ETV Bharat / state

ಭ್ರೂಣಲಿಂಗ ಪತ್ತೆ ನಿಷೇಧ: ಸಕ್ಷಮ ಪ್ರಾಧಿಕಾರದ ದೂರುಗಳನ್ನಷ್ಟೇ ಪರಿಗಣಿಸಲು ಹೈಕೋರ್ಟ್ ಆದೇಶ

ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ಮಾಡುವ ಉಪಕರಣಗಳನ್ನು ಅಳವಡಿಸಲಾಗಿದೆ ಎಂಬ ಆರೋಪದ ಮೇಲೆ ಗೋಕಾಕ್ ತಾಲೂಕು ಆರೋಗ್ಯಾಧಿಕಾರಿ ಕಾಯ್ದೆಯ ಸೆಕ್ಷನ್ 28ರ ಆಡಿಯಲ್ಲಿ ದೂರು ದಾಖಲಿಸಿದ್ದರು.

ಹೈಕೋರ್ಟ್
ಹೈಕೋರ್ಟ್
author img

By

Published : Mar 2, 2022, 9:42 PM IST

ಬೆಂಗಳೂರು: ಭ್ರೂಣಲಿಂಗ ಪತ್ತೆ ನಿಷೇಧಕ್ಕೆ ಸಂಬಂಧಿಸಿದಂತೆ ‘ಪ್ರಸವ ಪೂರ್ವ ಲಿಂಗ ಪತ್ತೆ ತಂತ್ರಜ್ಞಾನ (ನಿಯಂತ್ರಣ ಮತ್ತು ದುರ್ಬಳಕೆ ತಡೆ) ಕಾಯ್ದೆ-1994’ ರ ಅಡಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಧಿಸೂಚಿತ ಸಕ್ಷಮ ಪ್ರಾಧಿಕಾರದ ಅಧಿಕಾರಿ ದಾಖಲಿಸಿದ ದೂರುಗಳನ್ನು ಮಾತ್ರವೇ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆಗೆ ಪರಿಗಣಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ಗೋಕಾಕ್​​ನ ಖಾಸಗಿ ಆಸ್ಪತ್ರೆ ಹಾಗೂ ಅದರ ವೈದ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ತೀರ್ಪು ನೀಡಿದೆ.

ಪೀಠ ತನ್ನ ತೀರ್ಪಿನಲ್ಲಿ, 1994ರ ಕಾಯ್ದೆ ಪ್ರಕಾರ ಭ್ರೂಣ ಲಿಂಗ ಪತ್ತೆ ಆರೋಪದಡಿ ದೂರು ದಾಖಲಿಸಲು ಆಯಾ ಜಿಲ್ಲೆಗಳ ಉಪ ವಿಭಾಗಾಧಿಕಾರಿಗಳು ಸಕ್ಷಮ ಪ್ರಾಧಿಕಾರ (ಅಧಿಕಾರಿ) ಆಗಿರುತ್ತಾರೆ. ಸೆಕ್ಷನ್ 28ರ ಅಡಿಯಲ್ಲಿ ಸಕ್ಷಮ ಪ್ರಾಧಿಕಾರ ದಾಖಲಿಸುವ ದೂರು ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಕಾಗ್ನಿಜೆನ್ಸ್ ತೆಗೆದುಕೊಳ್ಳುವುದು ಕಡ್ಡಾಯ ಮಾಡಲಾಗಿದೆ.

ಹಾಗಾಗಿ, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ತಾಲೂಕು ಆರೋಗ್ಯಾಧಿಕಾರಿ ದಾಖಲಿಸಿರುವ ದೂರು ಕಾನೂನು ಬಾಹಿರವಾಗಿದೆ. ಪ್ರಕರಣ ಸಂಬಂಧ ಗೋಕಾಕ್ ಪ್ರಧಾನ ಸಿವಿಲ್ ಮತ್ತು ಜೆಎಫ್‌ಎಂಸಿ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲಾಗುತ್ತಿದೆ ಎಂದು ತಿಳಿಸಿದೆ.

ಅಲ್ಲದೆ, ಭ್ರೂಣ ಲಿಂಗ ಪತ್ತೆ ನಿಷೇಧಿಸುವ ‘ಪ್ರಸವ ಪೂರ್ವ ಲಿಂಗ ಪತ್ತೆ ತಂತ್ರಜ್ಞಾನ (ನಿಯಂತ್ರಣ ಮತ್ತು ದುರ್ಬಳಕೆ ತಡೆ) ಕಾಯ್ದೆ 1994 ರ ಅಡಿ ದಾಖಲೆಗಳನ್ನು ನಿರ್ವಹಣೆ ಮಾಡಿಲ್ಲ ಎಂದು ಅಭಿಪ್ರಾಯಪಟ್ಟು ಮ್ಯಾಜಿಸ್ಟ್ರೇಟ್ ಕಾಗ್ನಿಸೆನ್ಸ್ ತೆಗೆದುಕೊಂಡ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ಮಾಡುವ ಉಪಕರಣಗಳನ್ನು ಅಳವಡಿಸಲಾಗಿದೆ ಎಂಬ ಆರೋಪದ ಮೇಲೆ ಗೋಕಾಕ್ ತಾಲೂಕು ಆರೋಗ್ಯಾಧಿಕಾರಿ, ಕಾಯ್ದೆಯ ಸೆಕ್ಷನ್ 28ರ ಆಡಿಯಲ್ಲಿ ದೂರು ದಾಖಲಿಸಿದ್ದರು.

ಈ ದೂರನ್ನು ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಕಾಗ್ನಿಜೆನ್ಸ್ ತೆಗೆದುಕೊಂಡಿತ್ತು. ಆ ಬಳಿಕ, ಆಸ್ಪತ್ರೆ ವೈದ್ಯರು ಪ್ರಕರಣ ಸಂಬಂಧ ತಾಲೂಕು ಆರೋಗ್ಯ ಅಧಿಕಾರಿಯು ಕಾಯ್ದೆಯಡಿ ದೂರು ದಾಖಲಿಸಲು ಸಕ್ಷಮ ಪ್ರಾಧಿಕಾರದ ಅಧಿಕಾರಿಯಲ್ಲ. ತಪಾಸಣೆ ನಡೆಸಲು ಆರೋಗ್ಯಾಧಿಕಾರಿಗೆ ಅಧಿಕಾರವೂ ಇಲ್ಲ. ಆದ್ದರಿಂದ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದ್ದರು.

ಕಾಯ್ದೆಯ ಸೆಕ್ಷನ್ 17(2) ಅಡಿ ಸೂಕ್ತ ಪ್ರಾಧಿಕಾರವನ್ನು ನೇಮಕ ಮಾಡಿ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪರಿಶೀಲಿಸಿದ ಹೈಕೋರ್ಟ್ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.