ETV Bharat / state

ಮಾಸ್ಕ್, ಸ್ಯಾನಿಟೈಸರ್​​ನ್ನು ಅಗತ್ಯವಸ್ತು ಪಟ್ಟಿಯಿಂದ ಕೈಬಿಟ್ಟಿದ್ದೇಕೆ?: ಕೇಂದ್ರಕ್ಕೆ ಹೈಕೋರ್ಟ್ ಪ್ರಶ್ನೆ

ಎನ್-95 ಸೇರಿದಂತೆ ಇತರೆ ಮಾಸ್ಕ್ ಹಾಗೂ ಸ್ಯಾನಿಟೈಸರ್​ಗಳನ್ನು ಅಗತ್ಯ ವಸ್ತುಗಳ ಪಟ್ಟಿಯಿಂದ ಹೊರಗಿಡಲಾಗಿದೆ. ಹೀಗಾಗಿ ಇವುಗಳ ಮೇಲೆ ಬೆಲೆ ನಿಯಂತ್ರಣ ಸಹ ಇಲ್ಲ. ಇಂದರಿಂದಾಗಿ ಅಗತ್ಯ ಪ್ರಮಾಣದಲ್ಲಿ ಲಭ್ಯವೂ ಆಗುತ್ತಿಲ್ಲ.

author img

By

Published : Aug 6, 2020, 11:33 PM IST

High Court Question to Center about Mask and Sanitizer
ಹೈಕೋರ್ಟ್

ಬೆಂಗಳೂರು : ಕೊರೊನಾ ನಿಯಂತ್ರಿಸಲು ಅತ್ಯಗತ್ಯವಾಗಿರುವ ಮಾಸ್ಕ್ ಮತ್ತು ಸ್ಯಾನಿಟೈಸರ್​ಗಳನ್ನು "ಅವಶ್ಯಕ ವಸ್ತುಗಳ'' ಪಟ್ಟಿಯಿಂದ ಹೊರಗಿಟ್ಟಿರುವುದೇಕೆ ಎಂದು ಕೇಂದ್ರ ಸರ್ಕಾರಕ್ಕೆ ಪ್ರಶ್ನಿಸಿರುವ ಹೈಕೋರ್ಟ್, ಕೂಡಲೇ ಇವುಗಳನ್ನು ಮರು ಸೇರ್ಪಡೆಗೊಳಿಸುವಂತೆ ತಾಕೀತು ಮಾಡಿದೆ.

ಅನಿಯಂತ್ರಿತ ಬೆಲೆಗಳಿಗೆ ಮಾರಾಟವಾಗುತ್ತಿರುವ ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್​ಗಳ ಖರೀದಿಗೆ ದರ ನಿಗದಿ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಶ್ರೀಧರ್ ಪ್ರಭು ವಾದಿಸಿ, ಎನ್-95 ಸೇರಿದಂತೆ ಇತರೆ ಮಾಸ್ಕ್ ಹಾಗೂ ಸ್ಯಾನಿಟೈಸರ್​ಗಳನ್ನು ಅಗತ್ಯ ವಸ್ತುಗಳ ಪಟ್ಟಿಯಿಂದ ಹೊರಗಿಡಲಾಗಿದೆ. ಹೀಗಾಗಿ ಇವುಗಳ ಮೇಲೆ ಬೆಲೆ ನಿಯಂತ್ರಣ ಸಹ ಇಲ್ಲ. ಇಂದರಿಂದಾಗಿ ಅಗತ್ಯ ಪ್ರಮಾಣದಲ್ಲಿ ಲಭ್ಯವೂ ಆಗುತ್ತಿಲ್ಲ ಎಂದು ಪೀಠಕ್ಕೆ ವಿವರಿಸಿದರು.

ಇದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ನರಗುಂದ, ಎನ್-95 ಮಾಸ್ಕ್, ಸ್ಯಾನಿಟೈಸರ್​ಗಳ ಬೆಲೆ ನಿಗದಿಯನ್ನು ಮಾರುಕಟ್ಟೆಯ ವಿವೇಚನೆಗೆ ಬಿಡಲಾಗಿದೆ. ಮಾಸ್ಕ್, ಸ್ಯಾನಿಟೈಸರ್ ಅಭಾವದ ಬಗ್ಗೆ ಯಾವುದೇ ವರದಿ ಇಲ್ಲದ ಹಿನ್ನೆಲೆಯಲ್ಲಿ ಇವನ್ನು ಅಗತ್ಯ ವಸ್ತುಗಳ ಪಟ್ಟಿಯಲ್ಲಿ ಸೇರಿಸಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಮಾಸ್ಕ್ ಹಾಗೂ ಸ್ಯಾನಿಟೈಸರ್​ಗಳನ್ನು ಅಗತ್ಯ ವಸ್ತುಗಳ ಪಟ್ಟಿಯಲ್ಲಿ ಮರು ಸೇರ್ಪಡೆಗೊಳಿಸುವ ಬಗ್ಗೆ ಕೇಂದ್ರ ಸರ್ಕಾರದ ಸಕ್ಷಮ ಅಧಿಕಾರಿಯಿಂದ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿತು. ಅಲ್ಲದೇ ರಾಜ್ಯದಲ್ಲಿ ಮಾಸ್ಕ್, ಸ್ಯಾನಿಟೈಸರ್​ಗೆ ದರ ನಿಗದಿ ಇದೆಯೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಪೀಠ, ರಾಜ್ಯ ಸರ್ಕಾರ ಯಾವ ಬೆಲೆಗೆ ಇವುಗಳನ್ನು ಖರೀದಿ ಮಾಡುತ್ತಿದೆ ಮತ್ತು ಲಭ್ಯತೆ ಎಷ್ಟಿದೆ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.