ETV Bharat / state

ಲಂಚಕ್ಕೆ ಬೇಡಿಕೆ ಆರೋಪ : ಐಪಿಎಸ್ ಅಧಿಕಾರಿ ಅಲೋಕ್‌ ಕುಮಾರ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್ - ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್

High Court quashed case against Alok Kumar: ಗಲಾಟೆ ಪ್ರಕರಣ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

high-court-quashed-case-against-ips-officer-alok-kumar
ಐಪಿಎಸ್ ಅಧಿಕಾರಿ ಅಲೋಕ್‌ ಕುಮಾರ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
author img

By ETV Bharat Karnataka Team

Published : Sep 14, 2023, 2:17 PM IST

Updated : Sep 14, 2023, 2:57 PM IST

ಬೆಂಗಳೂರು: ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆ ವ್ಯಾಪ್ತಿ ಆರೆಂಜ್ ಬಾರ್‌ನ ಮಾಲೀಕರು ಮತ್ತು ಗ್ರಾಹಕರ ನಡುವೆ ನಡೆದಿದ್ದ ಗಲಾಟೆ ಸಂಬಂಧ ಪ್ರಕರಣ ಮುಕ್ತಾಯಗೊಳಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿ ಆದೇಶ ಹೊರಡಿಸಿದೆ.

ತಮ್ಮ ವಿರುದ್ಧದ ಪ್ರಕರಣ ಮತ್ತು ಈ ಸಂಬಂಧ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅರ್ಜಿದಾರ ಐಪಿಎಸ್ ಅಧಿಕಾರಿಯ ವಿರುದ್ಧ ವಿಚಾರಣೆಗೆ ಪರಿಗಣಿಸುವುದಕ್ಕಾಗಿ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೇ ಲೋಕಾಯುಕ್ತ ವಿಚಾರಣಾ ನ್ಯಾಯಾಲಯವು ಸಂಜ್ಞೆಯನ್ನು ಪರಿಗಣಿಸಿದೆ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್​​ ಪ್ರಕರಣ ರದ್ದುಪಡಿಸಿದೆ. ಆದರೆ, ಅರ್ಜಿದಾರರ ವಿರುದ್ಧ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದ ಬಳಿಕ ವಿಚಾರಣೆಗೆ ಪರಿಗಣಿಸಲು ವಿಚಾರಣಾ ನ್ಯಾಯಾಲಯ ಸ್ವತಂತ್ರವಾಗಿರಲಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಅಲ್ಲದೆ, ಆರೋಪ ಸಂಬಂಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ ಅರ್ಜಿದಾರ ಅಲೋಕ್ ಕುಮಾರ್ ಅವರ ಹೆಸರು ಉಲ್ಲೇಖವಾಗಿಲ್ಲ. ಜೊತೆಗೆ, ಬಾರ್‌ನಲ್ಲಿ ನಡೆದ ಗಲಾಟೆ ಹಾಗೂ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಬಿ ವರದಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಪ್ರಕರಣ ರದ್ದು ಮಾಡಲಾಗುತ್ತಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಹೇಳಿದೆ.

ಪ್ರಕರಣದ ಹಿನ್ನೆಲೆ: ರೌಡಿಶೀಟರ್ ಆಗಿದ್ದ ಬಿ ಎಂ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಮತ್ತವರ ಆಪ್ತರು ವೈಯಾಲಿ ಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಆರೆಂಜ್ ಬಾರ್‌ನಲ್ಲಿ ಮದ್ಯ ಸೇವಿಸುವ ಸಂದರ್ಭದಲ್ಲಿ ಗಲಾಟೆ ನಡೆದಿತ್ತು. ಈ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಪ್ರಕರಣವನ್ನು ಮುಕ್ತಾಯಗೊಳಿಸಲು ವೈಯಾಲಿ ಕಾವಲ್‌ನ ಪೊಲೀಸ್ ಅಧಿಕಾರಿಗಳು ಪ್ರಾರಂಭದಲ್ಲಿ 5 ಲಕ್ಷ ರೂ. ಬಳಿಕ ಒಂದು ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂಬುದಾಗಿ ಫೈಟರ್ ರವಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್​​ ಸಲ್ಲಿಸಿದ್ದರು. ಈ ಬಿ ರಿಪೋರ್ಟ್ ತಿರಸ್ಕರಿಸಿದ್ದ ವಿಶೇಷ ನ್ಯಾಯಾಲಯವು ಅಲೋಕ್ ಕುಮಾರ್ ವಿರುದ್ಧ ಸಂಜ್ಞೆಯನ್ನು ಪರಿಗಣಿಸಿ ವಿಚಾರಣೆ ಮುಂದುವರೆಸಿತ್ತು. ಇದನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಮೃತ ವ್ಯಕ್ತಿಯ ಸಹೋದರಿಗೆ ಅನುಕಂಪದ ಉದ್ಯೋಗ ನೀಡಲಾಗದು: ಹೈಕೋರ್ಟ್

Last Updated : Sep 14, 2023, 2:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.