ETV Bharat / state

ದೇವರಾಜ ಅರಸು ಶಿಕ್ಷಣ ಟ್ರಸ್ಟ್‌​ನ ಕಾರ್ಯದರ್ಶಿ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

author img

By

Published : Jan 19, 2023, 3:35 PM IST

ಭಾರತೀಯ ವೈದ್ಯಕೀಯ ಮಂಡಳಿಯ ಪರಿಶೀಲನಾ ಸಮಿತಿ ಸದಸ್ಯರಿಗೆ ಲಂಚ ನೀಡಿದ ಆರೋಪ - ದೇವರಾಜ ಅರಸು ಹಿಂದಳಿದ ವರ್ಗಗಳ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ವಿರುದ್ಧ ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣ ​ ರದ್ದುಗೊಳಿಸಿದ ಹೈಕೋರ್ಟ್.

high-court-quashed case
ಹೈಕೋರ್ಟ್

ಬೆಂಗಳೂರು: ಕೋಲಾರದ ಹಿಂದಳಿದ ವರ್ಗಗಳ ದೇವರಾಜ ಅರಸು ಶಿಕ್ಷಣ ಟ್ರಸ್ಟ್‌ನ ಅಧೀನದ ವೈದ್ಯಕೀಯ ಕಾಲೇಜಿನ ವಿವಿಧ ಕೋರ್ಸ್‌ಗಳಿಗೆ ಹೆಚ್ಚಿನ ಸೀಟುಗಳ ಹಂಚಿಕೆಗೆ ಮಾಡಲು ಶಿಫಾರಸು ಮಾಡುವುದಕ್ಕಾಗಿ ಭಾರತೀಯ ವೈದ್ಯಕೀಯ ಮಂಡಳಿಯ ಪರಿಶೀಲನಾ ಸಮಿತಿ ಸದಸ್ಯರಿಗೆ ಲಂಚ ನೀಡಿದ ಆರೋಪದಲ್ಲಿ ಟ್ರಸ್ಟ್‌ನ ಕಾರ್ಯದರ್ಶಿ ಜಿ.ಎಚ್.ನಾಗರಾಜು ಅವರ ವಿರುದ್ಧ ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದು ಪಡಿಸಿ ಆದೇಶ ಮಾಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಮತ್ತು ಅದರ ಸಂಬಂಧ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಹಿಂದುಳಿದ ವರ್ಗಗಳ ದೇವರಾಜ ಅರಸು ಶಿಕ್ಷಣ ಟ್ರಸ್ಟ್ ಮತ್ತು ಅದರ ಕಾರ್ಯದರ್ಶಿ ಜಿ.ಎಚ್.ನಾಗರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ. ಅಲ್ಲದೆ, ಪ್ರಕರಣದಲ್ಲಿ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಇಬ್ಬರ ಪ್ರಾಧ್ಯಾಪಕರು ತಪಸಣಾ ಸಮಿತಿ ಸದಸ್ಯರು ಎಂದು ಎಫ್‌ಐಆರ್‌ನಲ್ಲಿ ಆರೋಪಿಸಿದ್ದು, ಈ ಇಬ್ಬರೂ ಪ್ರಾಧ್ಯಾಪಕರ ವಿರುದ್ದ ವಿಚಾರಣೆಯನ್ನು ಹೈಕೋರ್ಟ್ ಈಗಾಗಲೇ ರದ್ದುಗೊಳಿ ಆದೇಶಿಸಿದೆ. ಹೀಗಾಗಿ ಟ್ರಸ್ಟ್ ಮತ್ತು ಅದರ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಮುಂದುವರಿಸುವುದರಲ್ಲಿ ಅರ್ಥವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ ಏನು?: ಆದಾಯ ತೆರಿಗೆ ಇಲಾಖೆಯ ಮಾಹಿತಿಯ ಅನ್ವಯ ಲಂಚ ನೀಡುವುದಕ್ಕೆ ಮುಂದಾಗಿದ್ದ ಆರೋಪದಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ)2017ರ ಸೆಪ್ಟಂಬರ್‌ನಲ್ಲಿ ದೇವರಾಜ ಅರಸು ಹಿಂದಳಿದ ವರ್ಗಗಳ ಶಿಕ್ಷಣ ಟ್ರಸ್ಟ್ ಸದಸ್ಯರು ಸೇರಿದಂತೆ ಐದು ಮಂದಿಯ ವಿರುದ್ಧ ಪ್ರತಮ ವರ್ತಮಾನ ವರದಿ(ಎಫ್‌ಐಆರ್) ದಾಖಲಿಸಿಕೊಂಡಿತ್ತು. ಅಲ್ಲದೇ, ಈ ಸಂಬಂಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವೈದ್ಯಕೀಯ ಕಾಲೇಜು ಆವರಣದಲ್ಲಿ ಶೋಧ ನಡೆಸಿ ನೋಟ್ ಪ್ಯಾಡ್‌ಗಳನ್ನು ವಶಕ್ಕೆ ಪಡೆದಿದ್ದರು. ಈ ನೋಟ್ ಪ್ಯಾಡ್‌ನಲ್ಲಿ ಭಾರತೀಯ ವೈದ್ಯಕೀಯ ಮಂಡಳಿಯ ಸದಸ್ಯರಿಗೆ ಲಂಚದ ರೂಪದಲ್ಲಿ ಉಡುಗೊರೆಗಳನ್ನು ನೀಡಲಾಗುತ್ತಿದೆ ಎಂಬುದಾಗಿ ಉಲ್ಲೇಖಿಸಿದ್ದ ಅಂಶ ಬಹಿರಂಗ ಗೊಂಡಿತ್ತು.

