ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವವರು ಹಾಗೂ ಆರ್ಥಿಕವಾಗಿ ದುರ್ಬಲವಿರುವ ಎಲ್ಲ ವರ್ಗದ ಕುಟುಂಬಗಳಿಗೆ ವಸತಿ ಕಲ್ಪಿಸುವ ಯೋಜನೆಗಳು ಸರಿಯಾಗಿ ಅನುಷ್ಠಾನಗೊಳ್ಳುತ್ತಿವೆಯೇ? ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಹೈಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಿದೆ. ವಕೀಲ ಮೊಹಮ್ಮದ್ ಇಕ್ಬಾಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಇಂದು ನಡೆಸಿತು.
ನಗರ-ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ-ಮನೆ ಇಲ್ಲದ ಹಾಗೂ ಆರ್ಥಿಕವಾಗಿ ದುರ್ಬಲವಿರುವ ಎಲ್ಲ ವರ್ಗದ ಜನರಿಗೆ ಮುಂದಿನ 1 ಅಥವಾ ಎರಡು ವರ್ಷಗಳಲ್ಲಿ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸುವಂತೆ ಕೋರಿ ವಕೀಲ ಮೊಹಮ್ಮದ್ ಇಕ್ಬಾಲ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ಪೀಠ ತನ್ನ ತೀರ್ಪಿನಲ್ಲಿ, ನಿರ್ವಸಿತರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ಆರಂಭಿಸಿದೆ ಎಂದಿದೆ.
ಇದನ್ನೂ ಓದಿ: ಕರಕುಶಲ ವೃತ್ತಿ ತರಬೇತಿ ಪ್ರೋತ್ಸಾಹ ಧನ ₹1,500ಕ್ಕೇರಿಕೆ: ಎಂಟಿಬಿ