ETV Bharat / state

ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಇಲಾಖಾವಾರು ತನಿಖೆಗೆ ಹೈಕೋರ್ಟ್ ಸೂಚನೆ

ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸೂಚನೆ ಉಲ್ಲಂಘಿಸಿ, ಕರ್ತವ್ಯ ಲೋಪ ತೋರಿದ್ದ ಕಾಟನ್‌ಪೇಟೆ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಇಲಾಖಾವಾರು ತನಿಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

High Court orders departmental inquiry
ನ್ಯಾಯಾಲಯದ ಸೂಚನೆ ಉಲ್ಲಂಘನೆ:ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಇಲಾಖಾವಾರು ತನಿಖೆಗೆ ಹೈಕೋರ್ಟ್ ಸೂಚನೆ..
author img

By

Published : Feb 1, 2023, 5:18 PM IST

ಬೆಂಗಳೂರು: ಕಳ್ಳತನ ಪ್ರಕರಣವೊಂದರ ಕುರಿತಂತೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸೂಚನೆಯ ಹೊರತಾಗಿಯೂ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ತೋರಿದ್ದ ಕಾಟನ್‌ಪೇಟೆ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಆಗಿದ್ದ ಕೆ.ವೈ. ಪ್ರವೀಣ್ ವಿರುದ್ಧ ಇಲಾಖಾವಾರು ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮನೆಯಲ್ಲಿ ನಡೆದ ಕಳ್ಳತನ ಪ್ರಕರಣವೊಂದರ ಕುರಿತು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸೂಚನೆ ಮೇರೆಗೆ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಯನ್ನು ನೇಮಕ ಮಾಡುವಂತೆ ಕೋರಿ ಕಾಟನ್‌ಪೇಟೆಯ ನಿವಾಸಿ ಎಂ. ಪ್ರಕಾಶ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಸೂಚನೆ ನೀಡಿದೆ. ಅಲ್ಲದೇ, ಇಲಾಖಾವಾರ ತನಿಖೆ ಪೂರ್ಣಗೊಂಡ ಬಳಿಕ ವರದಿಯನ್ನು ಹೈಕೋರ್ಟ್ ರಿಜಿಸ್ಟ್ರಾರ್‌ಗೆ ಸಲ್ಲಿಸುವಂತೆ ನಿರ್ದೇಶನ ಕೊಟ್ಟಿದೆ.

ನ್ಯಾಯಾಲಯಗಳು ಕಾನೂನುಬದ್ಧವಾಗಿ ನೀಡುವ ಆದೇಶವನ್ನು ಪೋಲೀಸರು ಗಂಭೀರವಾಗಿ ಪರಿಗಣಿಸಿ ಜಾರಿ ಮಾಡಬೇಕು. ಇಲ್ಲವಾದಲ್ಲಿ ಸಂತ್ರಸ್ತರಾದವರ ಮೂಲಭೂತ ಹಕ್ಕು ಉಲ್ಲಂಘನೆಯಾಗುತ್ತದೆ. ಅಲ್ಲದೇ, ಈ ರೀತಿಯ ಅಧಿಕಾರಿ ವರ್ಗಗಳ ನಡೆ ಗಂಭೀರ ದುರ್ನಡತೆ ಮತ್ತು ದಂಡ ವಿಧಿಸಬಹುದಾದ ಉದಾಹರಣೆಯಾಗಿದೆ. ಇಂತಹ ಕರ್ತವ್ಯ ಲೋಪವನ್ನು ಸಹಿಸಲಾಗದು ಎಂದು ನ್ಯಾಯಪೀಠ ಹೇಳಿದೆ.

ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೂಚನೆ ನೀಡಿದ ತಕ್ಷಣ ಪೊಲೀಸ್ ಅಧಿಕಾರಿಗಳು ಕಾನೂನು ಪ್ರಕಾರ ಎಫ್‌ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಬೇಕು. ಆದರೆ, ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಿರ್ದೇಶನ ನೀಡಿದ ಐದೂವರೆ ತಿಂಗಳ ಬಳಿಕ ಪ್ರಕರಣ ದಾಖಲಿಸಲಾಗಿದೆ. ಈ ಬೆಳವಣಿಗೆಗೆ ಪೊಲೀಸ್ ಇನ್ಸ್ಪೆಕ್ಟರ್ ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿಯೇ ಕಾರಣ ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿದೆ. ಕೃತ್ಯಕ್ಕೆ ಕಾರಣವಾದ ಅಧಿಕಾರಿ ಕೆ.ವೈ ಪ್ರವೀಣ್ ಕಡತ ನಾಪತ್ತೆಯಾಗಿತ್ತು. ಹೀಗಾಗಿ ಪ್ರಕರಣ ದಾಖಲಿಸಲು ವಿಳಂಬವಾಗಿದೆ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಅಂದಮಾತ್ರಕ್ಕೆ ಪ್ರಕರಣವನ್ನು ಕೈ ಬಿಡುವುದಕ್ಕೆ ಸಾಧ್ಯವಿಲ್ಲ. ಪೊಲೀಸ್ ಇಲಾಖೆ ಪ್ರಮಾಣ ಪತ್ರದಲ್ಲಿ ತಿಳಿಸಿರುವಂತೆ ಅಧಿಕಾರಿಯ ಕರ್ತವ್ಯಲೋಪ ಒಪ್ಪಿಕೊಂಡಂತಾಗಿದೆ. ಹೀಗಾಗಿ ಆ ಅಧಿಕಾರಿಯ ವಿರುದ್ಧ ಇಲಾಖಾವಾರು ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

