ETV Bharat / state

ನ್ಯಾಯಾಲಯದ ಆದೇಶ ಪಾಲಿಸದ ಮಂಗಳೂರು ಪಾಲಿಕೆ ಆಯುಕ್ತ: ಹೈಕೋರ್ಟ್ ಗರಂ - High Court slammed against Mangalore Metropolitan commissioner

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ, ಮಂದಾರ ಪ್ರದೇಶಗಳಲ್ಲಿ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಉಂಟಾಗಿರುವ ಅನಾಹುತದ ವಿಚಾರವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

high-court-outrage-against-mangalore-metropolitan-commissioner
ಹೈಕೋರ್ಟ್
author img

By

Published : Jan 28, 2021, 4:31 PM IST

ಬೆಂಗಳೂರು: ಘನತ್ಯಾಜ್ಯ ಭೂಭರ್ತಿ ಘಟಕ ಕುಸಿತ ದುರಂತ ಪ್ರಕರಣದ ಸಂತ್ರಸ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದ ನಂತರವೂ ಪರಿಹಾರ ನೀಡದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ, ಮಂದಾರ ಪ್ರದೇಶಗಳಲ್ಲಿ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಉಂಟಾಗಿರುವ ಅನಾಹುತದ ವಿಚಾರವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಪಾಲಿಕೆ ಸಲ್ಲಿಸಿದ್ದ ವರದಿ ಪರೀಶಿಲಿಸಿದ ಪೀಠ, ಆಯುಕ್ತರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಘಟನೆಯಲ್ಲಿ ನಷ್ಟ ಅನುಭವಿಸಿರುವ ಸಂತ್ರಸ್ತರಿಗೆ ಪರಿಹಾರ ನೀಡಲು ನ್ಯಾಯಾಲಯ ಜನವರಿ 21ರಂದು ಆದೇಶಿಸಿದೆ. ಆದರೂ ಆಯುಕ್ತರು ಪರಿಹಾರ ವಿತರಿಸಿಲ್ಲ. ಪರಿಹಾರ ಪಡೆದುಕೊಳ್ಳಬೇಕಿರುವ ಸಂತ್ರಸ್ತರ ಕುರಿತು ಸ್ಪಷ್ಟ ಮಾಹಿತಿಯನ್ನೂ ನೀಡಿಲ್ಲ. ಸಬೂಬು ಹೇಳುತ್ತಿರುವ ಆಯುಕ್ತರು ನ್ಯಾಯಾಲಯದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಈ ರೀತಿ ನಡೆದುಕೊಳ್ಳುವುದನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಇದೇ ವೇಳೆ ಅರ್ಜಿದಾರರ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಸಂತ್ರಸ್ತರಿಗೆ ಈವರೆಗೂ ಪರಿಹಾರ ನೀಡಿಲ್ಲ. ಪರಿಹಾರ ನೀಡುವ ಕುರಿತು ನಮ್ಮೊಂದಿಗೆ ಚರ್ಚಿಸಿಲ್ಲ. ಪಾಲಿಕೆಯೇ ತನಗಿಷ್ಟ ಬಂದಂತೆ ಪರಿಹಾರ ನಿಗದಿಪಡಿಸಿದೆ ಎಂದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೀಠ, ಪಾಲಿಕೆ ಪರ ವಕೀಲರಿಗೆ ಸೂಚನೆ ನೀಡಿ, ನಿಮ್ಮ ಆಯುಕ್ತರಿಗೆ ಕರೆ ಮಾಡಿ ಇಂದು ಅಥವಾ ನಾಳೆಯೊಳಗೆ ಪರಿಹಾರ ವಿತರಿಸುವ ಕುರಿತು ನಿಲುವು ಪಡೆದು ತಿಳಿಸಿ. ಉದಾಸೀನವಾಗಿ ವರ್ತಿಸಿದರೆ ನ್ಯಾಯಾಲಯ 1 ಲಕ್ಷ ದಂಡ ವಿಧಿಸಲಿದೆ ಎಂದು ಎಚ್ಚರಿಕೆ ನೀಡಿ, ಕೆಲ ಕಾಲ ವಿಚಾರಣೆ ಮುಂದೂಡಿತು.

ಮತ್ತೆ ವಿಚಾರಣೆ ಆರಂಭವಾದಾಗ ಪಾಲಿಕೆ ಪರ ವಕೀಲರು ಪರಿಹಾರ ವಿತರಿಸುವ ಭರವಸೆ ನೀಡಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಘಟನೆಯಲ್ಲಿ 102 ಮಂದಿ ಸಂತ್ರಸ್ತರಿದ್ದಾರೆ ಎನ್ನಲಾಗಿದೆ. ಅದರಂತೆ ಪಾಲಿಕೆ ಸಂತ್ರಸ್ತರಿಗೆ ಪರಿಹಾರ ನೀಡಿ ಆ ಕುರಿತ ದಾಖಲೆಗಳನ್ನು ಅರ್ಜಿದಾರರಾದ ಕಾನೂನು ಸೇವಾ ಸಮಿತಿಗೆ ಸಲ್ಲಿಸಲಿ. ಈ ದಾಖಲೆಗಳನ್ನು ಅರ್ಜಿದಾರರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು ಪರಿಶೀಲಿಸಿ, ಪರಿಹಾರ ನೀಡಿರುವ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿ ಎಂದು ನಿರ್ದೇಶಿಸಿತು.

ಓದಿ: ರಾಜಕಾರಣ ನೀರಿನ ಮೇಲಿನ ಗುಳ್ಳೆ ಇದ್ದ ಹಾಗೆ: ಸಚಿವ ನಾರಾಯಣಗೌಡ

ಅಲ್ಲದೆ ಪರಿಹಾರ ವಿತರಿಸಿದ ಕುರಿತು ಪಾಲಿಕೆಯೂ ಪ್ರಮಾಣಪತ್ರ ಸಲ್ಲಿಸಲಿ. ಆ ಬಳಿಕ ಪರಿಹಾರ ಹಂಚಿಕೆ ಲೋಪಗಳ ಕುರಿತು ಮೇಲ್ವಿಚಾರಣೆ ಮಾಡಲು ಜಿಲ್ಲಾ ನ್ಯಾಯಾಧೀಶರೊಬ್ಬರನ್ನು ನೇಮಕ ಮಾಡುವ ಕುರಿತು ಪೀಠ ತೀರ್ಮಾನಿಸಲಿದೆ ಎಂದು ಸೂಚಿಸಿತು. ಅಲ್ಲದೆ ಈ ಪ್ರಕರಣವನ್ನು ಘನತ್ಯಾಜ್ಯ ನಿರ್ವಹಣೆ ಕುರಿತ ಅರ್ಜಿಗಳಿಂದ ಪ್ರತ್ಯೇಕಿಸಿ ವಿಚಾರಣೆ ನಡೆಸುವುದಾಗಿ ತಿಳಿಸಿದ ಪೀಠ, ವಿಚಾರಣೆಯನ್ನು ಫೆಬ್ರವರಿ 15ಕ್ಕೆ ಮುಂದೂಡಿತು. ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಮಂಗಳೂರು ಸ್ಮಾರ್ಟ್ ಸಿಟಿ ಕಾರ್ಪೊರೇಷನ್​ಗೆ ಕಮಿಷನರ್ ಆಗಿ ಪ್ರಶಾಂತ್ ಕುಮಾರ್ ನೇಮಕ ಮಾಡಿರುವುದಾಗಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.