ಅಸಮರ್ಥವಾಗಿದೆಯೇ? ಚುನಾವಣೆ ನಡೆಸುವಂತೆ ನ್ಯಾಯಾಲಯ ಹೇಳಬೇಕೇ? ಎಂದು ಸರ್ಕಾರವನ್ನು ಕಟುವಾಗಿ ಟೀಕಿಸಿತು.

ನಂತರ ನ್ಯಾಯಾಲಯದ ಸೂಚನೆಯಂತೆ ವಿಚಾರಣೆಗೆ ಹಾಜರಾದ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ರಾಕೇಶ್ ಸಿಂಗ್ ತ್ವರಿತವಾಗಿ ಚುನಾವಣಾ ಸಿದ್ದತೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ: ನಾಳೆ ಪರಿಷತ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ : ಮಾಜಿ ಸಿಎಂ ಬಿಎಸ್​ವೈ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.