ಬೆಂಗಳೂರು: ರಾಜ್ಯದ 23 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಇಂದು ಆದೇಶಿಸಿದೆ.
ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿಕರ್ ಅವರು ನೋಟಿಫಿಕೇಷನ್ ಹೊರಡಿಸಿದ್ದಾರೆ. ಈ ವರ್ಗಾವಣೆ ಆದೇಶವು ಮೇ 4 ರಿಂದ ಜಾರಿಗೆ ಬರಲಿದೆ. ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರಾಗಿದ್ದ ಎಸ್.ವೈ.ವಟವಟಿ ಅವರನ್ನು ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
ವರ್ಗಾವಣೆಯಾದ 23 ನ್ಯಾಯಾಧೀಶರ ಪಟ್ಟಿಯನ್ನು ಹೈಕೋರ್ಟ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.