ETV Bharat / state

ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಿಂದ ಹೆಚ್ಚುವರಿ ಶುಲ್ಕ ಪಡೆದ ಆರೋಪ : ಕ್ರಮಕ್ಕೆ ಹೈಕೋರ್ಟ್ ಆದೇಶ

author img

By

Published : Dec 7, 2021, 3:50 AM IST

ವಿದ್ಯಾರ್ಥಿಗಳ ಹೆಚ್ಚುವರಿ ಶುಲ್ಕ ಹಿಂದಿರುಗಿಸುವ ಬಗ್ಗೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮೊಹಮ್ಮದ್ ನೌಫಾಲ್‌ ಹಾಗೂ ಮೊಹಮದ್‌ ರಫೀಕ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ ಎಸ್. ಕಿಣಗಿ ಅವರಿದ್ದ ಏಕಸದಸ್ಯ ಪೀಠವು ಸೋಮವಾರ ವಿಚಾರಣೆ ನಡೆಸಿತು.

high-court
ಹೈಕೋರ್ಟ್

ಬೆಂಗಳೂರು : ‘ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಮೆರಿಟ್‌ ವಿದ್ಯಾರ್ಥಿಗಳಿಂದ ಪಡೆದ ಹೆಚ್ಚುವರಿ ಶುಲ್ಕ ಹಿಂದಿರುಗಿಸುವ ಬಗ್ಗೆಗಿನ ಮನವಿಯನ್ನು ಪರಿಗಣಿಸಿ ಆದಷ್ಟು ಶೀಘ್ರ ಕ್ರಮ ಕೈಗೊಳ್ಳಿ’ ಎಂದು ಶುಲ್ಕ ನಿಯಂತ್ರಣ ಸಮಿತಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಈ ಕುರಿತಂತೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮೊಹಮ್ಮದ್ ನೌಫಾಲ್‌ ಹಾಗೂ ಮೊಹಮದ್‌ ರಫೀಕ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ ಎಸ್. ಕಿಣಗಿ ಅವರಿದ್ದ ಏಕಸದಸ್ಯ ಪೀಠವು ಸೋಮವಾರ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲ ಕೆ. ಅಭಿಷೇಕ್‌, ಅರ್ಜಿದಾರರು ಮೆರಿಟ್‌ ಆಧಾರದಲ್ಲಿ ಎಂಜಿನಿಯರಿಂಗ್‌ ಸೀಟು ಪಡೆದು ಸಿಇಟಿ ಮೂಲಕ ಪ್ರವೇಶ ಪಡೆದಿದ್ದಾರೆ. ಆದರೆ, ಕಾಲೇಜು ಆಡಳಿತ ಮಂಡಳಿಯು ಅವರಿಂದ ಹೆಚ್ಚುವರಿ ಶುಲ್ಕ ಸಂಗ್ರಹಿಸಿದೆ. ಇದು ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳು (ಪ್ರವೇಶ ಮತ್ತು ಶುಲ್ಕನಿಗದಿ ನಿಯಂತ್ರಣ) ಕಾಯ್ದೆ–2006ರ ಕಲಂ 4 ಹಾಗೂ ಕರ್ನಾಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ ಮತ್ತು ಸರ್ಕಾರದ ನಡುವಿನ ಸಹಮತದ ಒಪ್ಪಂದಕ್ಕೆ ವಿರುದ್ಧವಾಗಿದೆ. ಈ ಕುರಿತಂತೆ ಶುಲ್ಕ ನಿಯಂತ್ರಣ ಸಮಿತಿ ಕೂಡಲೇ ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು’ ಎಂದು ಕೋರಿದರು.

ವಾದ ಪರಿಗಣಿಸಿದ ಪೀಠ, ‘ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿ 2017–18ರ ಶೈಕ್ಷಣಿಕ ಸಾಲಿನಲ್ಲಿ ಅರ್ಜಿದಾರ ವಿದ್ಯಾರ್ಥಿಗಳಿಂದ ಕಾನೂನು ಬಾಹಿರವಾಗಿ ₹ 1,67,160 ಹೆಚ್ಚುವರಿ ಶುಲ್ಕ ಸಂಗ್ರಹಿಸಿದ್ದು, ಇದನ್ನು ಹಿಂತಿರುಗಿಸುವಂತೆ ಅವರು ಸಲ್ಲಿಸಲಾಗುವ ಅರ್ಜಿಯನ್ನು ಶೀಘ್ರವೇ ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಿ’ ಎಂದು ಶುಲ್ಕ ನಿಯಂತ್ರಣ ಸಮಿತಿಗೆ ಆದೇಶಿಸಿ, ಅರ್ಜಿ ಇತ್ಯರ್ಥಪಡಿಸಿತು.

ಇದನ್ನೂ ಓದಿ: ಪೆನ್ನು​ ಮಾರಾಟ ಮಾಡ್ತಿದ್ದ ಬಾಲಕಿಗೆ iPhone ಗಿಫ್ಟ್​ ನೀಡಿದ ತೇಜ್​​ ಪ್ರತಾಪ್​​​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.