ETV Bharat / state

ಎಂಟಿಬಿ, ಶಂಕರ್, ವಿಶ್ವನಾಥ್​ಗೆ ಸಚಿವ ಸ್ಥಾನ ನೀಡದಂತೆ ಹೈಕೋರ್ಟ್​​ಗೆ ಅರ್ಜಿ: ಅ. 21ಕ್ಕೆ ನಿರ್ಧಾರ

ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್‌ ಯಾವುದೇ ಸಮಯದಲ್ಲಾದರೂ ಅವರು ಸಚಿವ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಇದೆ. ಈ ಮೂವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಂಡಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಉಲ್ಲಂಘನೆಯಾಗಲಿದೆ. ಆದ್ದರಿಂದ ಈ ಮೂವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದಂತೆ ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯಪಾಲರಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಮಧ್ಯಂತರ ಅರ್ಜಿಯನ್ನು ಅ. 21ರಂದು ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ಮುಂದೂಡಿತು.

author img

By

Published : Oct 5, 2020, 7:09 PM IST

High Court postponed interim application hearing
ಹೈಕೋರ್ಟ್​

ಬೆಂಗಳೂರು : ನೂತನ ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಹೆಚ್​. ವಿಶ್ವನಾಥ್ ಹಾಗೂ ಆರ್. ಶಂಕರ್ ಅವರಿಗೆ ಸಚಿವ ಸ್ಥಾನ ನೀಡದಂತೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ಮಧ್ಯಂತರ ಮನವಿಯನ್ನು ಅಕ್ಬೋಬರ್ 21 ರಂದು ನಿರ್ಧರಿಸುವುದಾಗಿ ಹೈಕೋರ್ಟ್​​ ತಿಳಿಸಿದೆ.

ವಿಧಾನ ಪರಿಷತ್​ಗೆ ನಾಮ ನಿರ್ದೇಶನಗೊಂಡಿರುವ ಮಾಜಿ ಸಚಿವರುಗಳಾದ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್‌ ಅವರಿಗೆ ಸಚಿವ ಸ್ಥಾನ ನೀಡದಂತೆ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಬೆಂಗಳೂರಿನ ವಕೀಲ ಎಎಸ್ ಹರೀಶ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ, ಅರ್ಜಿದಾರರ ಪರ ಸುಪ್ರೀಂಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದಿಸಿ, ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಈ ಮೂವರು ಚುನಾವಣೆಯಲ್ಲಿ ಗೆದ್ದು ಸಚಿವ ಸ್ಥಾನ ಪಡೆಯಬೇಕಿತ್ತು. ಆದರೆ, ಇವರು ಹಿಂಬಾಗಿಲ ಮೂಲಕ ಹುದ್ದೆ ಪಡೆದುಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಯಾವುದೇ ಸಮಯದಲ್ಲಾದರೂ ಅವರು ಸಚಿವ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಮಧ್ಯಂತರ ಮನವಿಯನ್ನು ಶೀಘ್ರವಾಗಿ ಪರಿಗಣಿಸಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿ ಇತ್ಯರ್ಥ ಆಗುವವರೆಗೆ ಸಚಿವ ಸ್ಥಾನ ನೀಡದಂತೆ ಆದೇಶ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಅ. 21ರಂದು ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿತು.

ಇದೇ ವೇಳೆ, ಸರ್ಕಾರದ ಪರ ಹಾಗೂ ಎಂಟಿಬಿ ಮತ್ತು ಆರ್ ಶಂಕರ್ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ನ್ಯಾಯಾಲಯದ ಸೂಚನೆಯಂತೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದರು. ಇನ್ನು, ಈ ಮೂವರು ನಾಯಕರಿಗೆ ಸಚಿವ ಸ್ಥಾನ ನೀಡದಂತೆ ನಿರ್ದೇಶಿಸಲು ಕೋರಿ ಜಿ. ಮೋಹನ್ ಕುಮಾರ್ ಎಂಬವರು ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆಯೂ ನ್ಯಾಯಾಲಯ ಸೂಚಿಸಿತು. ಹಾಗೆಯೇ, ಈ ಅರ್ಜಿಯನ್ನು ಮೊದಲ ಅರ್ಜಿಯೊಂದಿಗೆ ವಿಚಾರಣೆ ನಡೆಸುವುದಾಗಿ ಸ್ಪಷ್ಟಪಡಿಸಿತು.

ಅರ್ಜಿದಾರರ ಕೋರಿಕೆ : ಮೂವರು ಸಚಿವಾಕಾಂಕ್ಷಿಗಳು ವಿಧಾನಪರಿಷತ್ತಿಗೆ ಆಯ್ಕೆಯಾಗಿರುವುದರಿಂದ ಅವರಿಗೆ ಸಚಿವ ಸ್ಥಾನ ನೀಡಬಾರದು. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಇವರು ಸಚಿವರಾಗಬೇಕಿದ್ದಲ್ಲಿ ಚುನಾವಣೆಯಲ್ಲಿ ಗೆಲ್ಲಬೇಕಿತ್ತು. ಹೀಗಾಗಿ ವಿಧಾನಪರಿಷತ್ತಿಗೆ ಪ್ರವೇಶಿಸುವುದನ್ನು ಮರು ಆಯ್ಕೆ ಎಂದು ಪರಿಗಣಿಸಲಾಗದು. ಒಂದು ವೇಳೆ ಈ ಮೂವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಂಡಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಉಲ್ಲಂಘನೆಯಾಗಲಿದೆ. ಆದ್ದರಿಂದ ಈ ಮೂವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದಂತೆ ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯಪಾಲರಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.