ಬೆಂಗಳೂರು: ಖಾಸಗಿ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ಕಟ್ಟುನಿಟ್ಟಿನ ಕ್ರಮ ಪಾಲಿಸುವ ದೃಷ್ಟಿಯಿಂದ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ ಕಡ್ಡಾಯಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ್ದ ಎರಡು ಪ್ರತ್ಯೇಕ ಸುತ್ತೋಲೆಗಳನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಹೊರಡಿಸಿದ ಸುತ್ತೋಲೆಗಳನ್ನು ಪ್ರಶ್ನಿಸಿ ಪ್ರಜ್ಞಾ ಎಜುಕೇಷನ್ ಸೊಸೈಟಿ ಸೇರಿದಂತೆ 22 ಖಾಸಗಿ ಶಿಕ್ಷಣ ಸಂಸ್ಥೆಗಳು ತಕರಾರು ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಕಿ ಅವರಿದ್ದ ನ್ಯಾಯಪೀಠ ವಿಚಾರಣೆಗೊಳಪಡಿಸಿ ಈ ಆದೇಶ ನೀಡಿದೆ.
ಅಲ್ಲದೇ ಸಾರ್ವಜನಿಕ ಶಿಕ್ಷಣ ಇಲಾಖೆ 2020ರ ನ.10ರಂದು ಮತ್ತು 2021ರ ಮಾ.10ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯೂ 2020-21ಕ್ಕಿಂತ ಮೊದಲು ಕಾರ್ಯನಿರ್ವಹಿಸುತ್ತಿದ್ದ ರಾಜ್ಯ ಪಠ್ಯಕ್ರಮದ ಖಾಸಗಿ ಶಾಲೆಗಳಿಗೆ ಸರ್ಕಾರದ ಸುತ್ತೋಲೆಗಳು ಅನ್ವಯಿಸುವುದಿಲ್ಲ ಎಂದು ತಿಳಿಸಿ, ಎರಡೂ ಸುತ್ತೋಲೆಗಳನ್ನು ರದ್ದು ಪಡಿಸಿದೆ. ಅರ್ಜಿಯ ಸಂಬಂಧದ ವಿಸ್ತೃತ ಆದೇಶವು ಇನ್ನಷ್ಟು ಬಿಡುಗಡೆಯಾಗಬೇಕಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ ಏನು ?: ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿ, ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಕಡ್ಡಾಯವಾಗಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಆದಕ್ಕೆ ಸಂಬಂಧಿಸಿದ ಪ್ರಮಾಣಪತ್ರ ಪಡೆದುಕೊಳ್ಳಬೇಕು. ಜೊತೆಗೆ ರಾಷ್ಟ್ರೀಯ ಕಟ್ಟಡ ಸಂಹಿತೆ ಪ್ರಕಾರ ಎಂಜಿನಿಯರ್ ಗಳಿಂದ ಮೌಲ್ಯಮಾಪನ ಮಾಡಿಸಬೇಕು ಎಂದು ರಾಜ್ಯ ಸರ್ಕಾರ ಎರಡು ಸುತ್ತೋಲೆ ಹೊರಡಿಸಿತು.
ಆದರೆ, ಈ ನಿಯಯ ಸರ್ಕಾರಿ ಶಾಲೆಗಳಿಗೆ ಅನ್ವಯವಾಗುವುದಿಲ್ಲ ಸುತ್ತೋಲೆಯಲ್ಲಿ ಹೇಳಿತ್ತು. ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಈ ಬೆಳವಣಿಗೆ ಶಾಲೆಗಳಲ್ಲಿ ತಾರತಮ್ಯ ವೆಸಗಿದೆ ಎಂದು ತಕರಾರು ಅರ್ಜಿ ಸಲ್ಲಿಸಿ, ಹೈಕೋರ್ಟ್ಗೆ ಮನವಿ ಮಾಡಿದ್ದವು.
ಇದನ್ನೂಓದಿ:ಮೈಸೂರು ವಿವಿ ಕುಲಪತಿಯಾಗಿ ಲೋಕ್ನಾಥ್ ಮುಂದುವರಿಕೆಗೆ ಹೈಕೋರ್ಟ್ ಸೂಚನೆ