ನಟ ಅಕ್ಷಯ್‌ಕುಮಾರ್ ಹಾಗೂ ಕರೀನಾ ಕಪೂರ್ ಅಭಿನಯದ ಗುಡ್ ನ್ಯೂಸ್ ಹಿಂದಿ ಚಲನಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಜನವರಿ ಮೊದಲ ವಾರಕ್ಕೆ ಹೈಕೋರ್ಟ್ ಮುಂದೂಡಿದೆ.
ಗುಡ್ನ್ಯೂಸ್ ಸಿನಿಮಾಗೆ ತಡೆ ನೀಡುವಂತೆ ಸಮೀಮ್ ರಝಾ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ಇಂದು ನಡೆಯಿತು. ಇನ್ನು ಅರ್ಜಿದಾರರ ಪರ ವಕೀಲರು ನ್ಯಾಯಾಲಯದಲ್ಲಿ ವಾದಮಾಡಿ, ನಟ ಅಕ್ಷಯ್‌ಕುಮಾರ್ ಹಾಗೂ ಕರೀನಾ ಕಪೂರ್ ಅಭಿನಯದ ಗುಡ್ ನ್ಯೂಸ್ ಹಿಂದಿ ಚಲನಚಿತ್ರದಲ್ಲಿ ಕೃತಕ ಗರ್ಭಧಾರಣೆ ಚಿಕಿತ್ಸೆ ಮಾಡುವುದೇ ಚಿತ್ರದ ಕಥಾವಸ್ತುವಾಗಿದೆ. ಇಂದಿರಾ ಐವಿಎಫ್ ಎಂಬ ಸಂಸ್ಥೆ ಹೊರತುಪಡಿಸಿ ಉಳಿದ ಸಂಸ್ಥೆಗಳಲ್ಲಿ ಸರಿಯಾದ ಚಿಕಿತ್ಸೆ ದೊರೆಯುವುದಿಲ್ಲ ಎನ್ನುವ ಅರ್ಥ ಕೊಡುವಂತೆ ಚಿತ್ರೀಕರಿಸಲಾಗಿದೆ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದರು.
ವಾದ - ಪ್ರತಿವಾದ ಆಲಿಸಿದ ನ್ಯಾಯಾಲಯ, ಜನವರಿ ಮೊದಲ ವಾರಕ್ಕೆ ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿದೆ.