ETV Bharat / state

ಅಪ್ರಾಪ್ತೆ ಪತ್ನಿ ಗರ್ಭಿಣಿಯನ್ನಾಗಿಸಿದ್ದ ಆರೋಪ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ - ಈಟಿವಿ ಭಾರತ ಕನ್ನಡ

ತನ್ನ ಅಪ್ರಾಪ್ತೆ ಪತ್ನಿಯನ್ನು ಗರ್ಭಿಣಿಯನ್ನಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

KN_BNG_
ಹೈಕೋರ್ಟ್
author img

By

Published : Nov 4, 2022, 9:33 PM IST

ಬೆಂಗಳೂರು: ತನ್ನ ಅಪ್ರಾಪ್ತ ಪತ್ನಿ ಗರ್ಭಿಣಿ ಮಾಡಿದ್ದ ಮುಸ್ಲಿಂ ವ್ಯಕ್ತಿಯ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ಕುರಿತು ಸಂತ್ರಸ್ತೆ ಹಾಗೂ ಆರೋಪಿ ರಾಜಿ ಆಗಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಪ್ರಕರಣವನ್ನು ಮುಕ್ತಾಯಗೊಳಿಸಿದೆ.

ಪ್ರಕರಣ ರದ್ದು ಕೋರಿ ಅಪ್ರಾಪ್ತೆಯ ಪತಿ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾ.ಕೆ.ನಟರಾಜನ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಉಭಯ ಪಕ್ಷಗಾರರು ಸಲ್ಲಿಸಿರುವ ಜಂಟಿ ಜ್ಞಾನಪನ ಪತ್ರದಲ್ಲಿ ವ್ಯಾಜ್ಯವನ್ನು ಇತ್ಯರ್ಥಪಡಿಸಿಕೊಂಡಿರುವುದಾಗಿ ತಿಳಿಸಿದರು.

ಹೀಗಾಗಿ ಪ್ರಕರಣದ ಸನ್ನಿವೇಶ ಮತ್ತು ದಾಖಲೆಗಳನ್ನು ಪರಿಗಣಿಸಿದರೆ ಪ್ರಕರಣವನ್ನು ಮುಂದುವರಿಸುವುದರಲ್ಲಿ ಅರ್ಥವಿಲ್ಲ. ಜತೆಗೆ ಸಂತ್ರಸ್ತೆ ಬೇರೆ ಪ್ರತಿಕೂಲ ಸಾಕ್ಷಿಯಾಗಿರುವ ಹಿನ್ನೆಲೆಯಲ್ಲಿ ತನಿಖೆ ನಡೆದರೂ ಅದು ವ್ಯರ್ಥವಾಗುತ್ತದೆ. ಹಾಗಾಗಿ ಪ್ರಕರಣವನ್ನು ರದ್ದುಗೊಳಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮೊಹಮ್ಮದ್ ಸಮೀಮ್ ಮತ್ತು ಸ್ಟೇಟ್ ಆಫ್ ಹರಿಯಾಣ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಪರಿಗಣಿಸಿ ಈ ಆದೇಶ ಮಾಡಿದೆ. ಅದರಂತೆ ಅರ್ಜಿದಾರರ ವಿರುದ್ಧದ ಪೋಕ್ಸೋ ಕಾಯಿದೆ ಸೆಕ್ಷನ್ 5(ಎಲ್), 6 ಮತ್ತು 17, ಐಪಿಸಿ ಸೆಕ್ಷನ್ 376, 376(2)(ಎನ್) ಮತ್ತು ಬಾಲ್ಯ ವಿವಾಹ ನಿರ್ಬಂಧ ಕಾಯಿದೆ ಸೆಕ್ಷನ್ 9 ಮತ್ತು 11ರಡಿ ದಾಖಲಾಗಿದ್ದ ಪ್ರಕರಣವನ್ನು ರದ್ದು ಮಾಡಿದೆ.

ಪ್ರಕರಣದ ಹಿನ್ನೆಲೆ: ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ವೈದ್ಯಕೀಯ ತಪಾಸಣೆಗೆ ಹೋಗಿದ್ದಾಗ 17 ವರ್ಷ 2 ತಿಂಗಳಾಗಿರುವ ಅಪ್ರಾಪ್ತೆ ಗರ್ಭಿಣಿಯಾಗಿರುವ ಅಂಶ ಬೆಳಕಿಗೆ ಬಂದಿತ್ತು. ಆ ಕುರಿತಂತೆ ಚಂದ್ರಲೇಔಟ್ ಪೊಲೀಸರು ಆರೋಪಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಆದರೆ ಆರೋಪಿ ತಾನು ತಪ್ಪೆಸಗಿಲ್ಲ, ಮೊಹಮದ್ದೀಯನ್ ಕಾನೂನು ಪ್ರಕಾರ 15 ವರ್ಷ ಆದ ನಂತರ ಬಾಲಕಿಯನ್ನು ಮದುವೆಯಾಗಬಹುದು ಅದರಂತೆ ನಾನು ಮದುವೆಯಾಗಿದ್ದೆ.

ಇದೀಗ ಸಂತ್ರಸ್ತೆ ವಯಸ್ಕಳಾಗಿದ್ದಾಳೆ ಮತ್ತು ಮಗುವಿಗೆ ಜನ್ಮ ನೀಡಿದ್ದಾರೆ. ಆ ಮಗುವಿಗೆ ಈಗ ಎರಡು ತಿಂಗಳು. ಇಬ್ಬರೂ ಜೊತೆಯಾಗಿ ಬದುಕುತ್ತಿದ್ದೇವೆ. ಹಾಗಾಗಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಗೂಗಲ್ ವಿಮರ್ಶೆಗಳನ್ನು ಸಾಕ್ಷ್ಯಗಳನ್ನಾಗಿ ಪರಿಗಣಿಸಲಾಗದು: ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.