ETV Bharat / state

ಕೃಷಿ ಉತ್ಪನ್ನಗಳಿಗೆ ಟೋಲ್ ವಿನಾಯಿತಿ ಸಾಧ್ಯವೇ? : ಎನ್‌ಎಚ್‌ಎಐಗೆ ಹೈಕೋರ್ಟ್‌ ಪ್ರಶ್ನೆ

ರೈತರ ಸ್ಥಿತಿಗತಿ ಕುರಿತು ಸರ್ಕಾರಕ್ಕೆ ವರದಿ ಕೇಳಿರುವ ಹೈಕೋರ್ಟ್‌, ಕೃಷಿ ಉತ್ಪನ್ನಗಳನ್ನು ಸಾಗಣೆ ಮಾಡುವ ಸಂದರ್ಭದಲ್ಲಿ ಟೋಲ್‌ ವಿನಾಯಿತಿ ನೀಡಲು ಸಾಧ್ಯವಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಿದೆ.

author img

By

Published : Apr 29, 2020, 9:50 PM IST

High Court Question to NHAI
ಕೃಷಿ ಉತ್ಪನ್ನಗಳಿಗೆ ಟೋಲ್ ವಿನಾಯಿತಿ ಸಾಧ್ಯವೇ? : ಎನ್‌ಎಚ್‌ಎಐಗೆ ಹೈಕೋರ್ಟ್‌ ಪ್ರಶ್ನೆ

ಬೆಂಗಳೂರು : ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ರೈತರ ಸ್ಥಿತಿಗತಿ ಕುರಿತು ಸರ್ಕಾರಕ್ಕೆ ವರದಿ ಕೇಳಿರುವ ಹೈಕೋರ್ಟ್‌, ಕೃಷಿ ಉತ್ಪನ್ನಗಳನ್ನು ಸಾಗಣೆ ಮಾಡುವ ಸಂದರ್ಭದಲ್ಲಿ ಟೋಲ್‌ ವಿನಾಯಿತಿ ನೀಡಲು ಸಾಧ್ಯವಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಿದೆ.

ಲಾಕ್‌ಡೌನ್‌ನಿಂದಾಗಿರುವ ಸಮಸ್ಯೆಗಳ ಕುರಿತು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಸಾಗಿಸಲು ಮತ್ತು ಮಾರಾಟ ಮಾಡಲು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಗಳಂತೆ ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು, ದಾಖಲೆಗಳನ್ನು ಹಾಜರುಪಡಿಸಲು ರೈತರಿಗೆ ವಿಪರೀತ ತ್ರಾಸಾಗುತ್ತಿದೆ ಎಂದು ಪೀಠಕ್ಕೆ ವಿವರಿಸಿದರು.

ಜತೆಗೆ ಕಾನೂನು ಪ್ರಾಧಿಕಾರದಿಂದ ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಟೋಲ್ ವಿನಾಯಿತಿ ನೀಡುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆದಿರುವ ವಿಚಾರವನ್ನು ಪೀಠದ ಗಮನಕ್ಕೆ ತಂದರು. ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಪೀಠ, ರೈತರ ಉತ್ಪನ್ನಗಳ ಸಾಗಾಟಕ್ಕೆ ಟೋಲ್ ವಿನಾಯಿತಿ ಸಾಧ್ಯವೇ ಎಂಬ ಬಗ್ಗೆ ಮೇ.5 ರೊಳಗೆ ಉತ್ತರಿಸುವಂತೆ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಿತು.

ಜತೆಗೆ ರೈತರ ಕುಂದುಕೊರತೆ ನಿವಾರಿಸಲು ಸ್ಥಳೀಯ ಹಂತದಲ್ಲಿ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಯಾವೆಲ್ಲ ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂಬುದರ ಕುರಿತು ವರದಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿತು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.