ಪ್ರಕರಣದ ಹಿನ್ನೆಲೆ: ಪ್ರಕರಣದ ಆರೋಪಿಯಾಗಿರುವ ವಿನಾಯಕ ಮತ್ತು ಅರ್ಜಿದಾರರ ನಡುವೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಿವಿಲ್ ದಾವೆ ವಿಚಾರಣೆಯ ಹಂತದಲ್ಲಿದೆ. ಈ ನಡುವೆ ಆರೋಪಿ 2021ರ ಮಾರ್ಚ್ 26 ರಂದು ಅರ್ಜಿದಾರರ ಮನೆ ಬಾಗಿಲು ಮುರಿದು ಹಲವು ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿದ್ದರು. ಈ ಕುರಿತಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಸೂಚನೆ ನೀಡುವಂತೆ ಕೋರಿ ಅರ್ಜಿದಾರರ ಪ್ರಕಾಶ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ದೂರಿನ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 2022 ಮಾರ್ಚ್ 4 ರಂದು ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುವಂತೆ ಕಾಟನ್‌ಪೇಟೆ ಪೊಲೀಸ್ ಠಾಣೆಗೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತ್ತು. ಈ ಸಂಬಂಧ ಆದೇಶದ ಪ್ರತಿಯನ್ನು 2022ರ ಮೇ 4 ರಂದು ಸ್ವೀಕರಿಸಿದ್ದ ಕಾಟನ್ ಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಲು ಮುಂದಾಗಿರಲಿಲ್ಲ. ಮತ್ತೆ ಅರ್ಜಿ ವಿಚಾರಣೆಗೆ ಬಂದ ಸಂದರ್ಭದಲ್ಲಿ ಪ್ರಕರಣ ದಾಖಲಿಸುವಂತೆ ಪೊಲೀಸ್ ಠಾಣೆಗೆ ಮತ್ತೊಮ್ಮೆ ನೆನಪು ಮಾಡಿತ್ತು. ಆದರೂ ಪ್ರಕರಣ ದಾಖಲಿಸಿರಲಿಲ್ಲ. ಇದಾದ ಸುಮಾರು ಐದೂವರೆ ತಿಂಗಳ ಬಳಿಕ ಪ್ರಕರಣ ದಾಖಲಿಸಲಾಗಿತ್ತು.

ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸಿದ್ದ ಪೊಲೀಸ್ ಇಲಾಖೆ, ನ್ಯಾಯಾಲಯದ ಸೂಚನೆ 2022ರ ಮೇ 4 ರಂದು ಬಂದಿದ್ದರೂ, ಈ ಸಂಬಂಧ ಕಡತ ಇನ್‌ಸ್ಪೆಕ್ಟರ್ ಟೇಬಲ್‌ನಿಂದ ನಾಪತ್ತೆಯಾಗಿತ್ತು. ಇದೀಗ ಕಡತ ಪತ್ತೆಯಾಗಿದ್ದು ತಕ್ಷಣ ಪ್ರಕರಣ ದಾಖಲಿಸಲಾಗಿದೆ ಎಂದು ವಿಳಂಬಕ್ಕೆ ಸಬೂಬು ನೀಡಿತ್ತು. ಇದಕ್ಕೆ ಕಾರಣವಾದ ಪೊಲೀಸ್ ಇನ್‌ಸ್ಪೆಕ್ಟರ್‌ರನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಗಳಿಸುವುದಿಲ್ಲ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಿದ್ದರು.

ಇದನ್ನೂ ಓದಿ:ಕೇವಲ ಒಂದು ಜೊತೆ ಸಮವಸ್ತ್ರ ನೀಡುತ್ತಿರುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತರಾಟೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.