ETV Bharat / state

ಪೂರ್ವಾನುಮತಿ ಇಲ್ಲದೆ ಚುನಾವಣಾ ಪ್ರಚಾರ: ಸಂಸದ ಡಿ ಕೆ ಸುರೇಶ್​ ವಿರುದ್ಧದ ಪ್ರಕರಣ ರದ್ದು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸಂಸದ ಡಿ ಕೆ ಸುರೇಶ್ ವಿರುದ್ಧದ ಪ್ರಕರಣ ಮತ್ತು ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

high-court-quashed-case-against-mp-dk-suresh
ಪೂರ್ವಾನುಮತಿ ಇಲ್ಲದೆ ಚುನಾವಣಾ ಪ್ರಚಾರ : ಸಂಸದ ಡಿ ಕೆ ಸುರೇಶ್​ ವಿರುದ್ಧದ ಪ್ರಕರಣ ರದ್ದು
author img

By

Published : Jun 2, 2023, 9:03 PM IST

ಬೆಂಗಳೂರು : ಕಳೆದ ಸಂಸತ್ ಚುನಾವಣೆ ವೇಳೆ ಶಿವಮೊಗ್ಗದಲ್ಲಿ ಚುನಾವಣಾಧಿಕಾರಿಯಿಂದ ಪೂರ್ವಾನುಮತಿ ಪಡೆಯದೇ ಚುನಾವಣಾ ಪ್ರಚಾರ ನಡೆಸಿದ ಆರೋಪ ಸಂಬಂಧ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ವಿರುದ್ಧದ ಪ್ರಕರಣ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ತಮ್ಮ ವಿರುದ್ಧದ ಪ್ರಕರಣ ಮತ್ತು ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಸಂಸದ ಡಿ.ಕೆ. ಸುರೇಶ್​ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದ ವಕೀಲರ ಅರ್ನವ್​ ಬಾಗಲವಾಡಿ, ''ಇದೇ ಪ್ರಕರಣದ ಮೊದಲ ಆರೋಪಿಯ ವಿರುದ್ಧದ ಪ್ರಕರಣವನ್ನು ಈ ಹಿಂದೆ ಹೈಕೋರ್ಟ್ ನ್ಯಾಯಪೀಠ ರದ್ದುಪಡಿಸಿ ಆದೇಶಿಸಿದೆ. ಅರ್ಜಿದಾರರು ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದು ಮಾಡಬೇಕು'' ಎಂದು ಮನವಿ ಮಾಡಿದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಪ್ರಕರಣ ಮತ್ತು ಅದರ ಕುರಿತಂತೆ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನೂ ರದ್ದುಗೊಳಿಸಿ ಆದೇಶಿಸಿತು.

ಪ್ರಕರಣದ ಹಿನ್ನೆಲೆ ಏನು ? : 2019ರ ಏಪ್ರಿಲ್ 20 ರಂದು ಸಂಜೆ 5 ಗಂಟೆ ಸಮಯದಲ್ಲಿ ಹಿರಿಯೂರು ಬಯಲು ರಂಗಮಂದಿರ ಎದುರು ಡಿ.ಕೆ. ಸುರೇಶ್ ಅವರು ತೆರೆದ ವಾಹನದ ಮೂಲಕ ಚುನಾವಣಾ ಪ್ರಚಾರ ಮತ್ತು ಮೆರವಣಿಗೆ ನಡೆಸುತ್ತಿದ್ದರು. ಅದಕ್ಕಾಗಿ ಚುನಾವಣಾ ಅಧಿಕಾರಿಯಿಂದ ಪೂರ್ವಾನುಮತಿ ಪಡೆದಿರಲಿಲ್ಲ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಚಕ್ಷಣಾ ದಳದ ಅಧಿಕಾರಿಯಾಗಿದ್ದ ಎಂ. ಈಶ್ವರಪ್ಪ ಅವರು ಭದ್ರಾವತಿ ಪೇಪರ್ ಟೌನ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಮಾಹಿತಿಯನ್ನು ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ರವಾನಿಸಿದ್ದರು. ನಂತರ ಕೋರ್ಟ್ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಅದರಂತೆ ಗಂಭೀರ ಸ್ವರೂಪವಲ್ಲದ ಅಪರಾಧ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು, ತನಿಖೆ ಪೂರ್ಣಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2020ರ ಸೆಪ್ಟೆಂಬರ್​ 1ರಂದು ದೊಷಾರೋಪಣಾಪಟ್ಟಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ್ದ ವಿಶೇಷ ನ್ಯಾಯಾಲಯ, 2021ರ ಸೆಪ್ಟೆಂಬರ್ 21ರಂದು ಡಿ.ಕೆ. ಸುರೇಶ್‌ಗೆ ಸಮನ್ಸ್ ಜಾರಿಗೊಳಿಸಿತ್ತು. ಆ ಆದೇಶ ರದ್ದು ಕೋರಿ ಡಿ.ಕೆ. ಸುರೇಶ್ ಹೈಕೋರ್ಟ್‌ಗೆ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಕರಣ ರದ್ದುಪಡಿಸಿದೆ.

ಇದನ್ನೂ ಓದಿ : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿೆ ಶಿವಕುಮಾರ್​ ವಿರುದ್ಧದ ತನಿಖೆಗೆ ನೀಡಿದ್ದ ತಡೆ ವಿಸ್ತರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.