ಸಿಬಿಐ ಸುಧೀರ್ಘ ತನಿಖೆ: ದೊರೆತಂತಹ ಮಾಹಿತಿ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಸಿಬಿಐ ಸುಧೀರ್ಘ ತನಿಖೆ ನಡೆಸಿ 2019ರಲ್ಲಿ ಆರೋಪ ಸಂಬಂಧ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ತಿಳಿಸಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ನ್ಯಾಯಾಲಯ ರದ್ದುಗೊಳಿಸಿ ಹೆಚ್ಚಿನ ತನಿಖೆ ನಡೆಸುವಂತೆ ಸೂಚನೆ ನೀಡಿತ್ತು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಿದ್ದ ಸಿಬಿಐ ಪೊಲೀಸರು, ಆರೋಪಗಳನ್ನು ಸಾಬೀತು ಮಾಡಲು ಸಾಕ್ಷಾಧಾರಗಳ ಕೊರತೆಯಿದೆ ಎಂದು ತಿಳಿಸಿ 2021ರ ಮಾರ್ಚ್ ತಿಂಗಳಲ್ಲಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಿ ರಿಪೋರ್ಟ್‌ನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ಪ್ರೀತಿಸದಿದ್ದರೆ ಆ್ಯಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದ ಆರೋಪಿಗೆ ಜಾಮೀನು ನಿರಾಕರಣೆ

ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದ ಎರಡನೇ ಬಿ ರಿಪೋರ್ಟ್‌ನ್ನು ರದ್ದು ಪಡಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆಯಡಿ ಕಾಗ್ನಿಜೆನ್ಸ್(ಸಂಜ್ಞೇಯ) ತೆಗೆದುಕೊಳ್ಳುವಂತೆ ನ್ಯಾಯಾಲಯ ನಿರ್ದೇಶನ ನೀಡಿತ್ತು. ಇದನ್ನು ಪ್ರಶ್ನಿಸಿ ಹಿಂದುಳಿದ ವರ್ಗಗಳ ದೇವರಾಜ ಅರಸು ಶಿಕ್ಷಣ ಟ್ರಸ್ಟ್ ಮತ್ತು ಅದರ ಕಾರ್ಯದರ್ಶಿ ಜಿ.ಎಚ್.ನಾಗರಾಜು ಅರ್ಜಿಯನ್ನು ಸಲ್ಲಿಸಿದ್ದರು. ಇದೀಗ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಇದೇ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿವಂಗತ ಆರ್.ಎಲ್.ಜಾಲಪ್ಪ ಅವರು ಆರೋಪಿಯಾಗಿದ್ದರು.

ಇದನ್ನೂ ಓದಿ: ಪಿಎಸ್ಐ ಹಗರಣದ ಆರೋಪಿ ಹರೀಶ್​ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.