ETV Bharat / state

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ ಸಂಬಂಧಿಸಿದ ಶಿಫಾರಸುಗಳನ್ನು ಜಾರಿ ಮಾಡಿ : ಹೈಕೋರ್ಟ್ - ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಶಿಫಾರಸು ಅರ್ಜಿ ವಿಚಾರಣೆ

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯನ್ನು ರಾಜ್ಯದಲ್ಲಿ ಸಮರ್ಥವಾಗಿ ಜಾರಿಗೊಳಿಸುವ ಸಂಬಂಧ ಹೈಕೋರ್ಟ್ 2013ರಲ್ಲಿ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿತು..

High Court
ಹೈಕೋರ್ಟ್
author img

By

Published : Feb 19, 2022, 10:56 PM IST

ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ನ್ನು ಜಾರಿಗೊಳಿಸುವುದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಅಮೈಕಸ್ ಕ್ಯೂರಿ ಸಲ್ಲಿಸಿರುವ ಶಿಫಾರಸುಗಳನ್ನು ಜಾರಿಗೊಳಿಸಲು ಸಂಬಂಧ ಉನ್ನತಾಧಿಕಾರ ಸಮಿತಿ ಸಭೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯನ್ನು ರಾಜ್ಯದಲ್ಲಿ ಸಮರ್ಥವಾಗಿ ಜಾರಿಗೊಳಿಸುವ ಸಂಬಂಧ ಹೈಕೋರ್ಟ್ 2013ರಲ್ಲಿ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಅಗತ್ಯ ನೆರವು ನೀಡಲು ನಿಯೋಜನೆಗೊಂಡಿರುವ ಅಮೈಕಸ್‌ ಕ್ಯೂರಿ ಆದ ಹಿರಿಯ ವಕೀಲ ಕೆ.ಎನ್ ಫಣೀಂದ್ರ ವಾದ ಮಂಡಿಸಿ, ಖಾಲಿಯಿರುವ ಶೈಕ್ಷಣಿಕ ಸಮನ್ವಯಕಾರರ ಹುದ್ದೆಗಳನ್ನು ಒಂದು ತಿಂಗಳ ಅವಧಿಯಲ್ಲಿ ಭರ್ತಿ ಮಾಡುವುದಕ್ಕೆ ಸಂಬಂಧಿಸಿದಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ಅಂತೆಯೇ ಇನ್ನೂ ಹಲವು ಶಿಫಾರಸುಗಳನ್ನು ನೀಡಲಾಗಿದ್ದು, ಈ ವಿಚಾರಗಳ ಕುರಿತು ಉನ್ನತಾಧಿಕಾರ ಸಭೆಯಲ್ಲಿ ಚರ್ಚೆ ನಡೆಸಬೇಕಿದೆ. ಈ ಕುರಿತು ಸಭೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು. ವಾದ ಪರಿಗಣಿಸಿದ ಪೀಠ, ಸಭೆ ನಡೆಸುವಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತು.

ಇದೇ ವೇಳೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪರ ವಕೀಲ ವಿ. ಶ್ರೀನಿಧಿ, ಶಾಲೆ ತೊರೆದಿರುವ 6 ರಿಂದ 14 ವಯಸ್ಸಿನ ಮಕ್ಕಳ ದತ್ತಾಂಶ ಸಂಗ್ರಹಿಸುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮನೆಮನೆ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿದೆ.

ಆದರೆ, ಸಮೀಕ್ಷಾ ವರದಿಯಲ್ಲಿ ಕೆಲವು ದೋಷಗಳಿದ್ದು, ಅವುಗಳನ್ನು ಸರಿಪಡಿಸಲು ಎರಡು ವಾರಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಮನವಿ ಪುರಸ್ಕರಿಸಿದ ಪೀಠ, ವಿಚಾರಣೆಯನ್ನು ಮಾರ್ಚ್‌ 21ಕ್ಕೆ ಮುಂದೂಡಿತು.

ಇದನ್ನೂ ಓದಿ: ಬೆಂಗಳೂರಲ್ಲಿ ಡ್ಯಾನ್ಸ್ ಬಾರ್ ಮೇಲೆ ಸಿಸಿಬಿ ಪೊಲೀಸರ ದಾಳಿ: ಮೂವರ ಬಂಧನ, 28 ಮಹಿಳೆಯರ ರಕ್ಷಣೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.