ಬೆಂಗಳೂರು: ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ತಜ್ಞರು, ದಾದಿಯರು, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಸಹಾಯಕರ ಹುದ್ದೆಗಳನ್ನು ನವೆಂಬರ್ 30ರ ಒಳಗಾಗಿ ಭರ್ತಿ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.
![high court order to state government](https://etvbharatimages.akamaized.net/etvbharat/prod-images/6285871_thumbbng.jpg)
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ, ಈ ಮಧ್ಯಂತರ ಆದೇಶ ನೀಡಿದೆ.
ತಾಲೂಕು ಮಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಉಪ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಪ್ರಥಮ ಆದ್ಯತೆ ನೀಡಬೇಕು. ಇವುಗಳ ಕಾರ್ಯ ನಿರ್ವಹಣೆಗಾಗಿ ಪ್ರತಿ ಜಿಲ್ಲೆಯಲ್ಲೂ ಉನ್ನತ ಹಂತದ ಅಧಿಕಾರಿಗಳ ಸಮಿತಿಯನ್ನು ನೇಮಕ ಮಾಡಬೇಕು. ಭರ್ತಿ ದಿಸೆಯಲ್ಲಿ ಕೈಗೊಳ್ಳುವ ಮೊದಲನೇ ಹಂತದ ಕಾರ್ಯ ಪ್ರಗತಿಯನ್ನು ಮಾರ್ಚ್ 20ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ಪೀಠ ನಿರ್ದೇಶಿಸಿದೆ.