ETV Bharat / state

ಮೆಟ್ರೋಗೆ ಮರಗಳ ಬಲಿ: ಪರ್ಯಾಯ ಸಸಿ ನೆಡದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ - ಈಟಿವಿ ಭಾರತ್​ ಕನ್ನಡ

ಮೆಟ್ರೋ ಕಾಮಗಾರಿಗಾಗಿ ಮರ ಕಡಿಯುವುದನ್ನು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಹೈ ಕೋರ್ಟ್, ಕಡಿದ ಮರಗಳಿಗೆ ಪರ್ಯಾಯವಾಗಿ ನೆಟ್ಟ ಸಸಿಗಳ ಬಗ್ಗೆ ಮಾಹಿತಿ ನೀಡುವಂತೆ ಬಿಬಿಎಂಪಿಗೆ ಸೂಚಿಸಿದೆ.

High Court order to BBMP  tree  arrangement on metro project
ಮೆಟ್ರೋಗೆ ಮರಗಳ ಬಲಿ
author img

By

Published : Sep 6, 2022, 8:38 AM IST

ಬೆಂಗಳೂರು: ಮೆಟ್ರೋ ರೈಲು ಮಾರ್ಗ ನಿರ್ಮಾಣ ಕಾಮಗಾರಿಗೆ ನಗರದಲ್ಲಿ ತೆರವುಗೊಳಿಸಿರುವ ಮರಗಳಿಗೆ ಪರ್ಯಾಯವಾಗಿ ಸಸಿಗಳನ್ನು ನೆಟ್ಟಿರುವ ಕುರಿತು ಮಾಹಿತಿ ನೀಡದೇ ಇರುವುದಕ್ಕೆ ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಸಸಿಗಳನ್ನು ನೆಟ್ಟಿರುವ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಅವುಗಳ ಸ್ಥಿತಿಗತಿಯ ಕುರಿತು ಎರಡು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ಪಾಲಿಕೆಯ ಮರ ಅಧಿಕಾರಿ ಮತ್ತು ಬೆಂಗಳೂರು ನಗರ ಅರಣ್ಯ ಉಪ ಸಂರಕ್ಷಣಾಧಿಕಾರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ಮೆಟ್ರೋ ಕಾಮಗಾರಿಗಾಗಿ ಮರ ಕಡಿಯುವುದನ್ನು ಆಕ್ಷೇಪಿಸಿ ಟಿ.ದತ್ತಾತ್ರೇಯ ದೇವರ ಮತ್ತು ಬೆಂಗಳೂರು ಪರಿಸರ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

ವಿಚಾರಣೆಯ ವೇಳೆ, ಮೆಟ್ರೋ ನಿಗಮದ ಪರ ವಕೀಲರು ಹಾಜರಾಗಿ, ಮೆಟ್ರೋ ರೈಲು ಮಾರ್ಗ ನಿರ್ಮಾಣಕ್ಕಾಗಿ 381 ಮರಗಳನ್ನು ಕತ್ತರಿಸಲು ಹಾಗೂ 26 ಮರಗಳನ್ನು ಸ್ಥಳಾಂತರಿಸಲು ಅನುಮತಿ ನೀಡುವಂತೆ ಕೋರಿದರು. ಅರ್ಜಿದಾರರ ಪರ ವಕೀಲರು, ಈ ಹಿಂದೆ ಮರಗಳನ್ನು ಕತ್ತರಿಸಲು ಅನುಮತಿ ನೀಡಿದ್ದಾಗ ಪರ್ಯಾಯವಾಗಿ ಸಸಿಗಳನ್ನು ನೆಡಲು ಮತ್ತು ಅರಣ್ಯೀಕರಣ ಮಾಡಲು ಸೂಚಿಸಿ ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳನ್ನು ಬಿಎಂಆರ್‌ಸಿಎಲ್ ಪಾಲಿಸಿಲ್ಲ. ಸಸಿಗಳನ್ನು ನೆಟ್ಟಿರುವ ಬಗ್ಗೆ ನ್ಯಾಯಾಲಯಕ್ಕೆ ಯಾವುದೇ ಮಾಹಿತಿ ನೀಡಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನ್ಯಾಯಾಲಯದ ಹಿಂದಿನ ನಿರ್ದೇಶನದಂತೆ ಕತ್ತಕರಿಸಿದ ಮರಗಳಿಗೆ ಪರ್ಯಾಯವಾಗಿ ಸಸಿಗಳನ್ನು ನೆಡುವ ಮೂಲಕ ಅರಣ್ಯೀಕರಣ ಮಾಡಲಾಗಿದೆಯೇ? ಈವರೆಗೂ ಎಷ್ಟು ಸಸಿಗಳನ್ನು ನೆಡಲಾಗಿದೆ? ಅವುಗಳಲ್ಲಿ ಎಷ್ಟು ಉಳಿದಿವೆ? ಎಷ್ಟು ನಾಶವಾಗಿವೆ? ಎಂಬುದು ಬಿಬಿಎಂಪಿ ಹಾಗೂ ಸರ್ಕಾರಿ ವಕೀಲರನ್ನು ಪ್ರಶ್ನಿಸಿತು.

ಅಲ್ಲದೆ, ಪರ್ಯಾಯವಾಗಿ ನೆಟ್ಟಿರುವ ಸಸಿಗಳು ಸುರಕ್ಷತೆಯಿಂದ ಇರುವುದನ್ನು ಬಿಬಿಎಂಪಿ ಮರ ಅಧಿಕಾರಿ ನ್ಯಾಯಾಲಯಕ್ಕೆ ಖಾತರಿಪಡಿಸಬೇಕು. ಅರಣ್ಯೀಕರಣದ ಅಡಿಯಲ್ಲಿ ಮಾಡಲಾಗಿದೆ. ಇಷ್ಟು ಸಸಿಗಳನ್ನು ನೆಡಲಾಗಿದೆ. ಇಂತಿಷ್ಟು ಸಸಿಗಳು ಉಳಿದುಕೊಂಡಿವೆ ಎಂಬ ಬಗ್ಗೆ ಖಚಿತ ಮಾಹಿತಿ ನೀಡಬೇಕು. ಹಾಗೆಯೇ, ಬೇರು ಸಹಿತ ಸ್ಥಳಾಂತರಿಸಿದ ಮರಗಳ ಪರಿಸ್ಥಿತಿ ಏನಾಗಿದೆ ಎಂಬುದರ ಕುರಿತೂ ಸಹ ನ್ಯಾಯಾಲಯ ವಿವರಿಸಿಸಬೇಕು ಎಂದು ಪೀಠ ತಿಳಿಸಿತು.

ಇದನ್ನೂ ಓದಿ: ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ₹600 ಕೋಟಿ ಬಿಡುಗಡೆ, ₹300 ಕೋಟಿ ಬೆಂಗಳೂರಿಗೆ: ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.