ETV Bharat / state

ಶಾಲಾ ಮಕ್ಕಳಿಗೆ ಬಿಸಿಯೂಟ ಯೋಜನೆ ಆರಂಭಕ್ಕೆ ಸರ್ಕಾರ ನಿರ್ಧರಿಸಲಿ: ಹೈಕೋರ್ಟ್​ ನಿರ್ದೇಶನ - ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವಂತೆ ಸೂಚನೆ

ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುವಂತೆ ನಿರ್ದೇಶನ ಕೋರಿ ನಗರದ ಎಂ. ರಾಧಾ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಪೀಠ ವಿಚಾರಣೆ ನಡೆಸಿ, ಏಪ್ರಿಲ್​ 15ರಿಂದ 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವ ಬಗ್ಗೆ ಸೂಕ್ತ ನಿರ್ಧಾರ ತೆಗೆದುಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ ನೀಡಿದೆ.

ಹೈಕೋರ್ಟ್
High Court
author img

By

Published : Mar 31, 2021, 1:57 PM IST

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಏಪ್ರಿಲ್​ 15ರಿಂದ ಬಿಸಿಯೂಟ ನೀಡುವ ಬಗ್ಗೆ ಸೂಕ್ತ ನಿರ್ಧಾರ ತೆಗೆದುಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುವಂತೆ ನಿರ್ದೇಶನ ಕೋರಿ ನಗರದ ಎಂ. ರಾಧಾ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿ ಈ ನಿರ್ದೇಶನ ನೀಡಿದೆ.

ಈಗಾಗಲೇ ಶಾಲೆಗಳನ್ನು ಆರಂಭಿಸಿರುವುದರಿಂದ ಕೊರೊನಾ ಸೋಂಕಿನ ಕಾರಣ ಹೇಳಿ ಬಿಸಿಯೂಟ ತಪ್ಪಿಸುವುದು ಸಮರ್ಥನೀಯವಲ್ಲ. ಆದ್ದರಿಂದ ಶಾಲೆಗೆ ಬರುತ್ತಿರುವ ಮಕ್ಕಳಿಗೆ ಏಪ್ರಿಲ್ 15ರಿಂದ ಬಿಸಿಯೂಟ ನೀಡುವ ಕುರಿತು ಏ.8ರ ಒಳಗೆ ಸರಿಯಾದ ನಿರ್ಧಾರ ಕೈಗೊಂಡು ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿದೆ.

ಓದಿ: ಎಸ್ಐಟಿ ವಿರುದ್ಧ ದೂರು ನೀಡಲು ಮುಂದಾದ ಯುವತಿ ಪರ ವಕೀಲರು

ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಎದ್ದಿದೆ. ಹೀಗಾಗಿ, ಸೋಂಕಿನ ಭಯದಿಂದ ಮಧ್ಯಾಹ್ನದ ಬಿಸಿಯೂಟದ ಬದಲಿಗೆ ಮಕ್ಕಳಿಗೆ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತಿದೆ. ಜೊತೆಗೆ ಮುಂದಿನ ಶೈಕ್ಷಣಿಕ ವರ್ಷ ಯಾವಾಗ ಆರಂಭಿಸಬೇಕು ಎನ್ನುವುದೂ ಸ್ಪಷ್ಟವಾಗಿಲ್ಲ. ಆದ್ದರಿಂದ ಬಿಸಿಯೂಟದ ಬದಲಿಗೆ ಆಹಾರ ಧಾನ್ಯ ಪೂರೈಸಲಾಗುತ್ತಿದೆ ಎಂದರು.

ಆದರೆ ಈ ವಾದವನ್ನು ಮಾನ್ಯ ಮಾಡಲು ನಿರಾಕರಿಸಿದ ಪೀಠ, ಬಿಸಿಯೂಟ ನೀಡುವ ಸಂಬಂಧ ಸೂಕ್ತ ನಿರ್ಣಯ ಕೈಗೊಳ್ಳುವಂತೆ ನಿರ್ದೇಶಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.