ETV Bharat / state

ಆಕ್ಸಿಜನ್ ಕೊರತೆಯಿಂದ ರೋಗಿಗಳ ಸಾವು : ಕೇಂದ್ರದ ವಿರುದ್ಧ ಹೈಕೋರ್ಟ್ ಗರಂ - scarcity of oxygen supply

ಕೋವಿಡ್ ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ಹಾಗೂ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

high-court
ಹೈಕೋರ್ಟ್
author img

By

Published : May 4, 2021, 5:48 PM IST

ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಕೋವಿಡ್ ರೋಗಿಗಳು ಸಾವನ್ನಪ್ಪುತ್ತಿರುವ ವಿಚಾರವಾಗಿ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ರಾಜ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಆಕ್ಸಿಜನ್ ಪೂರೈಸದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಕೋವಿಡ್ ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ಹಾಗೂ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಆರ್ಜಿಗಳ ವಿಚಾರಣೆ ವೇಳೆ ಆಕ್ಸಿಜನ್ ಕೊರತೆಯನ್ನೇ ಪ್ರಮುಖವಾಗಿ ಪರಿಗಣಿಸಿದ ಪೀಠ, ರಾಜ್ಯಕ್ಕೆ ಎಷ್ಟು ಆಕ್ಸಿಜನ್ ಬೇಡಿಕೆ ಇದೆ. ಕೊರತೆ ಎಷ್ಟಿದೆ ಹಾಗೂ ಕೇಂದ್ರದಿಂದ ಪೂರೈಕೆಯಾಗುತ್ತಿರುವ ಆಕ್ಸಿಜನ್ ಪ್ರಮಾಣವೆಷ್ಟು ಎಂದು ಕೇಂದ್ರ ಹಾಗೂ ರಾಜ್ಯದ ಪರ ವಕೀಲರನ್ನು ಪ್ರಶ್ನಿಸಿತು. ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಮಾಹಿತಿ ನೀಡಿ, ಮೇ 5ರ ಪ್ರಕಾರ ರಾಜ್ಯಕ್ಕೆ 1700 ಮೆಟ್ರಿಕ್ ಟನ್ ಆಕ್ಸಿಜನ್ ಅಗತ್ಯವಿದೆ. ಸರ್ಕಾರವೇ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸುತ್ತಿದೆ ಎಂದರು.

ಕೇಂದ್ರದ ಪರ ವಕೀಲರಾದ ಎನ್. ಕುಮಾರ್ ಮಾಹಿತಿ ನೀಡಿ, ಹಿಂದಿನ ವಿಚಾರಣೆ ವೇಳೆ ನ್ಯಾಯಾಲಯ ರಾಜ್ಯಕ್ಕೆ ಅಗತ್ಯವಿರುವಂತೆ 802 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುವಂತೆ ನಿರ್ದೇಶಿಸಿತ್ತು. ಕೇಂದ್ರ ಸರ್ಕಾರ ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ 865 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುತ್ತಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ರಾಜ್ಯದಲ್ಲಿ ಆಕ್ಸಿಜನ್ ಬೇಡಿಕೆ ಏರಿಕೆಯಾಗಿದ್ದು, 1700 ಮೆ. ಟನ್ ಅಗತ್ಯವಿದೆ. ಅದನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಕೇಂದ್ರದಿಂದ ಸ್ಪಷ್ಟನೆ ಪಡೆದು ಮಾಹಿತಿ ನೀಡುವಂತೆ ತಿಳಿಸಿ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿತು.

ಮಧ್ಯಾಹ್ನದ ಕಲಾಪದ ವೇಳೆ ಕೇಂದ್ರದ ಪರ ವಕೀಲರು ರಾಜ್ಯಕ್ಕೆ ಹೆಚ್ಚಿನ ಆಕ್ಸಿಜನ್ ಪೂರೈಸುವ ಸಂಬಂಧ ನಿರ್ಧಾರ ಕೈಗೊಳ್ಳಲು ಸಮಯಾವಕಾಶ ನೀಡಬೇಕು ಎಂದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ ಚಾಮರಾಜನಗರ, ಕಲಬುರಗಿಯಲ್ಲಿ ಆಕ್ಸಿಜನ್ ಸಿಗದೆ ರೋಗಿಗಳು ಸಾವನ್ನಪ್ಪಿದ್ದಾರೆ. ಆಕ್ಸಿಜನ್ ಸಿಗದೆ ಮತ್ತಷ್ಟು ಕೋವಿಡ್ ರೋಗಿಗಳು ಸಾವನ್ನಪ್ಪಬೇಕೇ ಎಂದು ಪ್ರಶ್ನಿಸಿತು. ಜತೆಗೆ ರಾಜ್ಯದಲ್ಲಿ ಕೋವಿಡ್ ಮಿತಿ ಮೀರುತ್ತಿದೆ. ಬೆಂಗಳೂರು ಬಿಟ್ಟು ಎಲ್ಲಾದರೂ ದಿನಕ್ಕೆ 20 ಸಾವಿರಕ್ಕೂ ಅಧಿಕ ಪ್ರಕರಣಗಳಿವೆಯೇ. ಬೇರೆ ರಾಜ್ಯಗಳಿಗೆ ಪೂರೈಕೆಯಾಗುತ್ತಿರುವ ಆಕ್ಸಿಜನ್ಅ​ನ್ನು ರಾಜ್ಯಕ್ಕೆ ಪೂರೈಸಬಹುದಲ್ಲವೇ ಎಂದು ಕೇಳಿತು.

