ETV Bharat / state

ಟಿಪ್ಪು ಜಯಂತಿ ಕುರಿತು ಆಕ್ಷೇಪಾರ್ಹ ಹೇಳಿಕೆ: ಅನಂತ ಕುಮಾರ್ ಹೆಗಡೆ, ಸಿಟಿ ರವಿಗೆ ಸಂಕಷ್ಟ - High Court order

ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದ ಹೇಳಿಕೆಗಳನ್ನು ಆಧಾರವಾಗಿಟ್ಟುಕೊಂಡು ಉದ್ಯಮಿ ಆಲಂ ಪಾಷಾ, 2017ರ ಅ.24ರಂದು ನಗರದ 10ನೇ ಎಸಿಎಂಎಂ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಅನಂತ ಕುಮಾರ್ ಹೆಗಡೆ ಮತ್ತು ಸಿ.ಟಿ. ರವಿ ಅವರ ನಡೆ ಪ್ರಚೋದನಕಾರಿ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತಂದಿದೆ. ಹೀಗಾಗಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿದ್ದರು.

Ananta Kumar Hegde and CT Ravi
ಅನಂತ ಕುಮಾರ್ ಹೆಗಡೆ, ಸಿಟಿ ರವಿ
author img

By

Published : Feb 10, 2021, 7:29 PM IST

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ವಿಚಾರವಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಸಂಸದ ಅನಂತ ಕುಮಾರ್ ಹೆಗಡೆ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ಮುಂದುವರಿಸುವಂತೆ ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಿದೆ.

ಈ ಕುರಿತಂತೆ ಉದ್ಯಮಿ ಆಲಂ ಪಾಷಾ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾ. ಜಾನ್ ಮೈಕೆಲ್ ಕುನ್ಹ ಅವರಿದ್ದ ಪೀಠ ಈ ಆದೇಶ ನೀಡಿದೆ. 2017ರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಂಸದ ಅನಂತ ಕುಮಾರ್ ಹೆಗಡೆ ಪತ್ರ ಬರೆದು, ಟಿಪ್ಪು ಜಯಂತಿ ಆಚರಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಟಿಪ್ಪುವಿನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಜತೆಗೆ ಇಂತಹ ನಾಚಿಕೆಗೇಡಿನ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಬೇಡಿ ಎಂದು ಪತ್ರದಲ್ಲಿ ತಿಳಿಸಿದ್ದರು.

ಸಿ.ಟಿ. ರವಿ ಕೂಡ ಟಿಪ್ಪು ಜಯಂತಿ ಆಚರಿಸುವ ಮೂಲಕ ಸರ್ಕಾರ ಹಿಂದೂಗಳನ್ನು ಅವಮಾನಿಸುತ್ತಿದೆ ಎಂದು ಟ್ವೀಟ್ ಮಾಡಿದ್ದರು. ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದ ಹೇಳಿಕೆಗಳನ್ನು ಆಧಾರವಾಗಿಟ್ಟುಕೊಂಡು ಉದ್ಯಮಿ ಆಲಂ ಪಾಷಾ, 2017ರ ಅ.24ರಂದು ನಗರದ 10ನೇ ಎಸಿಎಂಎಂ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಅನಂತ ಕುಮಾರ್ ಹೆಗಡೆ ಮತ್ತು ಸಿ.ಟಿ. ರವಿ ಅವರ ನಡೆ ಪ್ರಚೋದನಕಾರಿ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತಂದಿದೆ. ಹೀಗಾಗಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿದ್ದರು.

ಪಿಸಿಆರ್ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್, ಅರ್ಜಿದಾರರು ದೂರು ದಾಖಲಿಸುವ ಮುನ್ನ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಹೀಗಾಗಿ, ದೂರು ವಿಚಾರಣೆಗೆ ಅರ್ಹವಲ್ಲ ಎಂದು ಅರ್ಜಿಯನ್ನು 2017ರ ನ.4ರಂದು ವಜಾ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಆಲಂ ಪಾಷಾ ಹೈಕೋರ್ಟ್​ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಓದಿ: ಟಿಪ್ಪು ಜಯಂತಿ ಆಚರಣೆ ರದ್ದು ವಿವಾದ: ಮಧ್ಯಪ್ರವೇಶಕ್ಕೆ ಹೈಕೋರ್ಟ್ ನಕಾರ

ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕುನ್ಹ ಅವರಿದ್ದ ಪೀಠ, ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 156 (ಸಿ) ಪ್ರಕಾರ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ. ಹೀಗಾಗಿ, ಅರ್ಜಿದಾರರು ದಾಖಲಿಸಿರುವ ಖಾಸಗಿ ದೂರಿನ ವಿಚಾರಣೆ ಮುಂದುವರಿಸುವಂತೆ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ನಿರ್ದೇಶಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.