ಇದಕ್ಕೆ ಸ್ಪಷ್ಟನೆ ನೀಡಿದ ಕೇಂದ್ರದ ಪರ ವಕೀಲರು, ಆಕ್ಸಿಜನ್ ಪೂರೈಕೆ ವಿಚಾರವನ್ನು ಒಂದೇ ಇಲಾಖೆ ನಿರ್ಧರಿಸುವುದಿಲ್ಲ. ಸಂಬಂಧಪಟ್ಟ ಇಲಾಖೆಗಳು ಹಾಗೂ ಪ್ರಾಧಿಕಾರಗಳು ಸಭೆ ನಡೆಸಿ ತೀರ್ಮಾನಿಸಬೇಕು. ಹೀಗಾಗಿ, ಈ ವಿಚಾರವಾಗಿ ಸ್ಪಷ್ಟನೆ ನೀಡಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ವಾದ ದಾಖಲಿಸಿಕೊಂಡ ಪೀಠ, ನಾಳೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆಯನ್ನು ಹೆಚ್ಚಿಸಬೇಕು. ಇಲ್ಲದಿದ್ದರೆ ನ್ಯಾಯಾಲಯವೇ ಈ ಸಂಬಂಧ ಆದೇಶ ಹೊರಡಿಸಲಿದೆ. ಹೀಗಾಗಿ ಕೇಂದ್ರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿ, ವಿಚಾರಣೆಯನ್ನು ನಾಳೆ ಬೆಳಗ್ಗೆ 10.30ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು ವಾದಿಸಿ, ಕೋಲಾರದಲ್ಲಿ ಖುದ್ದು ಜಿಲ್ಲಾ ನ್ಯಾಯಾಧೀಶರಿಗೇ ಆಕ್ಸಿಜನ್ ಬೆಡ್ ಲಭ್ಯವಾಗುತ್ತಿಲ್ಲ. ಬೆಂಗಳೂರು ನಗರದಲ್ಲಿ 10ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಸಮರ್ಪಕ ಆಕ್ಸಿಜನ್ ಪೂರೈಕೆ ಇಲ್ಲವೆಂದು ಆರೋಪಿಸಿದರು. ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಮಾಹಿತಿ ನೀಡಿ, ಪಾಲಿಕೆ ವ್ಯಾಪ್ತಿಯಲ್ಲಿ ಈಗಿರುವುದರ ಜತೆಗೆ 268 ಹೆಚ್​ಡಿಯು ಬೆಡ್​ಗಳು, 57 ಐಸಿಯು ಬೆಡ್​ಗಳು, 54 ಐಸಿಯು ವೆಂಟಿಲೇಟರ್ ಬೆಡ್​ಗಳನ್ನು ಹೆಚ್ಚಿಸಲಾಗಿದೆ ಎಂದರು. ರಾಜ್ಯ ಸರ್ಕಾರದ ಪರ ವಕೀಲರು ಮಾಹಿತಿ ನೀಡಿ ರಾಜ್ಯಕ್ಕೆ ಪ್ರತಿದಿನ 44 ಸಾವಿರ ಬಾಟಲ್ ರೆಮ್​ಡಿಸಿವಿರ್ ಬೇಕಾಗಿದ್ದು, ಕೇಂದ್ರ ಸರ್ಕಾರ ಏಪ್ರಿಲ್ 21ರಿಂದ ಮೇ 9ರವರೆಗೆ ಒಟ್ಟು 3,01,330 ಬಾಟಲ್ ಪೂರೈಸಿದೆ ಎಂದು ವಿವರಿಸಿದರು.

ಓದಿ: ತುರ್ತು ವಿಶೇಷ ಸಚಿವ ಸಂಪುಟ ಸಭೆ ಆರಂಭ: ಆಕ್ಸಿಜನ್ ಕೊರತೆ, ಕರ್ಪ್ಯೂ ಮುಂದುವರಿಕೆ ಬಗ್ಗೆ ಗಂಭೀರ ಚರ್ಚೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.